ಸುದ್ದಿಒನ್, ಚಿತ್ರದುರ್ಗ, ಅಕ್ಟೋಬರ್.18 : ನಗರದ ಐಯುಡಿಪಿ ಲೇಔಟ್ ಗಾಂಧಿನಗರದ ಸಮುದಾಯ ಭವನದಲ್ಲಿ ಅಕ್ಟೋಬರ್ 19 ರಿಂದ 21 ರ ವರೆಗೆ ಮೂರು ದಿನಗಳ ವರೆಗೂ ಯೋಗೀಶ್ ಸಹ್ಯಾದ್ರಿ ಎಜುಕೇಷನ್ ಟ್ರಸ್ಟ್ (ರಿ.), ಚಿತ್ರದುರ್ಗ, ಜಿಲ್ಲಾ ಕುರುಬರ ಸಂಘ (ರಿ.), ಚಿತ್ರದುರ್ಗ, ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಚಿತ್ರದುರ್ಗ ಇವರ ಸಹಯೋಗದಲ್ಲಿ ಮಕ್ಕಳಿಗಾಗಿ ಉಚಿತ ಇಂಗ್ಲಿಷ್ ಕಾರ್ಯಾಗಾರ ವನ್ನು ಹಮ್ಮಿಕೊಳ್ಳಲಾಗಿದೆ.
ಕಾರ್ಯಕ್ರಮದ ಉದ್ಘಾಟನೆಯನ್ನು ಶಾಸಕ ಕೆ ಸಿ ವೀರೇಂದ್ರ (ಪಪ್ಪಿ) ಅವರು ಗುರುವಾರ ಬೆಳಗ್ಗೆ 10 ಗಂಟೆಗೆ ನೆರವೇರಿಸಲಿದ್ದು, ಶ್ರೀ ಬಸವಮೂರ್ತಿ ಮಾದಾರ ಚನ್ನಯ್ಯ ಸ್ವಾಮೀಜಿಯವರು ದಿವ್ಯ ಸಾನಿಧ್ಯ ವಹಿಸಲಿದ್ದಾರೆ.
ಕಾರ್ಯಾಗಾರದ ಸಂಪನ್ಮೂಲ ವ್ಯಕ್ತಿಯಾಗಿ ಉಪನ್ಯಾಸಕರು ಹಾಗು ಸಹ್ಯಾದ್ರಿ ಇಂಗ್ಲಿಷ್ ಅಕಾಡೆಮಿಯ ಅಧ್ಯಕ್ಷರಾದ ಯೋಗೀಶ್ ಸಹ್ಯಾದ್ರಿ ಭಾಗವಹಿಸಲಿದ್ದಾರೆ.

ಮುಖ್ಯ ಅತಿಥಿಗಳಾಗಿ ಡಿಡಿಪಿಐ ರವಿಶಂಕರ್ ರೆಡ್ಡಿ ಕೆ, ಬಿಜೆಪಿ ಜಿಲ್ಲಾಧ್ಯಕ್ಷ ಮುರುಳಿ ಎ, ಕಾಂಗ್ರೆಸ್ ಜಿಲ್ಲಾಧ್ಯಕ್ಷ ತಾಜ್ ಪೀರ್ ಎಂ ಕೆ, ಕುರುಬರ ಸಂಘದ ಜಿಲ್ಲಾಧ್ಯಕ್ಷ ಶ್ರೀರಾಮ್,
ಮಾಜಿ ನಗರಸಭೆ ಅಧ್ಯಕ್ಷರ ಹೆಚ್. ಮಂಜಪ್ಪ, ನಗರಸಭೆ ಸದಸ್ಯ ಭಾಸ್ಕರ್ ಎಸ್, ಶ್ರೀಮತಿ ಭಾರತಿ ಆರ್ ಬಣಕಾರ, ಉಪ ನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಚಿತ್ರದುರ್ಗ ಭಾಗವಹಿಸಲಿದ್ದಾರೆ ಎಂದು ಚಿತ್ರದುರ್ಗ ಜಿಲ್ಲಾ ಕುರುಬರ ಸಂಘದ ಜಿಲ್ಲಾಧ್ಯಕ್ಷ ಶ್ರೀರಾಮ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.









