Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ನಮ್ಮ ಕ್ಲಿನಿಕ್‍ನಿಂದ ಉಚಿತ ಆರೋಗ್ಯ ಮೇಳ : ಗುಣಮಟ್ಟದ ಆರೋಗ್ಯ ತಪಾಸಣೆ ಬಳಸಿಕೊಳ್ಳಿ : ಡಾ. ಗಿರೀಶ್

---Advertisement---

ಚಿತ್ರದುರ್ಗ. ಮಾರ್ಚ್25: ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ತಾಲ್ಲೂಕು ಆರೋಗ್ಯ ಅಧಿಕಾರಿಗಳ ಕಚೇರಿ ಸಹಯೋಗದಲ್ಲಿ ನಗರದ ಬುದ್ಧನಗರ ಆರೋಗ್ಯ ಕೇಂದ್ರದ ವ್ಯಾಪ್ತಿಯ ಐ.ಯು.ಡಿ.ಪಿ. ಬಡಾವಣೆಯ ‘ನಮ್ಮ ಕ್ಲಿನಿಕ್’ ವತಿಯಿಂದ ಬುಧವಾರ ಉಚಿತ ಆರೋಗ್ಯ ತಪಾಸಣಾ ಶಿಬಿರ ಹಾಗೂ ಆರೋಗ್ಯ ಮೇಳ ನಡೆಯಿತು.

 

ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ತಾಲ್ಲೂಕು ಆರೋಗ್ಯಾಧಿಕಾರಿ ಡಾ. ಬಿ.ವಿ.ಗಿರೀಶ್, ಕಂದಾಯಗಿರಿ ನಗರ, ಸಾದಿಕ್ ನಗರ, ಬಾಬು ಜಗಜೀವನರಾಮ್ ನಗರ ಹಾಗೂ ಮಹಾತ್ಮಾ ಗಾಂಧಿನಗರದಂತಹ ಪ್ರದೇಶಗಳಲ್ಲಿ ಅತಿ ಹೆಚ್ಚು ಕೂಲಿ ಕಾರ್ಮಿಕರು ವಾಸಿಸುತ್ತಿದ್ದಾರೆ. ಈ ವರ್ಗದ ಜನರಿಗೆ ಗುಣಮಟ್ಟದ ಆರೋಗ್ಯ ತಪಾಸಣೆ ಸುಲಭವಾಗಿ ದೊರೆಯಲಿ ಎಂಬ ಸದುದ್ದೇಶದಿಂದ ಈ ಉಚಿತ ಆರೋಗ್ಯ ಮೇಳ ಆಯೋಜಿಸಲಾಗಿದೆ. ಬಸವೇಶ್ವರ ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಕೇಂದ್ರದ ಪರಿಣಿತ ವೈದ್ಯರ ತಂಡವು ಇಲ್ಲಿ ತಪಾಸಣೆ ನಡೆಸುತ್ತಿದ್ದು, ಸಾರ್ವಜನಿಕರು ಈ ಅವಕಾಶವನ್ನು ಹೆಚ್ಚಿನ ಸಂಖ್ಯೆಯಲ್ಲಿ ಬಳಸಿಕೊಳ್ಳಬೇಕು ಎಂದು ಮನವಿ ಮಾಡಿದರು.

 

ಬುದ್ಧನಗರದ ವೈದ್ಯಾಧಿಕಾರಿ ಡಾ. ಸುರೇಂದ್ರ ಕುಮಾರ್ ಮಾತನಾಡಿ, ಆರೋಗ್ಯ ಸೇವೆಗಳನ್ನು ಜನರ ಮನೆ ಬಾಗಿಲಿಗೆ ತಲುಪಿಸುವುದೇ ಈ ಶಿಬಿರದ ಮುಖ್ಯ ಗುರಿಯಾಗಿದೆ ಎಂದರು. ಐ.ಯು.ಡಿ.ಪಿ. ಲೇಔಟ್‍ನ ವೈದ್ಯಾಧಿಕಾರಿ ಡಾ. ಅಕ್ಷತಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.

 

ಶಿಬಿರದಲ್ಲಿ ಬಸವೇಶ್ವರ ಆಸ್ಪತ್ರೆಯ ತಜ್ಞ ವೈದ್ಯರಾದ ಡಾ. ಅರ್ಜುನ್ ಎಂ. (ಕೀಲು ಮೂಳೆ), ಡಾ. ಆದರ್ಶ್ ಎನ್.ಕೆ. (ಜನರಲ್ ಮೆಡಿಸಿನ್), ಡಾ. ನಿತ್ಯ ಮತ್ತು ಡಾ. ಜೀವಿಕ ಎಂ. (ಪ್ರಸೂತಿ ಮತ್ತು ಸ್ತ್ರೀರೋಗ), ಡಾ. ಅನನ್ಯ ಆರ್. (ಶ್ವಾಸಕೋಶ ತಜ್ಞರು) ಹಾಗೂ ಕ್ಯಾಂಪ್ ಕೋ-ಆರ್ಡಿನೇಟರ್ ಅಭಿಷೇಕ್ ಭಾಗವಹಿಸಿ ರೋಗಿಗಳ ತಪಾಸಣೆ ನಡೆಸಿದರು.
ಬುದ್ಧನಗರ ಆರೋಗ್ಯ ಕೇಂದ್ರದ ಆರೋಗ್ಯ ನಿರೀಕ್ಷಣಾಧಿಕಾರಿಗಳು, ಶುಶ್ರೂಷಣಾಧಿಕಾರಿಗಳು, ಪ್ರಯೋಗಶಾಲಾ ತಾಂತ್ರಿಕ ಅಧಿಕಾರಿಗಳು, ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿಗಳು ಹಾಗೂ ಆಶಾ ಕಾರ್ಯಕರ್ತೆಯರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ಟಿ. ಶ್ರೀನಿವಾಸಮೂರ್ತಿ ಕಾರ್ಯಕ್ರಮ

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now
🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...