Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ನಾಳೆ ಚಿತ್ರದುರ್ಗದ ಬಸವೇಶ್ವರ ಆಸ್ಪತ್ರೆಯಿಂದ ಉಚಿತ ನೇತ್ರ ತಪಾಸಣೆ ಮತ್ತು ಚಿಕಿತ್ಸಾ ಶಿಬಿರ ಆಯೋಜನೆ

---Advertisement---

ಸುದ್ದಿಒನ್, ಚಿತ್ರದುರ್ಗ, ಜೂನ್‌. 22 : ಬಸವೇಶ್ವರ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯ ವತಿಯಿಂದ ಜೂನ್ 23ರ ನಾಳೆ ಉಚಿತ ನೇತ್ರ ತಪಾಸಣೆ ಹಾಗೂ ಚಿಕಿತ್ಸಾ ಶಿಬಿರವನ್ನು ಹಮ್ಮಿಕೊಳ್ಳಲಾಗಿದೆ. ಚಿತ್ರದುರ್ಗದ ಎನ್.ಎಚ್-48 ಬೈಪಾಸ್ ರಸ್ತೆಯ ಕಳಗೋಟೆಯಲ್ಲಿರುವ ಆಸ್ಪತ್ರೆ ಆವರಣದಲ್ಲಿ ಬೆಳಗ್ಗೆ 9:00 ಗಂಟೆಯಿಂದ ಸಂಜೆ 5:00 ಗಂಟೆಯವರೆಗೆ ಈ ಶಿಬಿರ ನಡೆಯಲಿದ್ದು, ಕಣ್ಣಿನ ಜೊತೆಗೆ ಇತರೆ ಸಾಮಾನ್ಯ ತೊಂದರೆಗಳಿಗೂ ಸೂಕ್ತ ಚಿಕಿತ್ಸೆ ನೀಡಲಾಗುತ್ತದೆ.

ಈ ಶಿಬಿರದಲ್ಲಿ ಆರ್ಥಿಕವಾಗಿ ಹಿಂದುಳಿದಿರುವ ಬಡ ಜನರಿಗೆ ಮಾತ್ರವೇ ಉಚಿತ ಕಣ್ಣಿನ ಶಸ್ತ್ರಚಿಕಿತ್ಸೆಯ ಸೌಲಭ್ಯವನ್ನು ಕಲ್ಪಿಸಲಾಗುವುದು. ಶಿಬಿರದಲ್ಲಿ ತಪಾಸಣೆಗೆ ಒಳಗಾಗಿ ಶಸ್ತ್ರಚಿಕಿತ್ಸೆಗೆ ಅರ್ಹರಾಗುವ ರೋಗಿಗಳನ್ನು ಚಿತ್ರದುರ್ಗದ ಬಸವೇಶ್ವರ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಗೆ ಕರೆತಂದು, ಉಚಿತ ಶಸ್ತ್ರಚಿಕಿತ್ಸೆ ನಡೆಸಿ ಲೆನ್ಸ್ ಅಳವಡಿಸಲಾಗುತ್ತದೆ. ಶಸ್ತ್ರಚಿಕಿತ್ಸೆ ಮುಗಿದ ನಂತರ ಆಸ್ಪತ್ರೆಯವರು ನಿಗದಿಪಡಿಸುವ ಸ್ಥಳ ಮತ್ತು ದಿನಾಂಕದಂದು ಮರು ಪರೀಕ್ಷೆಗೆ ಬರುವುದು ಕಡ್ಡಾಯವಾಗಿರುತ್ತದೆ. ಶಿಬಿರಕ್ಕೆ ಬರುವ ಸಾರ್ವಜನಿಕರು ಕಡ್ಡಾಯವಾಗಿ ಮುಖಕ್ಷೌರ ಮಾಡಿಕೊಂಡು, ಸ್ವಚ್ಛವಾದ ಬಟ್ಟೆಗಳನ್ನು ಧರಿಸಿಕೊಂಡು ಬರಬೇಕಾಗಿ ತಿಳಿಸಿದೆ.

ಶಿಬಿರದ ಪ್ರಯೋಜನ ಪಡೆಯಲು ಇಚ್ಛಿಸುವವರು ತಮ್ಮ ಗುರುತಿಗಾಗಿ ಪಾಸ್ ಪೋರ್ಟ್ ಸೈಜ್ ಫೋಟೋ, ಆಧಾರ್ ಕಾರ್ಡ್ ಹಾಗೂ ರೇಷನ್ ಕಾರ್ಡ್ ನ ಜೆರಾಕ್ಸ್ ಪ್ರತಿಗಳೊಂದಿಗೆ ತಮ್ಮ ಮೊಬೈಲ್ ಸಂಖ್ಯೆಯನ್ನು ಕಡ್ಡಾಯವಾಗಿ ತರಬೇಕಾಗಿ ವಿನಂತಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಸಾರ್ವಜನಿಕರು 9380804683 ಮೊಬೈಲ್ ಸಂಖ್ಯೆಯನ್ನು ಸಂಪರ್ಕಿಸಬಹುದಾಗಿದೆ. ಸುತ್ತಮುತ್ತಲಿನ ಗ್ರಾಮಸ್ಥರು ಹಾಗೂ ಸಾರ್ವಜನಿಕರು ಈ ಉಚಿತ ಶಿಬಿರದ ಸದುಪಯೋಗ ಪಡೆದುಕೊಳ್ಳಬೇಕಾಗಿ ಕೋರಲಾಗಿದೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now