ಸುದ್ದಿಒನ್,ತುಮಕೂರು,ಮೇ.09: ಭೀಕರ ರಸ್ತೆ ಅಪಘಾತದಲ್ಲಿ ಮಂಡ್ಯ ಮೂಲದ ನಾಲ್ವರು ಪ್ರಯಾಣಿಕರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ತುಮಕೂರು ಜಿಲ್ಲೆಯ ಕುಣಿಗಲ್ ತಾಲ್ಲೂಕಿನ ಹೊನ್ನೇನಹಳ್ಳಿ ಬಳಿ ನಡೆದಿದೆ.
ಮಂಡ್ಯ ಜಿಲ್ಲೆಯಿಂದ ಹೊರಟಿದ್ದ ಆಲ್ಟೋ ಕಾರು ಕುಣಿಗಲ್ ಮಾರ್ಗವಾಗಿ ಸಂಚರಿಸುತ್ತಿತ್ತು. ಈ ವೇಳೆ ಹೊನ್ನೇನಹಳ್ಳಿ ಸಮೀಪ ರಸ್ತೆಯಲ್ಲಿದ್ದ ಗೊಬ್ಬರ ತುಂಬಿದ ಲಾರಿಗೆ ಕಾರು ಅತಿ ವೇಗವಾಗಿ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಕಾರು ಸಂಪೂರ್ಣವಾಗಿ ನಜ್ಜುಗುಜ್ಜಾಗಿದ್ದು, ಒಳಗೆ ಸಿಲುಕಿದ್ದ ನಾಲ್ವರು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ.
ಮೃತರೆಲ್ಲರೂ ಮಂಡ್ಯ ಜಿಲ್ಲೆಯ ಮೂಲದವರೆಂದು ಗುರುತಿಸಲಾಗಿದೆ.ಕುಮಾರಸ್ವಾಮಿ,ಗಾಯತ್ರಿ, ಹಾಗೂ ಕಾರು ಚಾಲಕ ಸೇರಿದಂತೆ ಒಟ್ಟು ನಾಲ್ವರು ಮೃತಪಟ್ಟಿದ್ದಾರೆ. ಘಟನಾ ಸ್ಥಳಕ್ಕೆ ಕುಣಿಗಲ್ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಸ್ಥಳೀಯ ಆಸ್ಪತ್ರೆಗೆ ರವಾನಿಸಲಾಗಿದೆ. ಕುಣಿಗಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.
















