Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಪರೀಕ್ಷೆಯಲ್ಲಿ ರಾಜ್ಯಕ್ಕೆ ನಾಲ್ಕನೇ ಸ್ಥಾನ ಪಡೆದಿರುವುದು ಶ್ರೇಷ್ಟ ಸಾಧನೆ : ಇ.ಬಾಲಕೃಷ್ಣಪ್ಪ ಮೆಚ್ಚುಗೆ

Facebook
Twitter
Telegram
WhatsApp

ವರದಿ ಮತ್ತು ಫೋಟೋ : ಕೆ.ಎಂ.ಮುತ್ತುಸ್ವಾಮಿ ಕಣ್ಣನ್

ಮೊ : 78998 64552

ಚಿತ್ರದುರ್ಗ : ಮಕ್ಕಳ ಮಾನಸಿಕ ಸ್ಥಿತಿಗತಿಯನ್ನು ಅರ್ಥಮಾಡಿಕೊಂಡು ಶಿಕ್ಷಕರು ಶಾಲೆಗಳಲ್ಲಿ ಬೋಧಿಸಿದಾಗ ಮಾತ್ರ ಗುಣಮಟ್ಟದ ಫಲಿತಾಂಶ ಪಡೆಯಲು ಸಾಧ್ಯ. ಕಳೆದ ಮಾರ್ಚ್-ಏಪ್ರಿಲ್‍ನಲ್ಲಿ ನಡೆದ ಪರೀಕ್ಷೆಯಲ್ಲಿ ಜಿಲ್ಲೆ ರಾಜ್ಯಕ್ಕೆ ನಾಲ್ಕನೆ ಸ್ಥಾನ ಪಡೆದಿರುವುದು ಶ್ರೇಷ್ಟ ಸಾಧನೆ ಎಂದು ಅಪರ ಜಿಲ್ಲಾಧಿಕಾರಿ ಇ.ಬಾಲಕೃಷ್ಣಪ್ಪ ಮೆಚ್ಚುಗೆ ವ್ಯಕ್ತಪಡಿಸಿದರು.

ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಪ್ರೌಢಶಾಲಾ ಜಿಲ್ಲಾ ಮುಖ್ಯ ಶಿಕ್ಷಕರ ಸಂಘ, ಕರ್ನಾಟಕ ರಾಜ್ಯ ಶಿಕ್ಷಣಾಧಿಕಾರಿಗಳ ಸಂಘ ಜಿಲ್ಲಾ ಶಾಖೆ ಇವುಗಳ ಸಹಯೋಗದೊಂದಿಗೆ ಡಾನ್‍ಬೋಸ್ಕೋ ಶಾಲೆಯಲ್ಲಿ ಪ್ರೌಢಶಾಲಾ ಮುಖ್ಯ ಶಿಕ್ಷಕರುಗಳಿಗಾಗಿ ಗುರುವಾರ ಹಮ್ಮಿಕೊಳ್ಳಲಾಗಿದ್ದ ಎಸ್.ಎಸ್.ಎಲ್.ಸಿ.ಫಲಿತಾಂಶ ಸುಧಾರಣೆ ಹಾಗೂ ಕಲಿಕಾ ಚೇತರಿಕೆ ಉಪಕ್ರಮ ಕುರಿತ ಜಿಲ್ಲಾ ಮಟ್ಟದ ಶೈಕ್ಷಣಿಕ ಕಾರ್ಯಾಗಾರ ಉದ್ಗಾಟಿಸಿ ಮಾತನಾಡಿದರು.

ಎಲ್ಲಾ ಕ್ಷೇತ್ರದಲ್ಲೂ ಸ್ಪರ್ಧೆ ಹಾಸುಹೊಕ್ಕಾಗಿರುವುದರಿಂದ ಶಿಕ್ಷಕರು ತಮ್ಮ ಅನುಭವದ ಮೂಲಕ ಪ್ರಾಯೋಗಿಕವಾಗಿ ಮಕ್ಕಳಿಗೆ ಶಿಕ್ಷಣವನ್ನು ಬೋಧಿಸಿದಾಗ ಖಾಯಂ ಆಗಿ ಮಕ್ಕಳಲ್ಲಿ ಮನಸ್ಸಿನಲ್ಲಿ ಉಳಿಯುತ್ತದೆ. ಸ್ಪರ್ಧಾತ್ಮಕ ಜಗತ್ತು ಇದಾಗಿರುವುದರಿಂದ ಮಕ್ಕಳನ್ನು ಸ್ಪರ್ಧೆಗೆ ಅಣಿಗೊಳಿಸುವ ಜವಾಬ್ದಾರಿ ಶಿಕ್ಷಕರುಗಳ ಮೇಲಿದೆ ಎಂದು ಹೇಳಿದರು.

ಶಿಕ್ಷಕರುಗಳು ಅಪ್‍ಡೇಟ್ ಆಗಲು ಇಂತಹ ಕಾರ್ಯಾಗಾರಗಳು ಬೇಕು. ಇದರಿಂದ ನಿರಂತರವಾಗಿ ಕಲಿಕೆಯಲ್ಲಿ ತೊಡಗಲು ಸಹಕಾರಿಯಾಗಲಿದೆ. ಯಾವುದೇ ಒಂದು ದೇಶ ಅಭಿವೃದ್ದಿಯಾಗಿ ಪರಿವರ್ತನೆ ಕಾಣಬೇಕಾದರೆ ಶಿಕ್ಷಣವೇ ತಳಹದಿಯಾಗಬೇಕು. ಶಿಕ್ಷಣಕ್ಕೆ ಅಂತಹ ಮಹತ್ವವಿದೆ ಎಂದು ತಿಳಿಸಿದರು.

ಪ್ರಾಥಮಿಕ ಶಿಕ್ಷಣದ ನಿರ್ದೇಶಕ ಪ್ರಸನ್ನಕುಮಾರ್ ಮಾತನಾಡಿ ಸರ್ಕಾರಿ ಶಾಲೆ ಮಕ್ಕಳು ಸಾಧನೆ ಮಾಡುವುದು ಕಷ್ಟ. ಇರುವ ವ್ಯವಸ್ಥೆಯಲ್ಲಿಯೇ ಗುಣಮಟ್ಟದ ಶಿಕ್ಷಣ ನೀಡಿ ಫಲಿತಾಂಶದಲ್ಲಿ ಹೇಗೆ ಸುಧಾರಣೆ ಕಂಡುಕೊಳ್ಳಬೇಕು ಎನ್ನುವುದೇ ಶಿಕ್ಷಕರುಗಳ ಮುಂದಿರುವ ಬಹುದೊಡ್ಡ ಸವಾಲು. ಒಂದರಿಂದ ಒಂಬತ್ತನೆ ತರಗತಿವರೆಗೆ ಯಾರು ಕೇಳುವುದಿಲ್ಲ. ಮಕ್ಕಳು ಹತ್ತನೆ ತರಗತಿಗೆ ಕಾಲಿಟ್ಟಾಗಲೆ ಎಲ್ಲರ ಕಣ್ಣು ಫಲಿತಾಂಶದ ಮೇಲೆ ಬೀಳುತ್ತದೆ. ರಾಜ್ಯದ 35 ಶೈಕ್ಷಣಿಕ ಜಿಲ್ಲೆಗಳಲ್ಲಿ ಸುತ್ತಾಡಿದ್ದೇನೆ. ಚಿತ್ರದುರ್ಗ ಎಂದರೆ ಶೈಕ್ಷಣಿಕವಾಗಿ ಮುಂದುವರೆದ ಜಿಲ್ಲೆ ಎಂದು ಹೇಳಲು ಆಗುತ್ತಿರಲಿಲ್ಲ. ಬೇರೆಯವರ ಅನುಭವ ಮತ್ತು ಸಲಹೆಗಳನ್ನು ಪಡೆದುಕೊಂಡು ಶಿಕ್ಷಕರುಗಳು ಮಕ್ಕಳಿಗೆ ಪಾಠಗಳನ್ನು ಹೇಳಿದಾಗ ಒಳ್ಳೆಯ ಫಲಿತಾಂಶ ಬರುವುದು ದೊಡ್ಡದೇನಲ್ಲ ಎಂದು ಹೇಳಿದರು.

ಹತ್ತೊಂಬತ್ತು ಜಿಲ್ಲೆಗಳಲ್ಲಿ ಸೇವೆ ಸಲ್ಲಿಸಿದ್ದೇನೆ. ಗುಣಮಟ್ಟದ ಫಲಿತಾಂಶವನ್ನೇ ಎಲ್ಲರೂ ಬಯಸುವುದು ಸಹಜ. ಎಲ್ಲಾ ವ್ಯಸ್ಥೆಯಿದ್ದರೂ ಸರ್ಕಾರಿ ಶಾಲೆಗಳಲ್ಲಿ ಒಳ್ಳೆಯ ಫಲಿತಾಂಶ ಸಿಗುವುದು ಕಷ್ಟ. ವಸತಿ ಶಾಲೆಗಳಲ್ಲಿ ಫಲಿತಾಂಶ ಇನ್ನು ಕಡಿಮೆಯಿರುತ್ತದೆ. ಪ್ರತಿ ವರ್ಷವೂ ಸರ್ಕಾರಿ ಶಾಲೆಗಳಲ್ಲಿ ಕ್ರಿಯಾ ಯೋಜನೆಯನ್ನು ತಯಾರಿಸಲಾಗುವುದು. ಆಯಾ ವಿಷಯ ಶಿಕ್ಷಕರುಗಳೆ ಕ್ರಿಯಾ ಯೋಜನೆಯನ್ನು ಸಿದ್ದಪಡಿಸಬೇಕು. ಕ್ರಿಯಾ ಯೋಜನೆ ಜೊತೆ ಕಠಿಣ ಪರಿಶ್ರಮ ಹಾಕಿದಾಗ ಮಾತ್ರ ಗುಣಮಟ್ಟದ ಫಲಿತಾಂಶ ಬರಲು ಸಾಧ್ಯ. ಶಿಕ್ಷಕರ ಆಶೋತ್ತರಗಳನ್ನು ಇಲಾಖೆ ಬೆಂಬಲಿಸುತ್ತಿಲ್ಲ. ಚೌಕಟ್ಟಿನ ಪರಿಧಿಯನ್ನು ವಿಧಿಸಿದೆ. ಇದು ಸರಿಯಲ್ಲ. ಮಕ್ಕಳಿಗೆ ಎಳೆ ಎಳೆಯಾಗಿ ಶಿಕ್ಷಕರುಗಳು ಹೇಳಿಕೊಟ್ಟು ಪರೀಕ್ಷೆಗೆ ಸಿದ್ದಗೊಳಿಸಬೇಕು ಎಂದು ತಿಳಿಸಿದರು.

ಅಂಕ ಗಳಿಕೆಗಷ್ಟೆ ಮಕ್ಕಳನ್ನು ಸೀಮಿತಗೊಳಿಸುವ ಬದಲು ಆತ್ಮವಿಶ್ವಾಸ ಮೂಡಿಸುವ ಕೆಲಸವಾಗಬೇಕು. ಪಠ್ಯಪುಸ್ತಕಗಳನ್ನು ಓದುವ ಅಭ್ಯಾಸವನ್ನು ಬೆಳೆಸಿ ಉಲ್ಲಾಸಭರಿತವಾಗಿ ಕಲಿಯುವ ಚಟುವಟಿಕೆಗಳಲ್ಲಿ ಮಕ್ಕಳನ್ನು ತೊಡಗಿಸಬೇಕು ಎಂದು ಮುಖ್ಯ ಶಿಕ್ಷಕರುಗಳಿಗೆ ಕರೆ ನೀಡಿದರು.

ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ಕೆ.ರವಿಶಂಕರ್‍ರೆಡ್ಡಿ, ಬಿ.ಇ.ಡಿ.ಕಾಲೇಜಿನ ಸಹ ನಿರ್ದೇಶಕ ಮಂಜುನಾಥ್, ಶಿಕ್ಷಣಾಧಿಕಾರಿಗಳಾದ ಎನ್.ಆರ್.ತಿಪ್ಪೇಸ್ವಾಮಿ, ವಿ.ತಿಪ್ಪೇಸ್ವಾಮಿ, ಪ್ರೌಢಶಾಲೆ ಮುಖ್ಯ ಶಿಕ್ಷಕರ ಸಂಘದ ಗೌರವಾಧ್ಯಕ್ಷ ನಾಗರಾಜು, ಅಧ್ಯಕ್ಷ ನಾಗೇಂದ್ರಪ್ಪ, ಕಾರ್ಯದರ್ಶಿ ಮಂಜುನಾಥ್ ವೇದಿಕೆಯಲ್ಲಿದ್ದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ದೇಹದಲ್ಲಿ ರಕ್ತ ಹೆಪ್ಪುಗಟ್ಟಲು ಕಾರಣವೇನು ?

ಸುದ್ದಿಒನ್ : ದೇಹದಲ್ಲಿ ರಕ್ತ ಹೆಪ್ಪುಗಟ್ಟುವುದು ತುಂಬಾ ಅಪಾಯಕಾರಿ. ಪರಿಣಾಮವಾಗಿ, ಅನೇಕ ರೀತಿಯ ಮಾರಣಾಂತಿಕ ಸಮಸ್ಯೆಗಳು ಉದ್ಭವಿಸುತ್ತವೆ. ದೇಹದಲ್ಲಿ ರಕ್ತ ಹೆಪ್ಪುಗಟ್ಟುವಿಕೆಗೆ ಅಪಾಯಕಾರಿ ಅಂಶಗಳು ಯಾವುವು ? ಅವುಗಳನ್ನು ತಡೆಯುವುದು ಹೇಗೆ ? ಮುಂತಾದ

ನಿಮ್ಮದೇ ರಾಶಿ ಹೊಂದಿರುವರು ಶ್ರೀಮಂತರಾಗಿದ್ದಾರೆ, ಸರಕಾರಿ ಉದ್ಯೋಗದಲ್ಲಿದ್ದಾರೆ ನೀವೇಕೆ ಇಲ್ಲ?

ನಿಮ್ಮದೇ ರಾಶಿ ಹೊಂದಿರುವರು ಶ್ರೀಮಂತರಾಗಿದ್ದಾರೆ, ಸರಕಾರಿ ಉದ್ಯೋಗದಲ್ಲಿದ್ದಾರೆ ನೀವೇಕೆ ಇಲ್ಲ? ಶನಿವಾರ ರಾಶಿ ಭವಿಷ್ಯ -ಮೇ-4,2024 ಸೂರ್ಯೋದಯ: 05:52, ಸೂರ್ಯಾಸ್ತ : 06:33 ಶಾಲಿವಾಹನ ಶಕೆ1945, ಶ್ರೀ ಕ್ರೋಧಿ ನಾಮ ಸಂವತ್ಸರ , ಸಂವತ್2079,

ಆಗ್ನೇಯ ಶಿಕ್ಷಕರ ಕ್ಷೇತ್ರದ ಚುನಾವಣೆ : ಜೂನ್ 3 ರಂದು ಮತದಾನ : ಜಿಲ್ಲಾಧಿಕಾರಿ ಟಿ.ವೆಂಕಟೇಶ್

ಚಿತ್ರದುರ್ಗ. ಮೇ.03: ಆಗ್ನೇಯ ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ ಸದಸ್ಯರ ಆಯ್ಕೆಯ ಚುನಾವಣೆಗೆ ವೇಳಾಪಟ್ಟಿ ಪ್ರಕಟವಾಗಿದೆ. ಚಿತ್ರದುರ್ಗ ಜಿಲ್ಲೆಯಲ್ಲಿ 4615 ಮತದಾರರು ಇದ್ದು , ಜೂನ್ 3 ರಂದು ಮತದಾನ ಜರುಗಲಿದೆ ಎಂದು ಆಗ್ನೇಯ

error: Content is protected !!