Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಮೊಣಕಾಲು ಮಂಡಿ ಚಿಪ್ಪು ಉಚಿತ ತಪಾಸಣಾ ಶಿಬಿರ

---Advertisement---

 

ವರದಿ ಮತ್ತು ಫೋಟೋ ಕೃಪೆ
ಸುರೇಶ್ ಪಟ್ಟಣ್,
ಮೊ : 98862 95817

ಸುದ್ದಿಒನ್, ಚಿತ್ರದುರ್ಗ ಆ. 25 : ರೋಟರಿ ಕ್ಲಬ್ ಚಿತ್ರದುರ್ಗ,ವಾಸವಿ ಕ್ಲಬ್ ಚಿತ್ರದುರ್ಗ, ಲಕ್ಷ್ಮಿ ಸರ್ಜಿಕಲ್ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ರಾಣೇಬೆನ್ನೂರು, ಇವರುಗಳ ಸಂಯುಕ್ತಾಶ್ರಯದಲ್ಲಿ ಚಳ್ಳಕೆರೆ ರಸ್ತೆಯ “ಎಸ್.ಆರ್.ಬಿ.ಎಂ.ಎಸ್. ಸೇವಾ ಭವನದಲ್ಲಿ ಶನಿವಾರ ಮೊಣಕಾಲು ಮಂಡಿ ಚಿಪ್ಪು ಮತ್ತು ಚಪ್ಪೆ ಬದಲಾವಣೆ ಆಪರೇಷನ್” ಗಳಿಗಾಗಿ ವಿಶೇಷ ಉಚಿತ ತಪಾಸಣಾ ಶಿಬಿರ ಏರ್ಪಡಿಸಲಾಗಿತ್ತು.

ಈ ದಿನ ಬೆಳಿಗ್ಗೆ 11 ಗಂಟೆಯಿಂದ  3:00  ಗಂಟೆಯವರೆಗೆ ನಡೆದ ಈ ಶಿಬಿರದಲ್ಲ್ಲಿ 45ಕ್ಕೂ ಹೆಚ್ಚು ಜನ ಪರೀಕ್ಷೆಗೆ ಒಳಗಾಗಿ ಹೆಚ್ಚಿನ ಚಿಕಿತ್ಸೆಗಾಗಿ ಆರು ಜನ ಆಯ್ಕೆಯಾಗಿದ್ದಾರೆ.

ಈ ಕಾರ್ಯಕ್ರಮದಲ್ಲಿ ಡಾ. ಸಂಜೀವ್ ಎಂ.ಮುದ್ರಿ ಹಾಗೂ ಡಾಕ್ಟರ್ ಕೊಟ್ರೇಶ್, ರೋಟರಿ ಅಧ್ಯಕ್ಷರಾದ ಭಾಗ್ಯಲಕ್ಷ್ಮಿ ಮೂರ್ತಿ, ಕಾರ್ಯದರ್ಶಿ ಅನುರಾಧ ವಿಶ್ವನಾಥ್, ವಾಸವಿ ಕ್ಲಬ್ಬಿನ ಅಧ್ಯಕ್ಷರಾದ ರಾಜೇಶ್ವರಿ ಸಿದ್ರಾಮ್, ಸರ್ವಿಸ್ ಪ್ರಾಜೆಕ್ಟ್ ಚೇರ್ಮನ್ ಎ.ಆರ್. ಲಕ್ಷ್ಮಣ್, ಕ್ಲಬ್ ಟ್ರೈನರ್ ಕನಕ ರಾಜ್, ಎಸ್.ವೀರೇಶ್, ಭಾಗವಹಿಸಿದ್ದರು

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now
🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...