Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಭೋವಿ ಜನಾಂಗದ ನಿರುದ್ಯೋಗಿ ಯುವಕ-ಯುವತಿಯರಿಗೆ ಉಚಿತ ಟೈಲರಿಂಗ್ ತರಬೇತಿ ಹಾಗೂ ಯಂತ್ರೋಪಕರಣಗಳ ವಿತರಣೆ: ಅರ್ಜಿ ಆಹ್ವಾನ

---Advertisement---

ಚಿತ್ರದುರ್ಗ. 12: ಕರ್ನಾಟಕ ಭೋವಿ ಅಭಿವೃದ್ಧಿ ನಿಗಮದ ವತಿಯಿಂದ ಜಿಲ್ಲೆಯ ಪರಿಶಿಷ್ಟ ಜಾತಿ ಭೋವಿ ಜನಾಂಗದ ನಿರುದ್ಯೋಗಿ ಯುವಕ ಮತ್ತು ಯುವತಿಯರಿಗಾಗಿ ಉಚಿತ ಟೈಲರಿಂಗ್ ತರಬೇತಿ ಹಾಗೂ ಯಂತ್ರೋಪಕರಣಗಳ ವಿತರಣೆಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಮೇ 18 ಅರ್ಜಿ ಸಲ್ಲಿಸಲು ಕೊನೆಯ ದಿನ.

ಭೋವಿ ಜನಾಂಗದ ನಿರುದ್ಯೋಗಿಗಳಲ್ಲಿ ಸ್ವಯಂ ಉದ್ಯೋಗಾವಕಾಶಗಳನ್ನು ಹೆಚ್ಚಿಸುವ ಮತ್ತು ಆರ್ಥಿಕ ಸ್ವಾವಲಂಬನೆ ಸಾಧಿಸಲು ನೆರವಾಗುವ ಉದ್ದೇಶದಿಂದ ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಅಭ್ಯರ್ಥಿಗಳು 18 ರಿಂದ 50 ವರ್ಷ ವಯೋಮಿತಿಯೊಳಗಿರಬೇಕು. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ನಿಗಮದ ಚಿತ್ರದುರ್ಗ ಜಿಲ್ಲಾ ಕಚೇರಿಗೆ ಭೇಟಿ ನೀಡಿ ಅರ್ಜಿಗಳನ್ನು ಪಡೆಯಬಹುದು. ಭರ್ತಿ ಮಾಡಿದ ಅರ್ಜಿಗಳನ್ನು ಅಗತ್ಯ ದಾಖಲೆಗಳೊಂದಿಗೆ ಸಲ್ಲಿಸಲು ಇದೇ ಮೇ 18 ರವರೆಗೆ ಅವಕಾಶ ಕಲ್ಪಿಸಲಾಗಿದೆ.

ಹೆಚ್ಚಿನ ವಿವರಗಳಿಗಾಗಿ ದೂರವಾಣಿ ಸಂಖ್ಯೆ 9448154584 ಹಾಗೂ ಚಿತ್ರದುರ್ಗ ನಗರದ ಬಿ.ಡಿ. ರಸ್ತೆಯಲ್ಲಿರುವ ಐಸಿಐಸಿಐ ಬ್ಯಾಂಕ್ ಮುಂಭಾಗದ ಪಾಲಾಕ್ಷ ಕಾಂಪೌಂಡ್‍ನ 2ನೇ ಮಹಡಿಯಲ್ಲಿರುವ ಕರ್ನಾಟಕ ಭೋವಿ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರ ಕಚೇರಿ ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.
===========

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now