Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಮಾರ್ಚ್ 28ರಂದು ಚಿತ್ರದುರ್ಗ ಜಿಲ್ಲಾಸ್ಪತ್ರೆಯಲ್ಲಿ ಉಚಿತ ಮೂತ್ರಕೋಶ ತಪಾಸಣೆ

---Advertisement---

ಸುದ್ದಿಒನ್, ಚಿತ್ರದುರ್ಗ. ಮಾರ್ಚ್26: ಚಿತ್ರದುರ್ಗ ಜಿಲ್ಲಾ ಆಸ್ಪತ್ರೆ ಮತ್ತು ದಾವಣಗೆರೆಯ ಎಸ್.ಎಸ್.ನಾರಾಯಣ ಹೆಲ್ತ್ ಆಸ್ಪತ್ರೆ ಸಂಯುಕ್ತಾಶ್ರಯದಲ್ಲಿ ಇದೇ ಮಾರ್ಚ್ 28ರಂದು ನಗರದ ಜಿಲ್ಲಾ ಆಸ್ಪತ್ರೆಯ ಕೊಠಡಿ ಸಂಖ್ಯೆ 15ರಲ್ಲಿ “ಉಚಿತ ಮೂತ್ರಕೋಶ ತಪಾಸಣಾ ಶಿಬಿರ” ನಡೆಯಲಿದೆ.

ಎಸ್.ಎಸ್.ನಾರಾಯಣ ಹೆಲ್ತ್ ಆಸ್ಪತ್ರೆಯ ಮೂತ್ರಕೋಶ ತಜ್ಞ ವೈದ್ಯರಾದ (ಯುರಾಲಾಜಿಸ್ಟ್) ಡಾ.ಯು.ಎಸ್.ಕಾರ್ತಿಕ್ ಅವರು ಅಂದು ಬೆಳಿಗ್ಗೆ 10 ರಿಂದ ಮಧ್ಯಾಹ್ನ 1 ರವೆಗೆ ಶಿಬಿರದಲ್ಲಿ ಲಭ್ಯವಿದ್ದು, ಮೂತ್ರಕೋಶ ತಪಾಸಣೆ ನಡೆಸುವರು.

ಮೂತ್ರಪಿಂಡದಲ್ಲಿ ಕಲ್ಲು, ಹರಳು (ಕಿಡ್ನಿಸ್ಟೋನ್), ಪದೇ ಪದೇ ಮೂತ್ರ ವಿಸರ್ಜನೆ, ಪ್ರೋಸ್ಟೇಟ್‍ನ ಮೂತ್ರದ ತೊಂದರೆ, ಮೂತ್ರ ವಿಸರ್ಜನೆಯಲ್ಲಿ ತೊಂದರೆ, ಮೂತ್ರದಲ್ಲಿ ಸೋಂಕು, ಉರಿ ಮೂತ್ರ, ಮೂತ್ರದಲ್ಲಿ ರಕ್ತ ಕಾಣಿಸುವುದು, ಪುರುಷರ ಬಂಜೆತನ, ಚಿಕ್ಕ ಮಕ್ಕಳ ಮೂತ್ರದ ತೊಂದರೆಗಳು, ತಡೆದ ಮೂತ್ರ ಇತ್ಯಾದಿ ಮೂತ್ರಕೋಶ ಕಾಯಿಲೆಯ ಲಕ್ಷಣಗಳು ಕಂಡುಬಂದರೆ ಸಾರ್ವಜನಿಕರು ಈ ಸೇವೆಯ ಸದುಪಯೋಗ ಪಡೆದುಕೊಳ್ಳಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ 9535025743, 7259759982 ಗೆ ಸಂಪರ್ಕಿಸಬಹುದು ಎಂದು ಚಿತ್ರದುರ್ಗ ಜಿಲ್ಲಾ ಆಸ್ಪತ್ರೆಯ ಜಿಲ್ಲಾ ಶಸ್ತ್ರಚಿಕಿತ್ಸಕ  ಡಾ.ಎಸ್.ಪಿ.ರವೀಂದ್ರ ತಿಳಿಸಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now
🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...