ಕಾಂಗ್ರೆಸ್ ಸರ್ಕಾರ ಚುನಾವಣೆಗೂ ಮುನ್ನ ಐದು ಗ್ಯಾರಂಟಿ ಯೋಜನೆಗಳ ಭರವಸೆಯನ್ನಹ ಜನರಿಗೆ ನೀಡಿತ್ತು. ಇದೀಗ ಆ ಗ್ಯಾರಂಟಿ ಯೋಜನೆಗಳನ್ನು ಈಡೇರಿಸುವ ಸಮಯ ಬಂದಿದೆ. ಸಿಎಂ ಹುದ್ದೆ ಅಲಂಕರಿಸಿದ ಬಳಿಕ ಮೊದಲ ಸುದ್ದಿಗೋಷ್ಟಿಯನ್ನು ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ನೇತೃತ್ವದಲ್ಲಿ ನಡೆದಿದೆ.
ಸುದ್ದಿಗೋಷ್ಟಿಯಲ್ಲಿ ಸಿಎಂ ಸಿದ್ದರಾಮಯ್ಯ ತಮ್ಮ ಗ್ಯಾರಂಟಿ ಘೋಷಣೆ ಬಗ್ಗೆ ಮಾತನಾಡಿದ್ದಾರೆ. ತಿಂಗಳಿಗೆ 200 ಯುನಿಟ್ ವಿದ್ಯುತ್ ನೀಡುತ್ತೇವೆ. ಕರ್ನಾಟಕದವರಾದರೇ ಮಾತ್ರ ಓಡಾಡಲು ಉಚಿತ ಬಸ್ ಪಾಸ್ ನೀಡಲಾಗುತ್ತದೆ. ಮನೆಯ ಯಜಮಾನಿ ಖಾತೆಗೆ ಪ್ರತಿ ತಿಂಗಳು 2 ಸಾವಿರ ಹಣ ಬರುತ್ತದೆ. ಅನ್ನಭಾಗ್ಯ ಯೋಜನೆಯಡಿ 10 ಕೆಜಿ ಅಕ್ಕಿ. ಇಂದಿರಾ ಕ್ಯಾಂಟಿನ್ ನಲ್ಲಿ ಮತ್ತೆ ಆಹಾರ ನೀಡಲಾಗುತ್ತದೆ.
ಮುಂದಿನ ಕ್ಯಾಬಿನೆಟ್ ನಲ್ಲಿ ಎಲ್ಲವೂ ಸ್ಪಷ್ಟವಾಗಿ ತಿಳಿಯುತ್ತೆ. ಈಗ ತಾತ್ವಿಕವಾಗಿ ಒಪ್ಪಿಗೆ ಕೊಟ್ಟಿದ್ದೀನಿ. ಆಮೇಲೆ ಎಲ್ಲವನ್ನು ಹಣಕಾಸು ವಿಚಾರದಲ್ಲೆಲ್ಲಾ ಚರ್ಚೆ ಮಾಡಿ ಮಾಡ್ತೀವಿ. ಎಷ್ಟೇ ಬರ್ಡನ್ ಆದ್ರೂ ಕೂಡ ಈ ಐದು ಗ್ಯಾರಂಟಿಯನ್ನು ಜಾರಿಗೆ ತರುತ್ತೇವೆ ಎಂದಿದ್ದಾರೆ.