Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ರಾಜ್ಯದಲ್ಲಿ ದ್ವಿತೀಯ ಪಿಯುಸಿವರೆಗಿನ ವಿದ್ಯಾರ್ಥಿಗಳಿಗೆ ಉಚಿತ ಪಠ್ಯಪುಸ್ತಕ ವಿತರಣೆ : ಸಚಿವ ಮಧುಬಂಗಾರಪ್ಪ

---Advertisement---

ಶಿವಮೊಗ್ಗ.ಆಗಸ್ಟ್.15:    ದ್ವಿತೀಯ ಪಿಯುಸಿವರೆಗಿನ ವಿದ್ಯಾರ್ಥಿಗಳಿಗೆ ಉಚಿತ ಪಠ್ಯಪುಸ್ತಕ ವಿತರಣೆಗೆ ಇದೇ ಮೊದಲ ಬಾರಿಗೆ ಸರ್ಕಾರ ಆದೇಶಿಸಿದೆ ಎಂದು ಜಿಲ್ಲಾ ಉಸ್ತುವಾರಿ ಹಾಗೂ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರಾದ ಎಸ್. ಮಧು ಬಂಗಾರಪ್ಪ ತಿಳಿಸಿದರು.

80ನೇ ಸ್ವಾತಂತ್ರ್ಯ ದಿನಾಚರಣೆಯ ಧ್ವಜಾರೋಹಣ ನೆರವೇರಿಸಿ, ಶುಭಾಶಯ ಕೋರಿ ಸಂದೇಶ ನೀಡಿರುವ ಅವರು, ಸ್ವಾತಂತ್ರ್ಯ ಎಂದರೆ ಕೇವಲ ಧ್ವಜ ಹಾರಿಸುವುದಲ್ಲ, ಪ್ರತಿಯೊಬ್ಬ ಮನುಷ್ಯನೂ ಗೌರವದಿಂದ ಬದುಕುವ ವಾತಾವರಣ ನಿರ್ಮಿಸುವುದೇ ನಿಜವಾದ ಸ್ವಾತಂತ್ರ್ಯ. ಹಸಿವು, ಬಡತನ ಮತ್ತು ಅಸಮಾನತೆಯ ವಿರುದ್ಧದ ಹೋರಾಟವೇ ನಮ್ಮ ಇಂದಿನ ಕರ್ತವ್ಯ” ಎಂದಿದ್ದಾರೆ.

ಯುವಶಕ್ತಿಯನ್ನು ಸಮಾಜ ನಿರ್ಮಾಣದಲ್ಲಿ ತೊಡಗಿಸುವ ಉದ್ದೇಶದಿಂದ ರಾಜ್ಯಾದ್ಯಂತ 10,000 “ಭಾರತ್ ಜೋಡೋ ಯುವಕ ಸಂಘ” ಗಳನ್ನು ಸ್ಥಾಪಿಸಲು ಮಾರ್ಗಸೂಚಿ ಹೊರಡಿಸಲಾಗಿದೆ ಎಂದು ತಿಳಿಸಲಾಗಿದೆ.

ಪ್ರತಿ ಯುವಕ ಸಂಘಕ್ಕೆ ಸರ್ಕಾರವು ವಾರ್ಷಿಕ ರೂ.10 ಲಕ್ಷ ಅನುದಾನವನ್ನು ಮೂರು ಕಂತುಗಳಲ್ಲಿ ನೀಡಲಿದ್ದು, ಯುವಜನತೆ ಉದ್ಯೋಗ, ಶಿಕ್ಷಣ ಮತ್ತು ಸಮಾಜದ ಏಳಿಗೆಗಾಗಿ ಧ್ವನಿ ಎತ್ತಲು ಹಾಗೂ ಸರ್ಕಾರದ ಕಾರ್ಯಗಳಲ್ಲಿ ಸಕ್ರಿಯವಾಗಿ ಭಾಗವಹಿಸಲು ಇದು ವೇದಿಕೆಯಾಗಲಿದೆ.

ಪಂಚ ಗ್ಯಾರಂಟಿ ಯೋಜನೆಗಳ ಪ್ರಗತಿ : ಗೃಹಲಕ್ಷ್ಮಿ: ಜಿಲ್ಲೆಯ 3.78 ಲಕ್ಷಕ್ಕೂ ಅಧಿಕ ಫಲಾನುಭವಿಗಳಿಗೆ ರೂ.2,363 ಕೋಟಿ ನೇರವಾಗಿ ಜಮೆಯಾಗಿದೆ.

ಅನ್ನಭಾಗ್ಯ: 3.76 ಲಕ್ಷ ಪಡಿತರ ಕಾರ್ಡುದಾರರಿಗೆ 2,45,290 ಕ್ವಿಂಟಾಲ್ ಅಕ್ಕಿ ಹಂಚಿಕೆ ಮಾಡಲಾಗಿದೆ.

ಶಕ್ತಿ ಯೋಜನೆ: 8.25 ಕೋಟಿ ಮಹಿಳೆಯರು ಉಚಿತ ಪ್ರಯಾಣದ ಲಾಭ ಪಡೆದಿದ್ದಾರೆ.

ಗೃಹಜ್ಯೋತಿ: 4.77 ಲಕ್ಷ ಕುಟುಂಬಗಳು ಸೌಲಭ್ಯ ಪಡೆಯುತ್ತಿದ್ದು, ವಿದ್ಯುತ್ ಸಬ್ಸಿಡಿಗಾಗಿ ಸರ್ಕಾರ ₹752 ಕೋಟಿ ವೆಚ್ಚ ಮಾಡಿದೆ.

ಯುವನಿಧಿ: 12,969 ವಿದ್ಯಾರ್ಥಿಗಳಿಗೆ ರೂ.36 ಕೋಟಿ ನೇರ ಖಾತೆಗೆ ಜಮಾ ಮಾಡಲಾಗಿದೆ.

ರಾಜ್ಯದಲ್ಲಿ 1,000 ಕೆಪಿಎಸ್ ಶಾಲೆಗಳನ್ನು ಪ್ರಾರಂಭಿಸಲಾಗಿದ್ದು, ಮುಂದಿನ ಹಂತದಲ್ಲಿ ಮತ್ತಷ್ಟು 1,000 ಕೆಪಿಎಸ್ ಶಾಲೆಗಳನ್ನು ತೆರೆಯಲಾಗುವುದು.

ರಾಜ್ಯಮಟ್ಟದ ಕೆಪಿಎಸ್ ಉದ್ಘಾಟನಾ ಕಾರ್ಯಕ್ರಮವನ್ನು ಶಿವಮೊಗ್ಗದಲ್ಲಿಯೇ ಆಯೋಜಿಸುವ ಉದ್ದೇಶವಿದೆ.

ಶಿವಮೊಗ್ಗ ಜಿಲ್ಲೆಯಲ್ಲಿ ಎಲ್‌ಕೆಜಿಯಿಂದ ದ್ವಿತೀಯ ಪಿಯುಸಿವರೆಗೆ ಒಂದೇ ಸೂರಿನಡಿ ಶಿಕ್ಷಣ ನೀಡುವ 11 ಕೆಪಿಎಸ್ ಶಾಲೆಗಳು ಕಾರ್ಯಾಚರಿಸುತ್ತಿದ್ದು, ಈ ಶೈಕ್ಷಣಿಕ ಸಾಲಿನಲ್ಲಿ ಹೊಸದಾಗಿ 59 ಕೆಪಿಎಸ್ ಶಾಲೆಗಳನ್ನು ಮಂಜೂರು ಮಾಡಲಾಗಿದೆ.

ಜಿಲ್ಲೆಯ 222 ಸರ್ಕಾರಿ ಶಾಲೆಗಳಲ್ಲಿ ಪೂರ್ವಾಪ್ರಾಥಮಿಕ ತರಗತಿಗಳು ನಡೆಯುತ್ತಿವೆ.

ರೈತರ ಹಿತರಕ್ಷಣೆಗಾಗಿ ‘ಮುಖ್ಯಮಂತ್ರಿಗಳ ರೈತ ಚೈತನ್ಯ’ ಹಾಗೂ ‘ರೈತ ಮಿತ್ರ’ ಯೋಜನೆಗಳನ್ನು ಜಾರಿಗೆ ತರಲಾಗಿದೆ.ಮುಂಗಾರು ಮಳೆಯ ಏರುಪೇರು, ಅತಿವೃಷ್ಟಿ ಹಾಗೂ ಬೆಳೆ ಹಾನಿಗೊಳಗಾದ ರೈತರಿಗೆ ಹಾಗೂ ಗ್ರಾಮೀಣ ಪ್ರದೇಶಕ್ಕೆ ಶುದ್ಧ ಕುಡಿಯುವ ನೀರು ಒದಗಿಸಲು ತ್ವರಿತ ಪರಿಹಾರ ಕ್ರಮ ಕೈಗೊಳ್ಳಲಾಗಿದೆ.

ಶಾಲಾ ಕೊಠಡಿಗಳ ದುರಸ್ತಿಗೆ ₹319 ಲಕ್ಷ ಹಾಗೂ ನೂತನ ಕೊಠಡಿಗಳ ನಿರ್ಮಾಣಕ್ಕೆ ರೂ. 1,180 ಲಕ್ಷ ಅನುದಾನ ಮಂಜೂರು ಮಾಡಲಾಗಿದೆ. ಐತಿಹಾಸಿಕ ಪರೀಕ್ಷಾ ಫಲಿತಾಂಶ: ರಾಜ್ಯದಲ್ಲಿ ಈ ಬಾರಿಯ ಎಸ್‌ಎಸ್‌ಎಲ್‌ಸಿ (98.08%) ಹಾಗೂ ಪಿಯುಸಿಯಲ್ಲಿ (92.25%) ದೇಶದಲ್ಲೇ ಚಾರಿತ್ರಿಕ ಫಲಿತಾಂಶ ದಾಖಲಾಗಿದೆ. ಶಿವಮೊಗ್ಗ ಜಿಲ್ಲೆಯಲ್ಲಿ ಎಸ್‌ಎಸ್‌ಎಲ್‌ಸಿ ಫಲಿತಾಂಶ ಶೇ. 96.5 ರಷ್ಟಿದ್ದು, ಹಿಂದಿಗಿಂತ ಶೇ. 14 ರಷ್ಟು ಏರಿಕೆಯಾಗಿದೆ.

  ದ್ವಿತೀಯ ಪಿಯುಸಿವರೆಗಿನ ವಿದ್ಯಾರ್ಥಿಗಳಿಗೆ ಉಚಿತ ಪಠ್ಯಪುಸ್ತಕ ವಿತರಣೆಗೆ ಇದೇ ಮೊದಲ ಬಾರಿಗೆ ಸರ್ಕಾರ ಆದೇಶಿಸಿದೆ.  ಮೆಟ್ರಿಕ್ ನಂತರದ ಬಾಲಕಿಯರ ಹಾಸ್ಟೆಲ್ ಕಟ್ಟಡಗಳಿಗೆ ರೂ.24 ಕೋಟಿ ರೂ. ಮಂಜೂರಾಗಿದೆ. ಕಳೆದೆರಡು-ಮೂರು ವರ್ಷಗಳಲ್ಲಿ ಜಿಲ್ಲೆಗೆ 9 ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯಗಳು ಮಂಜೂರಾಗಿದ್ದು, 1,000ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಪ್ರವೇಶ ದೊರೆತಿದೆ.

ರಾಜ್ಯದ ಯುವಜನರ ಭವಿಷ್ಯಕ್ಕಾಗಿ 72,000 ಸರ್ಕಾರಿ ಹುದ್ದೆಗಳ ಭರ್ತಿಗೆ ಕ್ರಮ ಕೈಗೊಳ್ಳಲಾಗುತ್ತಿದ್ದು, ಇದರ ಭಾಗವಾಗಿ 15,000 ಶಿಕ್ಷಕರ ನೇರ ನೇಮಕಾತಿಗೆ ಈಗಾಗಲೇ ಅಧಿಸೂಚನೆ ಹೊರಡಿಸಲಾಗಿದೆ.‘ಯುವ ಉದ್ಯೋಗ ಸೇತು’: ಖಾಸಗಿ ವಲಯದಲ್ಲಿ ಉದ್ಯೋಗ ಬಯಸುವ ಯುವಕರು ಮತ್ತು ಉದ್ಯೋಗದಾತರ ನಡುವೆ ಸಂಪರ್ಕ ಕಲ್ಪಿಸಲು AI (ಕೃತಕ ಬುದ್ಧಿಮತ್ತೆ) ಆಧಾರಿತ ‘ಯುವ ಉದ್ಯೋಗ ಸೇತು’ ವೇದಿಕೆಯನ್ನು ಜಾರಿಗೆ ತರಲಾಗಿದೆ.

ಸಾರ್ವಜನಿಕರ ಕುಂದುಕೊರತೆಗಳನ್ನು ತ್ವರಿತವಾಗಿ ಆಲಿಸಲು ‘ಪ್ರಜಾಸೇವೆ’ ಎಂಬ ಪ್ರತ್ಯೇಕ ಇಲಾಖೆಯನ್ನು ಸ್ಥಾಪಿಸಲಾಗಿದೆ. ತಾಲೂಕು ಮತ್ತು ಗ್ರಾಮ ಪಂಚಾಯತಿ ಮಟ್ಟದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು, ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳ ಸಮ್ಮುಖದಲ್ಲೇ ಸ್ಥಳದಲ್ಲೇ ಸಮಸ್ಯೆ ಪರಿಹರಿಸುವ ‘ಪ್ರಜಾಸೇವಾ ಅಭಿಯಾನ’ ಜಾರಿಗೆ ಬಂದಿದೆ.

ಗ್ರಾಮೀಣ ರಸ್ತೆಗಳ ಅಭಿವೃದ್ಧಿ: ಮುಖ್ಯಮಂತ್ರಿ ಮೂಲಸೌಕರ್ಯ ಅಭಿವೃದ್ಧಿ ಕಾರ್ಯಕ್ರಮದಡಿ 250 ಕೋಟಿ ರೂ. ಅನುದಾನ ಮಂಜೂರಾಗಿದ್ದು, ಸಂಪರ್ಕ ರಸ್ತೆಗಳು ಹಾಗೂ ಮೂಲಸೌಕರ್ಯಗಳನ್ನು ಬಲಪಡಿಸಲಾಗುತ್ತಿದೆ. ವಿಬಿ ಜಿ ರಾಮ್ ಜಿ 2025-26ರಲ್ಲಿ 19 ಲಕ್ಷ ಮಾನವ ದಿನಗಳನ್ನು ರಚಿಸಿ, 68.69 ಕೋಟಿ ರೂ. ಕೂಲಿ ಹಾಗೂ 8.82 ಕೋಟಿ ರೂ. ಸಾಮಗ್ರಿಗಳಿಗೆ ವೆಚ್ಚ ಮಾಡಲಾಗಿದೆ.

2025-26ರಲ್ಲಿ 19 ಲಕ್ಷ ಮಾನವ ದಿನಗಳನ್ನು ರಚಿಸಿ, ರೂ.68.69 ಕೋಟಿ ರೂ. ಕೂಲಿ ಹಾಗೂ ರೂ.8.82 ಕೋಟಿ ರೂ. ಸಾಮಗ್ರಿಗಳ ವೆಚ್ಚ ಮಾಡಲಾಗಿದೆ. ಗ್ರಾಮೀಣ ಕುಡಿಯುವ ನೀರು ಸರಬರಾಜು ಯೋಜನೆಯಡಿ 1,005 ಕೋಟಿ ರೂ. ವೆಚ್ಚದಲ್ಲಿ ಕಾಮಗಾರಿಗಳು ಸಾಗುತ್ತಿದ್ದು, ಸಾಗರ ತಾಲೂಕಿನ ಆನಂದಪುರ ಯೋಜನೆಯ ರೂ.100.94 ಕೋಟಿ ರೂ. ಅಂದಾಜಿನ ಕೆಲಸಗಳು ಅಂತಿಮ ಹಂತದಲ್ಲಿವೆ.

ಮೆಗಾ ಆಸ್ಪತ್ರೆಯ ಮೇಲ್ದರ್ಜೆಗೆ ಏರಿಸುವ ಕೆಲಸ ನಡೆಯುತ್ತಿದ್ದು, ಕ್ಯಾನ್ಸರ್ ಆಸ್ಪತ್ರೆ, ಹೃದ್ರೋಗ ವಿಭಾಗ ಹಾಗೂ ತೀವ್ರ ನಿಗಾ ಘಟಕಗಳನ್ನು ಮೇಲ್ದರ್ಜೆಗೇರಿಸಲಾಗುತ್ತಿದೆ. ದಶಕಗಳಿಂದ ಬಾಕಿ ಇರುವ ಶರಾವತಿ ಸಂತ್ರಸ್ತರ ಹಾಗೂ ಬಾಗರ್ ಹುಕುಂ ಸಾಗುವಳಿದಾರರ ಹಕ್ಕುಗಳ ನಿವಾರಣೆಗೆ ಸರ್ಕಾರ ಆದ್ಯತೆ ನೀಡಿದೆ.

ರೈತರು, ಬಡವರು ಹಾಗೂ ಹಿಂದುಳಿದವರ ಶ್ರೇಯೋಭಿವೃದ್ಧಿಗಾಗಿ ‘ಎಸ್‌ಆರ್ ಬೊಮ್ಮಾಯಿ’ ಮತ್ತು ‘ದೇವರಾಜ ಅರಸು’ ಅವರ ಆಶಯದಂತೆ ಮೂಲಭೂತ ಸೌಕರ್ಯಗಳನ್ನು ಒದಗಿಸಲು ಸರ್ಕಾರ ಬದ್ಧವಾಗಿದೆ.

Join WhatsApp

Join Now

Join Telegram

Join Now