Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗ ಸಿಎಂಸಿಆರ್‍ಐನಲ್ಲಿ ಪ್ರತಿ ತಿಂಗಳ ಎರಡನೇ ಮತ್ತು ನಾಲ್ಕನೆ ಮಂಗಳವಾರ ಉಚಿತ ಗ್ಯಾಸ್ಟ್ರೋ ಶಿಬಿರ

---Advertisement---

ಚಿತ್ರದುರ್ಗ. ಆ.07: ಚಿತ್ರದುರ್ಗ ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆ, ಬೋಧಕ ಆಸ್ಪತ್ರೆ (ಸಿಎಂಸಿಆರ್‍ಐ) ಮತ್ತು ದಾವಣಗೆರೆ ಎಸ್.ಎಸ್. ನಾರಾಯಣ ಹೆಲ್ತ್ ಆಸ್ಪತ್ರೆ ಸಂಯುಕ್ತಾಶ್ರಯದಲ್ಲಿ ಪ್ರತಿ ತಿಂಗಳ ಎರಡನೇ ಮತ್ತು ನಾಲ್ಕನೇ ಮಂಗಳವಾರ ಬೆಳಿಗ್ಗೆ 10 ರಿಂದ ಮಧ್ಯಾಹ್ನ 1 ಗಂಟೆಯವರೆಗೆ ನಗರದ ಸಿಎಂಸಿಆರ್‍ಐನ ಕೊಠಡಿ ಸಂಖ್ಯೆ 16ರಲ್ಲಿ ಉಚಿತ ಗ್ಯಾಸ್ಟ್ರೋ ಶಿಬಿರ ಏರ್ಪಡಿಸಲಾಗಿದೆ. ದಾವಣಗೆರೆ ಎಸ್.ಎಸ್.ನಾರಾಯಣ ಹೆಲ್ತ್ ಆಸ್ಪತ್ರೆಯ ಮೆಡಿಕಲ್ ಗ್ಯಾಸ್ಟ್ರೋ ಎಂಟರಾಲಜಿಸ್ಟ್ ಮತ್ತು ಯಕೃತ್ತು ವೈದ್ಯರಾದ ಡಿ.ಕೆ.ಅಶ್ವಿನ್ ಅವರು ಉಚಿತವಾಗಿ ಗ್ಯಾಸ್ಟ್ರೋ ಶಿಬಿರ ನಡೆಸುವರು.

ಹೊಟ್ಟೆನೋವು, ಹೊಟ್ಟೆ ಉಬ್ಬುವಿಕೆ, ಅಜೀರ್ಣ, ಎದೆಯುರಿ, ವಾಕರಿಕೆ, ವಾಂತಿ, ಮಲದಲ್ಲಿ ರಕ್ತ, ಗ್ಯಾಸ್, ವಾಯು, ಅಗಾಗ ತೇಗು ಬರುವುದು, ಮಲಬದ್ಧತೆ, ಅತಿಸಾರ ಬೇದಿ, ಹಸಿವಿನ ಕೊರತೆ, ನುಂಗಲು ತೊಂದರೆ, ತೀವ್ರವಾದ ಹೊಟ್ಟೆ ನೋವು, ವಾಂತಿಯಲ್ಲಿ ರಕ್ತ, ಹಠಾತ್ ತೂಕ ನಷ್ಟ, ಕಮಾಲೆ ಸೇರಿದಂತೆ ಈ ಗ್ಯಾಸ್ಟ್ರೋ ಲಕ್ಷಣಗಳು ಕಂಡುಬಂದರೆ ಸಾರ್ವಜನಿಕರು ಮತ್ತು ಫೋಷಕರು ಈ ಸೇವೆಯ ಸದುಪಯೋಗ ಪಡೆದುಕೊಳ್ಳಬೇಕು. ಹೆಚ್ಚಿನ ಮಾಹಿತಿಗಾಗಿ 9535025743, 7259759982 ಗೆ ಸಂಪರ್ಕಿಸಬಹುದು ಎಂದು ಚಿತ್ರದುರ್ಗ ಸಿಎಂಸಿಆರ್‍ಐ ವೈದ್ಯಕೀಯ ಅಧೀಕ್ಷಕರು ಹಾಗೂ ಜಿಲ್ಲಾ ಶಸ್ತ್ರ ಚಿಕಿತ್ಸಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now