ಲೌಕಿಕ ಸುಖ-ಸಂತೋಷ, ಆಸ್ತಿ-ಐಶ್ವರ್ಯ, ಕುಟುಂಬ ಬಂಧಗಳನ್ನು ತ್ಯಜಿಸಿ ಉದ್ಯಮಿ ದಂಪತಿ ಹಾಗೂ ಇಬ್ಬರು ಯುವತಿಯರು ಕಠಿಣ ಜೈನ ಸನ್ಯಾಸ ದೀಕ್ಷೆ ಸ್ವೀಕರಿಸಿದ್ದಾರೆ.ಈಗ ದಂಪತಿ ಕೋಟ್ಯಂತರ ರೂಪಾಯಿಯ ಹಣ-ಆಸ್ತಿ ದಾನ ಮಾಡಿ ಸನ್ಯಾಸತ್ವ ಸ್ವೀಕರಿಸಿದ್ದಾರೆ.
ಆಚಾರ್ಯ ಶ್ರೀ ಅಭಯ್ ಶೇಖರ್ ಸುರೀಶ್ವರ ಜೀ ಮಹಾರಾಜ್ ಅವರ ಸಾನ್ನಿಧ್ಯದಲ್ಲಿ ಪುಣೆಯ ಸಿಂಬಯೋಸಿಸ್ ಕಾಲೇಜಿನಲ್ಲಿ ಎಂಬಿಎ ಪದವಿ ಪಡೆದುಕೊಂಡಿರುವ ಕ್ರುನಾಲ್ ಬೇನ್ (30), ದಾವಣಗೆರೆಯ ಬಿ.ಕಾಂ ಪದವೀಧರೆ ದೀಕ್ಷಿತಾ ಬೇನ್ (28) ಸನ್ಯಾಸತ್ವದ ದೀಕ್ಷೆ ಪಡೆದುಕೊಂಡಿದ್ದಾರೆ.ದಾವಣಗೆರೆಯ ಲಲಿತ್ ಗಾರ್ಮೆಂಟ್ಸ್ನ ಮಾಲೀಕರಾದ ಭರತ್ ಜೈನ್ (52), ಪತ್ನಿ ಆರತಿ ಬೇನ್ (50) ಕೂಡ ಸನ್ಯಾಸತ್ವದ ದೀಕ್ಷೆ ಸ್ವೀಕರಿಸಿದ್ದಾರೆ.

ಸನ್ಯಾಸ ಸ್ವೀಕರಿಸುವುದು ಸುಲಭವಲ್ಲ.ಬರಿಗಾಲಿನಲ್ಲಿ ನಡೆಯಬೇಕು. ಅತಿಸೂಕ್ಷ್ಮ ಜೀವಿಗಳಿಗೆ ಹಾನಿಯಾಗದಂತೆ ನಡೆದುಕೊಳ್ಳಬೇಕು.. ಮೊಬೈಲ್, ವಾಹನ, ವಿದ್ಯುತ್ ಸೇರಿದಂತೆ ಯಾವುದೇ ಭೌತಿಕ ಸೌಲಭ್ಯಗಳನ್ನು ಬಳಸುವುದಿಲ್ಲ. ಆಹಾರವನ್ನು ಕೂಡ ನಿಯಮಿತ ವಿಧಿಗಳಂತೆ ಸ್ವೀಕರಿಸಬೇಕು.ದಾವಣಗೆರೆಯಲ್ಲಿ ನಡೆದ ಈ ದೀಕ್ಷಾ ಮಹೋತ್ಸವ ಸಾವಿರಾರು ಭಕ್ತರ ಸಮ್ಮುಖದಲ್ಲಿ ಭಾವಪೂರ್ಣ ವಾತಾವರಣದಲ್ಲಿ ನೆರವೇರಿತು.












