ಸುದ್ದಿಒನ್, ಚಿತ್ರದುರ್ಗ, ಸೆಪ್ಟೆಂಬರ್. 23 : ಚಿತ್ರದುರ್ಗ ರೋಟರಿ ಕ್ಲಬ್ ಹಾಗೂ ಶಿವಮೊಗ್ಗ ಸಹ್ಯಾದ್ರಿ ನಾರಾಯಣ ಆಸ್ಪತ್ರೆ ಸಹಯೋಗದಲ್ಲಿ ಇಂದು (23/09/2025) ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 1 ಗಂಟೆಯವರೆಗೆ ನಗರದ ಚಳ್ಳಕೆರೆ ರಸ್ತೆಯಲ್ಲಿರುವ ಎಸ್ಆರ್ ಬಿಎಂಎಸ್ ರೋಟರಿ ಸೇವಾ ಭವನದಲ್ಲಿ ಸಾರ್ವಜನಿಕರಿಗಾಗಿ ಉಚಿತ ಹೃದಯ ತಪಾಸಣಾ ಶಿಬಿರವನ್ನು ಏರ್ಪಡಿಸಲಾಗಿದೆ.
ಈ ಹೃದಯ ರೋಗ ತಪಾಸಣಾ ಶಿಬಿರವು ಸಂಪೂರ್ಣ ಉಚಿತವಾಗಿದ್ದು, ಚಿತ್ರದುರ್ಗ ಜಿಲ್ಲೆಯ ಸಾರ್ವಜನಿಕರು ಶಿಬಿರದ ಉಪಯೋಗವನ್ನು ಪಡೆದುಕೊಳ್ಳುವಂತೆ ರೋಟರಿ ಕ್ಲಬ್ ಅಧ್ಯಕ್ಷರಾದ ರೊ| ಭಾಗ್ಯಲಕ್ಷ್ಮಿಮೂರ್ತಿ ಹಾಗೂ ಕಾರ್ಯದರ್ಶಿ ರೊ| ಅನುರಾಧ ವಿಶ್ವನಾಥ್, ಪಬ್ಲಿಕ್ ಇಮೇಜ್ ಮುಖ್ಯಸ್ಥರಾದ ರೊ| ಯೋಗೀಶ್ ಸಹ್ಯಾದ್ರಿ ಅವರು ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ಸಂಖ್ಯೆ 9972240239 ಸಂಪರ್ಕಿಸಬೇಕಾಗಿ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.











