Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಗೂಳಿಹೊಸಹಳ್ಳಿಯಲ್ಲಿ ಉಚಿತ ಆರೋಗ್ಯ ತಪಾಸಣೆ

Facebook
Twitter
Telegram
WhatsApp

ಚಿತ್ರದುರ್ಗ : ಬಸವೇಶ್ವರ ವೈದ್ಯಕೀಯ ಕಾಲೇಜು, ಆಸ್ಪತ್ರೆ ಹಾಗೂ ಎಸ್‍ಜೆಎಂ ದಂತ ವೈದ್ಯಕೀಯ ಕಾಲೇಜು, ಅಭ್ಯುದಯ ಸೇವಾ ಸಂಸ್ಥೆ ಸಲವಮ್ಮನಹಳ್ಳಿ ಇವರ ಸಹಯೋಗದಲ್ಲಿ ಉಚಿತ ನೇತ್ರ ತಪಾಸಣಾ ಮತ್ತು ಶಸ್ತ್ರಚಿಕಿತ್ಸೆ, ಮಸೂರ ಅಳವಡಿಕೆ, ದಂತ ತಪಾಸಣೆ ಸೇರಿದಂತೆ ವಿವಿಧ ಚಿಕಿತ್ಸೆಗಳನ್ನು ಹಮ್ಮಿಕೊಳ್ಳಲಾಗಿದೆ.

ಹೊಳಲ್ಕೆರೆ ತಾಲೂಕಿನ ಗೂಳಿಹೊಸಹಳ್ಳಿ ಸರ್ಕಾರಿ ಆಯುರ್ವೇದ ಕೇಂದ್ರ, ಉಪ್ಪರಿಗೇನಹಳ್ಳಿ ಗ್ರಾಪಂ ಹಾಗೂ ಗ್ರಾಮಸ್ಥರ ಸಹಯೋಗದಲ್ಲಿ ಗೂಳಿಹೊಸಹಳ್ಳಿ  ಸರ್ಕಾರಿ ಶಾಲೆ ಆವರಣದಲ್ಲಿ ಮೇ.11 ಬುಧವಾರ ಬೆಳಗ್ಗೆ 10 ರಿಂದ ಮಧ್ಯಾಹ್ನ 2 ಗಂಟೆವರೆಗೆ ಶಿಬಿರ ನಡೆಯಲಿದೆ ಎಂದು ಅಭ್ಯುದಯ ಸೇವಾಸಂಸ್ಥೆ ವ್ಯವಸ್ಥಾಪಕ ನಿರ್ದೇಶಕ ಪ್ರೊ.ಸಲವಮ್ಮನಹಳ್ಳಿ ಸಿದ್ದೇಶ್‍ಗೌಡ್ರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ನೇತ್ರ ಶಸ್ತ್ರಚಿಕಿತ್ಸೆಯ ಅಗತ್ಯವಿರುವವರರನ್ನು ಚಿತ್ರದುರ್ಗಕ್ಕೆ ಕರೆದೊಯ್ದು ಉಚಿತವಾಗಿ ಶಸ್ತ್ರಚಿಕಿತ್ಸೆ ಮಾಡಿಸಲಾಗುವುದು. ಲಭ್ಯವಿರುವ ಔಷಧಿಗಳನ್ನು ಉಚಿತವಾಗಿ ವಿತರಿಸಲಾಗುವುದು. ಶಿಬಿರದಲ್ಲಿ ಚರ್ಮರೋಗ, ಮಾನಸಿಕ ರೋಗ, ಸ್ತ್ರೀ ರೋಗ, ಕಿವಿ, ಮೂಗು, ಗಂಟಲು, ಮೂಳೆ ತಜ್ಞರು, ಪಿಜಿಷಿಯನ್‍ಗಳು ಲಭ್ಯರಿರುತ್ತಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಿತ್ರದುರ್ಗ | ಜಿಲ್ಲೆಯಾದ್ಯಂತ 54 ವಿಶೇಷ ಮತಗಟ್ಟೆಗಳ ಸ್ಥಾಪನೆ, ಮತದಾರರ ಸ್ವಾಗತಕ್ಕೆ ಸಿಂಗಾರಗೊಂಡ ಮತಗಟ್ಟೆ ಕೇಂದ್ರಗಳು

ಚಿತ್ರದುರ್ಗ. ಏ.25: ಚಿತ್ರದುರ್ಗ ಲೋಕಸಭಾ ಸಾರ್ವತ್ರಿಕ ಚುನಾವಣೆಗೆ ಇದೇ ಏ.26ರಂದು ಶುಕ್ರವಾರ ಮತದಾನ ನಡೆಯಲಿದೆ. ಈ ಹಿನ್ನಲೆಯಲ್ಲಿ ಮತದಾನ ಪ್ರಮಾಣ ಹೆಚ್ಚಿಸಲು, ಮತದಾರರನ್ನು ಆಕರ್ಷಿಸಲು ಜಿಲ್ಲೆಯಾದ್ಯಂತ 54 ಮತಗಟ್ಟೆ ಕೇಂದ್ರಗಳನ್ನು ವಿವಿಧ ಮಾದರಿಗಳಲ್ಲಿ ಸಿಂಗಾರಗೊಳಿಸಿದ್ದು,

ಚುನಾವಣೆ ಮಸ್ಟರಿಂಗ್ : ಮತದಾನ ಕಾರ್ಯಕ್ಕೆ ತೆರಳಿದ ಅಧಿಕಾರಿ ಹಾಗೂ ಸಿಬ್ಬಂದಿ

ಚಿತ್ರದುರ್ಗ .ಏ.25: ಲೋಕಸಭಾ ಸಾರ್ವತ್ರಿಕ ಚುನಾವಣೆಯ 2ನೇ ಹಂತದ ಮತದಾನಕ್ಕೆ ಕ್ಷಣಗಣನೆ ಆರಂಭವಾಗಿದೆ. ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಚುನಾವಣೆಗೆ ಏಪ್ರಿಲ್ 26 ತಾರೀಖು, ಶುಕ್ರವಾರ ಬೆಳಿಗ್ಗೆ 7 ರಿಂದ ಸಂಜೆ 6 ಗಂಟೆಯ ವರೆಗೆ

ಗುರುರಾಘವೇಂದ್ರ ಸಹಕಾರ ಬ್ಯಾಂಕ್ ಹಗರಣ ಎಸ್ಐಟಿ ತನಿಖೆಗೆ : ಡಿಸಿಎಂ ಮಾತಿಗೆ ಅಭಿನಂದನೆ ಸಲ್ಲಿಸಿದ ಠೇವಣಿದಾರರು

ಬೆಂಗಳೂರು: ಗುರು ರಾಘವೇಂದ್ರ ಸಹಕಾರ ಬ್ಯಾಂಕ್ ಹಗರಣ ಈ ಮೊದಲು ಸಾಕಷ್ಟು ಸದ್ದು ಮಾಡಿತ್ತು. ಇದೀಗ ಅದರ ತನಿಖೆಯನ್ನು ಎಸ್ಐಟಿಗೆ ವಹಿಸುತ್ತೇನೆ. ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಅವರ ಬಳಿ ಚರ್ಚೆ ಮಾಡುತ್ತೇನೆ ಎಂದು

error: Content is protected !!