ಶ್ರೀ ಅಯ್ಯಪ್ಪ ಸ್ವಾಮಿ ದೇವಾಲಯದಲ್ಲಿ ಮಾಲಾಧಾರಿಗಳಿಗೆ ಉಚಿತ ಅನ್ನದಾನ

suddionenews
1 Min Read

ಚಿತ್ರದುರ್ಗ, (ನ.14) : ನಗರದ ಮೆದೇಹಳ್ಳಿ ರಸ್ತೆಯಲ್ಲಿರುವ ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನದಲ್ಲಿ ಮಾಲಾಧಾರಿಗಳಿಗೆ ನವೆಂಬರ್ 16 ರಿಂದ ಜನವರಿ  13 ರವರೆಗೆ ಸುಮಾರು ಅರವತ್ತು ದಿನಗಳ ಕಾಲ  ಅಯ್ಯಪ್ಪ ಸ್ವಾಮಿ ಮಾಲಾಧಾರಿಗಳಿಗೆ ಉಚಿತ ಅನ್ನದಾನ ನಡೆಯಲಿದೆ.

ನವೆಂಬರ್ 16 ರಂದು ಮಹೇಶ್ ಮೋಟಾರ್ಸ್ ಮಾಲೀಕರಾದ ಮಲ್ಲಿಕಾರ್ಜುನ ಸ್ವಾಮಿ ಮತ್ತು  ಅಯ್ಯಪ್ಪ ಸ್ವಾಮಿ ಸೇವಾ ಟ್ರಸ್ಟ್ ನ ಅಧ್ಯಕ್ಷರಾದ ಶರಣ್ ಕುಮಾರ್ ಕಾರ್ಯಕ್ರಮಕ್ಕೆ ಚಾಲನೆ ನೀಡುವರು.

ಈ ಸಂದರ್ಭದಲ್ಲಿ ದೇವಸ್ಥಾನದಲ್ಲಿ ಗಣಹೋಮ ಕಾರ್ಯಕ್ರಮ ನೆರವೇರಲಿದೆ.  ಈ ಹೋಮಕ್ಕೆ ಸಮಸ್ತ ಅವಾಯ್ಯಪ್ಪ ಸ್ವಾಮಿ ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಬೇಕಾಗಿ ಸಮಿತಿಯ ಅಧ್ಯಕ್ಷರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಹೆಚ್ಚಿನ ಮಾಹಿತಿಗಾಗಿ 9449682119 ಅವರನ್ನು ಸಂಪರ್ಕಿಸಲು ಕೋರಿದೆ.

Share This Article
Leave a Comment

Leave a Reply

Your email address will not be published. Required fields are marked *