Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಮಕ್ಕಳ ಆಧಾರ್ ಬಯೋಮೆಟ್ರಿಕ್ ನವೀಕರಣಕ್ಕೆ ಉಚಿತ ಅವಕಾಶ

---Advertisement---

ದಾವಣಗೆರೆ, ಮೇ.11 : ಜಿಲ್ಲೆಯ 5 ರಿಂದ 7 ಹಾಗೂ 15 ರಿಂದ 17 ರ ವಯೋಮಿತಿಯ ಮಕ್ಕಳಿಗೆ ಕಡ್ಡಾಯ ಬಯೋಮೆಟ್ರಿಕ್ ಅಪ್‌ಡೇಟ್  ಮಾಡಿಸಲು ಜಿಲ್ಲಾಡಳಿತವು ವಿಶೇಷ ಅವಕಾಶ ಕಲ್ಪಿಸಿದೆ. ಜಿಲ್ಲೆಯ ಎಲ್ಲಾ ಆಧಾರ್ ಕೇಂದ್ರಗಳಲ್ಲಿ ಸೆಪ್ಟೆಂಬರ್ 30 ರವರೆಗೆ ಈ ಸೇವೆಯು ಸಂಪೂರ್ಣ ಉಚಿತವಾಗಿ ಲಭ್ಯವಿರಲಿದೆ.

ಆಧಾರ್ ನಿಯಮಗಳ ಪ್ರಕಾರ, ಮಕ್ಕಳಿಗೆ 5 ಮತ್ತು 15 ವರ್ಷ ತುಂಬಿದಾಗ ಬಯೋಮೆಟ್ರಿಕ್ ವಿವರಗಳನ್ನು ನವೀಕರಿಸುವುದು ಕಡ್ಡಾಯವಾಗಿದೆ. ಈ ನವೀಕರಣದಿಂದ ಶಾಲಾ ದಾಖಲಾತಿ, ವಿವಿಧ ಸ್ನಾತಕೋತ್ತರ ಪರೀಕ್ಷೆಗಳು, ವಿದ್ಯಾರ್ಥಿ ವೇತನ ಹಾಗೂ ಸರ್ಕಾರದ ವಿವಿಧ ಜನಕಲ್ಯಾಣ ಯೋಜನೆಗಳ ಸೌಲಭ್ಯ ಪಡೆಯಲು ಅನುಕೂಲವಾಗಲಿದೆ.

ಪೋಷಕರು ತಮ್ಮ ಮಕ್ಕಳ ಆಧಾರ್ ಕಾರ್ಡ್‌ ಮತ್ತು ಪೂರಕ ದಾಖಲೆಗಳೊಂದಿಗೆ ಹತ್ತಿರದ ಆಧಾರ್ ಸೇವಾ ಕೇಂದ್ರಗಳಿಗೆ ಭೇಟಿ ನೀಡಿ ಈ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು. ಜಿಲ್ಲೆಯ ಎಲ್ಲಾ ಪೋಷಕರು ಈ ಜವಾಬ್ದಾರಿಯನ್ನು ಅರಿತು, ನಿಗದಿತ ಅವಧಿಯೊಳಗೆ ತಮ್ಮ ಮಕ್ಕಳ ಆಧಾರ್ ನವೀಕರಿಸುವ ಮೂಲಕ ಸರ್ಕಾರದ ಯೋಜನೆಗಳು ತಲುಪಲು ಸಹಕರಿಸಬೇಕೆಂದು ಅಪರ ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now
🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...