Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

14 ವರ್ಷದ ಹೆಣ್ಣುಮಕ್ಕಳಿಗೆ ಸರ್ಕಾರಿ ಆರೋಗ್ಯ ಕೇಂದ್ರಗಳಲ್ಲಿ ಉಚಿತ ಹೆಚ್‌ಪಿವಿ ಲಸಿಕೆ ಲಭ್ಯ

---Advertisement---

ಸುದ್ದಿಒನ್,ಬೆಂಗಳೂರು,ಮೇ.13: ಹೆಣ್ಣುಮಕ್ಕಳ ಆರೋಗ್ಯ ರಕ್ಷಣೆ ಹಾಗೂ ಭವಿಷ್ಯದಲ್ಲಿ ಮಾರಕ ಕಾಯಿಲೆಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ಸರ್ಕಾರವು ಮಹತ್ವದ ಕ್ರಮ ಕೈಗೊಂಡಿದೆ. 14 ವರ್ಷ ವಯಸ್ಸಿನ ಎಲ್ಲಾ ಹೆಣ್ಣುಮಕ್ಕಳು ಈಗ ತಮ್ಮ ಹತ್ತಿರದ ಸರ್ಕಾರಿ ಆರೋಗ್ಯ ಕೇಂದ್ರಗಳಲ್ಲಿ ಹೆಚ್‌ಪಿವಿ (Human Papillomavirus) ಲಸಿಕೆಯನ್ನು ಪಡೆಯಲು ಅರ್ಹರಾಗಿದ್ದಾರೆ.

ಹೆಚ್‌ಪಿವಿ ಲಸಿಕೆಯು ಗರ್ಭಕಂಠದ ಕ್ಯಾನ್ಸರ್ (Cervical Cancer) ವಿರುದ್ಧ ಹೋರಾಡಲು ಅತ್ಯಂತ ಪರಿಣಾಮಕಾರಿಯಾಗಿದೆ. ಚಿಕ್ಕ ವಯಸ್ಸಿನಲ್ಲಿಯೇ ಈ ಲಸಿಕೆಯನ್ನು ಪಡೆಯುವುದರಿಂದ ಭವಿಷ್ಯದಲ್ಲಿ ಈ ಕ್ಯಾನ್ಸರ್ ಬರುವ ಸಾಧ್ಯತೆಯನ್ನು ಬಹುತೇಕವಾಗಿ ತಡೆಗಟ್ಟಬಹುದು ಎಂದು ವೈದ್ಯಕೀಯ ತಜ್ಞರು ತಿಳಿಸಿದ್ದಾರೆ.

ಈ ಲಸಿಕೆಯು ವೈಜ್ಞಾನಿಕವಾಗಿ ದೃಢೀಕರಿಸಲ್ಪಟ್ಟಿದ್ದು, ಸಂಪೂರ್ಣ ಸುರಕ್ಷಿತವಾಗಿದೆ.ಇದು ಹೆಣ್ಣುಮಕ್ಕಳಲ್ಲಿ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಿ ಕ್ಯಾನ್ಸರ್ ಕಾರಕ ವೈರಸ್‌ಗಳಿಂದ ರಕ್ಷಣೆ ನೀಡುತ್ತದೆ.

ಅಡ್ಡಪರಿಣಾಮಗಳಿಲ್ಲ: ಈ ಲಸಿಕೆಯಿಂದ ಯಾವುದೇ ರೀತಿಯ ಹಾನಿಕಾರಕ ಅಡ್ಡಪರಿಣಾಮಗಳಿಲ್ಲ. ಈಗಾಗಲೇ ಜಗತ್ತಿನಾದ್ಯಂತ ಲಕ್ಷಾಂತರ ಹೆಣ್ಣುಮಕ್ಕಳು ಈ ಲಸಿಕೆಯನ್ನು ಪಡೆದು ಸುರಕ್ಷಿತವಾಗಿದ್ದಾರೆ.ನಿಮ್ಮ ಹತ್ತಿರದ ಎಲ್ಲಾ ಸರ್ಕಾರಿ ಆಸ್ಪತ್ರೆಗಳು ಮತ್ತು ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಈ ಲಸಿಕೆಯು ಲಭ್ಯವಿದೆ.

ಪೋಷಕರಿಗೆ ಮನವಿ:

ನಿಮ್ಮ ಮಗಳ ಆರೋಗ್ಯಕರ ಭವಿಷ್ಯಕ್ಕಾಗಿ, ಕೂಡಲೇ ಹತ್ತಿರದ ಸರ್ಕಾರಿ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿ ಲಸಿಕೆ ಕೊಡಿಸಿ. ಕ್ಯಾನ್ಸರ್ ಮುಕ್ತ ಸಮಾಜದತ್ತ ಹೆಜ್ಜೆ ಇಡೋಣ.

Join WhatsApp

Join Now

Join Telegram

Join Now