Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಜಿ.ರಘು ಆಚಾರ್ ಅವರ ಗೃಹ ಪ್ರವೇಶದ ಮುಹೂರ್ತದಲ್ಲಿ ಉಚಿತ ಸಾಮೂಹಿಕ ವಿವಾಹ : ಆರ್ ಪ್ರಸನ್ನ ಕುಮಾರ್

Facebook
Twitter
Telegram
WhatsApp

 

ಚಿತ್ರದುರ್ಗ,(ಫೆ.22): ನಗರದ ಹೊರವಲಯದಲ್ಲಿರುವ ಕ್ಯಾದಿಗೆರೆ ಸಮೀಪ ರಾ.ಹೆ 4ರ ಸರ್ವಿಸ್ ರಸ್ತೆ ಪಕ್ಕದಲ್ಲಿ ಜಿ.ರಘು ಆಚಾರ್ ಅವರು ನೂತನವಾಗಿ ನಿರ್ಮಾಣ ಮಾಡಿರುವ ಪ್ರಕೃತಿ ಗೃಹ ಪ್ರವೇಶ 2023ರ ಮಾರ್ಚ್ 10ರಂದು ನೆರವೇರಲಿದ್ದು ಅದೇ ದಿನ ಸಾಮೂಹಿಕ ವಿವಾಹ ಹಮ್ಮಿಕೊಳ್ಳಲಾಗಿದೆ ಎಂದು ಅಖಿಲ ಭಾರತ ವಿಶ್ವಕರ್ಮ ಪರಿಷತ್ ರಾಜ್ಯಾಧ್ಯಕ್ಷ ಆರ್.ಪ್ರಸನ್ನ ಕುಮಾರ್ ಹೇಳಿದರು.

ನಗರದ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಭವನದಲ್ಲಿ ಇಂದು ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ಬರಗಾಲ, ಅಕಾಲಿಕ ಮಳೆಯಿಂದಾಗಿ ರೈತರು ಸಂಕಷ್ಟದಲ್ಲಿದ್ದು, ಕರೋನಾ ಮಹಾಮಾರಿಯಿಂದಾಗಿ ಜನರ ಜೀವನ ಅಸ್ತವ್ಯಸ್ಥವಾಗಿದೆ. ಅನೇಕ ಜನರು ತಮ್ಮ ಮಕ್ಕಳಿಗೆ ಮದುವೆ ಮಾಡಲು ಹರಸಾಹಸ ಪಡುತ್ತಿದ್ದಾರೆ. ಇದನ್ನು ಮನಗಂಡು ಜನರ ಸಂಕಷ್ಟಗಳಿಗೆ ಸ್ಪಂಧಿಸುವ ಸಲುವಾಗಿ ರಘು ಆಚಾರ್ ಅವರು ಉಚಿತವಾಗಿ ಸಾಮೂಹಿಕ ವಿವಾಹ ಏರ್ಪಡಿಸಲು ಮುಂದಾಗಿದ್ದಾರೆ. ಸಾರ್ವಜನಿಕರು ಇದರ ಸದುಪಯೋಗ ಪಡಿಸಿಕೊಳ್ಳಬೇಕೆಂದು ಈ ಮೂಲಕ ಮನವಿ ಮಾಡುತ್ತೇವೆ ಎಂದರು.

ಸಾಮೂಹಿಕ ವಿವಾಹದಲ್ಲಿ ದಾಂಪತ್ಯ ಜೀವನಕ್ಕೆ ಕಾಲಿರಿಸಲು ಇಚ್ಚಿಸುವ ವಧು-ವರರಿಗೆ ಭಾರತೀಯ ವಿವಾಹ ಕಾಯ್ದೆಯ ನಿಯಮದಂತೆ ಹೆಣ್ಣಿನ ವಯಸ್ಸು 18ವರ್ಷ, ಹಾಗು ಗಂಡಿನ ವಯಸ್ಸು 21 ವರ್ಷ ಮೇಲ್ಪಟ್ಟಿರಬೇಕು, ವಧು-ವರರು ಆಧಾರ್ ಕಾರ್ಡ್, ವಯಸ್ಸಿನ ಧೃಡೀಕರಣ ಪತ್ರ, ಪಾಸ್ ಪೋರ್ಟ್ ಅಳತೆಯ ಎರಡು ಭಾವಚಿತ್ರ ಹಾಗು ಪೋಷಕರ ಒಪ್ಪಿಗೆ ಪತ್ರದೊಂದಿಗೆ ಮಾರ್ಚ್ 05ರ ಸಂಜೆ 6.00 ಗಂಟೆಯೊಳಗೆ ನೊಂದಣಿ ಮಾಡಿಸಬೇಕು.

ಸಾಮೂಹಿಕ ವಿವಾಹದಲ್ಲಿ ಸಾಂಸಾರಿಕ ಜೀವನಕ್ಕೆ ಕಾಲಿರಿಸುವ ಜೋಡಿಗಳಿಗೆ ಚಿನ್ನದ ಮಾಂಗಲ್ಯ, ಕಾಲುಂಗುರ, ವಧು-ವರರಿಗೆ ಸೀರೆ, ಶರ್ಟು, ಪಂಚೆ, ಶಲ್ಯ ಹಾಗು ನೂತನ ತಂತ್ರಜ್ಞಾನದ ಮಾರ್ಪಾಡು ಹೊಂದಿರುವ ಹೊಲಿಗೆ ಯಂತ್ರವನ್ನು ಉಚಿತವಾಗಿ ನೀಡಲಾಗುವುದು ಎಂದು ಪ್ರಸನ್ನಕುಮಾರ್ ಮಾಹಿತಿ ನೀಡಿದರು.

ಹೆಚ್ಚಿನ ಮಾಹಿತಿ ಹಾಗು ನೊಂದಣಿಗಾಗಿ ಸಂಪರ್ಕಿಸಬೇಕಾದ ಮೊಬೈಲ್ ಸಂಖ್ಯೆ:  9036832467/ 9844432644/ 9880121005/ 9663887496  ಗೆ ಕರೆಮಾಡಿ ನೊಂದಣಿ ಮಾಡಿಸಿಕೊಳ್ಳಬಹುದು.

ಸುದ್ದಿಗೋಷ್ಠಿಯಲ್ಲಿ ಆಶಾ ರಘು ಆಚಾರ್, ವಿಶ್ವಕರ್ಮ ಅಭಿವೃದ್ದಿ ನಿಗಮದ ಮಾಜಿ ಅಧ್ಯಕ್ಷೆ ಸತ್ಯವತಿ, ಅಖಿಲ ಭಾರತ ವಿಶ್ವಕರ್ಮ ಪರಿಷತ್ ಕಾನೂನು ಸಲಹೆಗಾರರಾದ ಸರಸ್ವತಿ, ಮುಖಂಡರಾದ ಕ್ಯಾದಿಗೆರೆ ತಿಪ್ಪೇಸ್ವಾಮಿ ಉಪಸ್ಥಿತರಿದ್ದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಸಿಇಎನ್ ಪೊಲೀಸರ ದಾಳಿ : ಅಂತರ್ ರಾಜ್ಯ ಗಾಂಜಾ ಪೆಡ್ಲರ್ ಬಂಧನ

ಸುದ್ದಿಒನ್, ಚಿತ್ರದುರ್ಗ, ನವೆಂಬರ್. 22 : ಆಂದ್ರಪ್ರದೇಶದ ವಿಶಾಖಪಟ್ಟಣಂ ನಿಂದ ಗಾಂಜಾವನ್ನು ತಂದು ಚಿತ್ರದುರ್ಗ ನಗರಕ್ಕೆ ಬಂದು ಗಾಂಜಾ ಮಾರಾಟ ಮಾಡುತ್ತಿದ್ದ ಡ್ರಗ್ಸ್‌ ಪೆಡ್ಲರ್‌ನನ್ನು ಸಿಇಎನ್ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬಿಹಾರದ ಹರಿ ಓಂಕುಮಾರ್(24

ಪೆಟ್ರೋಲ್ ಬಂಕಿನಲ್ಲಿ ವಂಚನೆ ಆರೋಪ : ಗ್ರಾಹಕರು ಹಾಗೂ ಸಿಬ್ಬಂದಿಗಳ ನಡುವೆ ಮಾತಿನ ಚಕಮಕಿ

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಬೆಳಗೆರೆ ಮೊ : 97398 75729 ಸುದ್ದಿಒನ್, ಚಳ್ಳಕೆರೆ, ನವೆಂಬರ್. 22 : ಬೈಕ್ ಗಳಿಗೆ ಪೆಟ್ರೋಲ್ ಹಾಕುವ ವೇಳೆ ಗ್ರಾಹಕರಿಗೆ ಇಲ್ಲಿನ ಸಿಬ್ಬಂದಿ ವಂಚನೆ

ಅಕ್ರಮ ಕಸಾಯಿ ಖಾನೆ ಬಂದ್ ಮಾಡಿ : ದಾದಾ ಪೀರ್ ಆಗ್ರಹ : ವಿಡಿಯೋ ವೈರಲ್..!

ಸುದ್ದಿಒನ್, ಹಿರಿಯೂರು : ಅಕ್ರಮವಾಗಿ ಕಸಾಯಿ ಖಾನೆ ನಡೆಸುತ್ತಿರುವವರ ವಿರುದ್ಧ ದಾದಾ ಪೀರ್ ಎಂಬುವವರು ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದಾರೆ. ದಾದಾ ಪೀರ್ 6ನೇ ವಾರ್ಡ್ ನಲ್ಲಿ ವಾಸಿಸುವವ ವ್ಯಕ್ತಿಯಾಗಿದ್ದಾರೆ. ಕಸಾಯಿ ಖಾನೆಯಿಂದ ಮಕ್ಕಳು ಅನಾರೋಗ್ಯಕ್ಕೆ

error: Content is protected !!