Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗದಲ್ಲಿ ಮೇ 27 ರಂದು ಉಚಿತ ಕಣ್ಣಿನ ತಪಾಸಣೆ ಶಿಬಿರ

---Advertisement---

ಸುದ್ದಿಒನ್ಚಿತ್ರದುರ್ಗ‌. ಮೇ.23: ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಆಸ್ಪತ್ರೆ, ಜಿಲ್ಲಾ ಅಂಧತ್ವ ನಿವಾರಣಾ ವಿಭಾಗ, ನಗರ ಸಭೆ, ಶಿವಮೊಗ್ಗ ಶಂಕರ ಕಣ್ಣಿನ ಆಸ್ಪತ್ರೆ ಹಾಗೂ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಅವರ ಸಹಯೋಗದಲ್ಲಿ ಚಿತ್ರದುರ್ಗ ನಗರದ ಗಾಯಿತ್ರಿ ಕಲ್ಯಾಣ ಮಂಟಪದಲ್ಲಿ ಮೇ 27 ರಂದು ಬೆಳಿಗ್ಗೆ 9 ರಿಂದ ಸಂಜೆ 4 ಗಂಟೆಗೆ ಉಚಿತ ಕಣ್ಣಿನ ತಪಾಸಣೆ, ಶಸ್ತ್ರ ಚಿಕಿತ್ಸೆ ಹಾಗೂ ಕನ್ನಡಕ ವಿತರಣಾ ಶಿಬಿರ ಆಯೋಜಿಸಲಾಗಿದೆ.

ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ, ಕಾರ್ಯಕ್ರಮ ಉದ್ಘಾಟಿಸುವರು. ಚಲನಚಿತ್ರ ಕಲಾವಿದ ದೊಡ್ಡಣ್ಣ ಘನ ಉಪಸ್ಥಿತರಿರುವರು. ನಗರಸಭೆ ಅಧ್ಯಕ್ಷೆ ಸುಮಿತಾ.ಬಿ.ಎನ್. ಅಧ್ಯಕ್ಷತೆ ವಹಿಸುವರು. ಗೌರವಾನ್ವಿತ ಅತಿಥಿಗಳಾಗಿ ಜಿಲ್ಲಾಧಿಕಾರಿ ಟಿ.ವೆಂಕಟೇಶ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಂಜಿತ್ ಕುಮಾರ್ ಬಂಡಾರು, ಜಿ.ಪಂ.ಸಿಇಓ ಸೋಮಶೇಖರ್.ಎಸ್.ಜೆ, ಜಿಲ್ಲಾ ಆರೋಗ್ಯಾಧಿಕಾರಿ ಡಾ.ರೇಣುಪ್ರಸಾದ್.ಜಿ.ಪಿ, ಜಿಲ್ಲಾ ಶಸ್ತ್ರ ಚಿಕಿತ್ಸೆ ಡಾ.ರವೀಂದ್ರ, ಡಿಡಿಪಿಐ ಮಂಜುನಾಥ್, ಪೌರಾಯುಕ್ತೆ ರೇಣುಕಾ.ಎಂ, ನಗರ ಸಭೆ ಉಪಾಧ್ಯಕ್ಷೆ ಶ್ರೀದೇವಿ ಚಕ್ರವರ್ತಿ.ಜಿ.ಎಸ್, ಜಿಲ್ಲಾ ಅಂಧತ್ವ ನಿವಾರಣಾ ಕಾರ್ಯಕ್ರಮ ಅಧಿಕಾರಿ ಡಾ.ನಾಗರಾಜ್.ಜಿ.ಓ, ತಹಶೀಲ್ದಾರ್ ಗೋವಿಂದ್‌ರಾಜ್.ಬಿ.ಎ., ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಬಿ.ವಿ.ಗಿರೀಶ್ ಭಾಗವಹಿಸುವರು.

ಶಾಸಕ ಕೆ.ಸಿ.ವೀರೇಂದ್ರ ಪಪ್ಪಿಯವರು ಕ್ಷೇತ್ರದ 22 ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಉಚಿತ ಕಣ್ಣಿನ ತಪಾಸಣೆ ಶಿಬಿರ ಆಯೋಜಿಸಿದ್ದಾರೆ. ಇದರಲ್ಲಿ 6451 ಜನರು ಪರೀಕ್ಷೆ ನಡೆಸಿದ್ದು, 667 ಜನರಿಗೆ ಕಣ್ಣಿನ ಶಸ್ತçಚಿಕಿತ್ಸೆ ನಡೆಸಲಾಗಿದೆ. 2460 ಜನರು ಕನ್ನಡಕ ಪಡೆದಿದ್ದಾರೆ. ಮೇ 27 ಶಿಬಿರದಲ್ಲಿ ಹೆಚ್ಚಿನ ಜನರು ಪಾಲ್ಗೊಂಡು ಸದುಪಯೋಗ ಪಡೆದುಕೊಳ್ಳೂವಂತೆ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...