Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಚಿತ್ರದುರ್ಗದಲ್ಲಿ ಡಿಸೆಂಬರ್ 23ರಂದು ಉಚಿತ ವೈದ್ಯಕೀಯ ಶಿಬಿರ

Facebook
Twitter
Telegram
WhatsApp

ಚಿತ್ರದುರ್ಗ,(ಡಿ.20) : ಚಿತ್ರದುರ್ಗ ತಾಲ್ಲೂಕಿನ 2022-23ನೇ ಸಾಲಿನ 1 ರಿಂದ 12ನೇ ತರಗತಿಯಲ್ಲಿರುವ ಸರ್ಕಾರಿ ಮತ್ತು ಅನುದಾನಿತ ಶಾಲಾ ಮತ್ತು ಕಾಲೇಜುಗಳಲ್ಲಿ ಕಲಿಯುತ್ತಿರುವ ವಿಶೇಷ ಅಗತ್ಯತೆವುಳ್ಳ ಮಕ್ಕಳಿಗೆ ಇದೇ ಡಿಸೆಂಬರ್ 23ರಂದು ಬೆಳಿಗ್ಗೆ 10 ರಿಂದ ಸಂಜೆ 5 ರವರೆಗೆ ಚಿತ್ರದುರ್ಗ ನಗರದ ತರಾಸು ರಂಗಮಂದಿರದ ಹತ್ತಿರದ ಕೋಟೆ ಸರ್ಕಾರಿ ಪ್ರೌಢಶಾಲೆಯಲ್ಲಿ ಉಚಿತ ವೈದ್ಯಕೀಯ ಶಿಬಿರ ಹಮ್ಮಿಕೊಳ್ಳಲಾಗಿದೆ.

ಅಲಿಂಕೋ ಸಹಯೋಗದಲ್ಲಿ ನುರಿತ ವೈದ್ಯರುಗಳಿಂದ ತಪಾಸಣಾ ಶಿಬಿರವನ್ನು ಹಮ್ಮಿಕೊಳ್ಳಲಾಗಿದ್ದು, ಚಿತ್ರದುರ್ಗ ತಾಲ್ಲೂಕಿನಲ್ಲಿರುವ ವಿಕಲಚೇತನ ವಿದ್ಯಾರ್ಥಿಗಳು ಭಾಗವಹಿಸುವಂತೆ ಸಂಬಂಧಿಸಿದ ಶಾಲಾ ಮುಖ್ಯ ಶಿಕ್ಷಕರುಗಳು  ಹಾಗೂ ಪೋಷಕರು ಕ್ರಮವಹಿಸಿ ಈ ಶಿಬಿರದ ಸದುಪಯೋಗ ಪಡಿಸಿಕೊಳ್ಳಲು ಕೋರಿದೆ.

ಶಿಬಿರಕ್ಕೆ ಬರುವಾಗ ಅಂಗವಿಕಲರ ಗುರುತಿನ ಚೀಟಿ, ಯುಡಿಐಡಿ ಕಾರ್ಡ್, ವೈದ್ಯಕೀಯ ಪ್ರಮಾಣಪತ್ರದ ಜೆರಾಕ್ಸ್ ಪ್ರತಿ, ಬಿ.ಪಿ.ಎಲ್ ಕಾರ್ಡ್, ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಆಧಾರ್ ಕಾರ್ಡ್, ಎರಡು ಭಾವಚಿತ್ರ ಹಾಗೂ ವಿದ್ಯಾರ್ಥಿಯ ಬ್ಯಾಂಕ್ ಪಾಸ್ ಪುಸ್ತಕದ ಜೆರಾಕ್ಸ್ ಸೇರಿದಂತೆ ಈ ಎಲ್ಲಾ ದಾಖಲೆಗಳ ಎರಡು ಸೆಟ್ ಜೆರಾಕ್ಸ್ ಪ್ರತಿಯನ್ನು ತರಬೇಕು ಎಂದು ಚಿತ್ರದುರ್ಗ ಕ್ಷೇತ್ರ ಶಿಕ್ಷಣಾಧಿಕಾರಿಗಳು ತಿಳಿಸಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಮುಂದಿನ ವರ್ಷದಿಂದ ಎಸ್ಎಸ್ಎಲ್ಸಿ ಮಕ್ಕಳಿಗಿಲ್ಲ ಗ್ರೇಸ್ ಮಾರ್ಕ್ಸ್..!

ಬೆಂಗಳೂರು: ಈ ಬಾರಿಯ ಎಸ್ಎಸ್ಎಲ್ಸಿ ಫಲಿತಾಂಶ ಕಳೆದ ಬಾರಿಗಿಂತ ಕಡಿಮೆ ಬಂದಿದೆ. ಅದರಲ್ಲೂ ಕಳೆದ ವರ್ಷಕ್ಕಿಂತ ಹೆಚ್ಚಿನ ಗ್ರೇಸ್ ಮಾರ್ಕ್ಸ್ ನೀಡಲಾಗಿದ್ದರು, ಫಲಿತಾಂಶ ಹೇಳಿಕೊಳ್ಳುವ ಮಟ್ಟಕ್ಕೆ ಬಂದಿಲ್ಲ. ಈ ಗ್ರೇಸ್ ಮಾರ್ಕ್ಸ್ ವಿಚಾರವಾಗಿ ಸಿಎಂ

ರಾಜಕೀಯ ನಿಂತ ನೀರಲ್ಲ, ಕೆಲವ ಬದಲಾವಣೆಗಳು ಅನಿವಾರ್ಯ : ಮಾಜಿ ಶಾಸಕಿ ಪೂರ್ಣಿಮಾ ಶ್ರೀನಿವಾಸ್

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817 ಸುದ್ದಿಒನ್, ಚಿತ್ರದುರ್ಗ ಮೇ. 17 :  ನಾನು ನನ್ನ ಶಾಸಕ ಸ್ಥಾನ ಅವಧಿ ಮುಗಿದ ಮೇಲೆ ಬೇರೆ ಪಕ್ಷಕ್ಕೆ

ಸಾಲ ಇರುವ ಜಮೀನು ನೀಡಿ ಜ್ಯೂ.ಎನ್ಟಿಆರ್ ಗೆ ಮೋಸ ಮಾಡಿದ ಯುವತಿ ವಿರುದ್ಧ ನಟ ದೂರು..!

ಜ್ಯೂ. NTR ಆಸ್ತಿಯೊಂದನ್ನು ಖರೀದಿಸಲು ಹೋಗಿ ಮೋಸ ಹೋಗಿದ್ದಾರೆ. ಇದೀಗ ಮೋಸ ಮಾಡಿದ ಯುವತಿ ವಿರುದ್ಧ ಕೋರ್ಟ್ ಮೊರೆ ಹೋಗಿದ್ದಾರೆ. ಆಸ್ತಿ ಮೇಲೆ ಕೋಟ್ಯಾಂತರ ರೂಪಾಯಿ ಸಾಲವಿದ್ದು, ನ್ಯಾಯ ಕೇಳುತ್ತಿದ್ದಾರೆ. ಜ್ಯೂ. NTR, ಆರ್

error: Content is protected !!