ಚಿತ್ರದುರ್ಗ. ಮಾರ್ಚ್25: ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ತಾಲ್ಲೂಕು ಆರೋಗ್ಯ ಅಧಿಕಾರಿಗಳ ಕಚೇರಿ ಸಹಯೋಗದಲ್ಲಿ ನಗರದ ಬುದ್ಧನಗರ ಆರೋಗ್ಯ ಕೇಂದ್ರದ ವ್ಯಾಪ್ತಿಯ ಐ.ಯು.ಡಿ.ಪಿ. ಬಡಾವಣೆಯ ‘ನಮ್ಮ ಕ್ಲಿನಿಕ್’ ವತಿಯಿಂದ ಬುಧವಾರ ಉಚಿತ ಆರೋಗ್ಯ ತಪಾಸಣಾ ಶಿಬಿರ ಹಾಗೂ ಆರೋಗ್ಯ ಮೇಳ ನಡೆಯಿತು.
ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ತಾಲ್ಲೂಕು ಆರೋಗ್ಯಾಧಿಕಾರಿ ಡಾ. ಬಿ.ವಿ.ಗಿರೀಶ್, ಕಂದಾಯಗಿರಿ ನಗರ, ಸಾದಿಕ್ ನಗರ, ಬಾಬು ಜಗಜೀವನರಾಮ್ ನಗರ ಹಾಗೂ ಮಹಾತ್ಮಾ ಗಾಂಧಿನಗರದಂತಹ ಪ್ರದೇಶಗಳಲ್ಲಿ ಅತಿ ಹೆಚ್ಚು ಕೂಲಿ ಕಾರ್ಮಿಕರು ವಾಸಿಸುತ್ತಿದ್ದಾರೆ. ಈ ವರ್ಗದ ಜನರಿಗೆ ಗುಣಮಟ್ಟದ ಆರೋಗ್ಯ ತಪಾಸಣೆ ಸುಲಭವಾಗಿ ದೊರೆಯಲಿ ಎಂಬ ಸದುದ್ದೇಶದಿಂದ ಈ ಉಚಿತ ಆರೋಗ್ಯ ಮೇಳ ಆಯೋಜಿಸಲಾಗಿದೆ. ಬಸವೇಶ್ವರ ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಕೇಂದ್ರದ ಪರಿಣಿತ ವೈದ್ಯರ ತಂಡವು ಇಲ್ಲಿ ತಪಾಸಣೆ ನಡೆಸುತ್ತಿದ್ದು, ಸಾರ್ವಜನಿಕರು ಈ ಅವಕಾಶವನ್ನು ಹೆಚ್ಚಿನ ಸಂಖ್ಯೆಯಲ್ಲಿ ಬಳಸಿಕೊಳ್ಳಬೇಕು ಎಂದು ಮನವಿ ಮಾಡಿದರು.
ಬುದ್ಧನಗರದ ವೈದ್ಯಾಧಿಕಾರಿ ಡಾ. ಸುರೇಂದ್ರ ಕುಮಾರ್ ಮಾತನಾಡಿ, ಆರೋಗ್ಯ ಸೇವೆಗಳನ್ನು ಜನರ ಮನೆ ಬಾಗಿಲಿಗೆ ತಲುಪಿಸುವುದೇ ಈ ಶಿಬಿರದ ಮುಖ್ಯ ಗುರಿಯಾಗಿದೆ ಎಂದರು. ಐ.ಯು.ಡಿ.ಪಿ. ಲೇಔಟ್‍ನ ವೈದ್ಯಾಧಿಕಾರಿ ಡಾ. ಅಕ್ಷತಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.

ಶಿಬಿರದಲ್ಲಿ ಬಸವೇಶ್ವರ ಆಸ್ಪತ್ರೆಯ ತಜ್ಞ ವೈದ್ಯರಾದ ಡಾ. ಅರ್ಜುನ್ ಎಂ. (ಕೀಲು ಮೂಳೆ), ಡಾ. ಆದರ್ಶ್ ಎನ್.ಕೆ. (ಜನರಲ್ ಮೆಡಿಸಿನ್), ಡಾ. ನಿತ್ಯ ಮತ್ತು ಡಾ. ಜೀವಿಕ ಎಂ. (ಪ್ರಸೂತಿ ಮತ್ತು ಸ್ತ್ರೀರೋಗ), ಡಾ. ಅನನ್ಯ ಆರ್. (ಶ್ವಾಸಕೋಶ ತಜ್ಞರು) ಹಾಗೂ ಕ್ಯಾಂಪ್ ಕೋ-ಆರ್ಡಿನೇಟರ್ ಅಭಿಷೇಕ್ ಭಾಗವಹಿಸಿ ರೋಗಿಗಳ ತಪಾಸಣೆ ನಡೆಸಿದರು.
ಬುದ್ಧನಗರ ಆರೋಗ್ಯ ಕೇಂದ್ರದ ಆರೋಗ್ಯ ನಿರೀಕ್ಷಣಾಧಿಕಾರಿಗಳು, ಶುಶ್ರೂಷಣಾಧಿಕಾರಿಗಳು, ಪ್ರಯೋಗಶಾಲಾ ತಾಂತ್ರಿಕ ಅಧಿಕಾರಿಗಳು, ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿಗಳು ಹಾಗೂ ಆಶಾ ಕಾರ್ಯಕರ್ತೆಯರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ಟಿ. ಶ್ರೀನಿವಾಸಮೂರ್ತಿ ಕಾರ್ಯಕ್ರಮ














