Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಎಲೆಕ್ಟ್ರೀಕಲ್ ಮೋಟಾರ್ ರಿವೈಂಡಿಂಗ್ ಮತ್ತು ಪಂಪ್‍ಸೆಟ್ ರಿಪೇರಿ ಉಚಿತ ತರಬೇತಿ : ಜುಲೈ 11ರಂದು ಸಂದರ್ಶನ

---Advertisement---

ಚಿತ್ರದುರ್ಗ, ಜುಲೈ. 07: ಚಿತ್ರದುರ್ಗ ನಗರದ ಬ್ಯಾಂಕ್ ಕಾಲೋನಿಯಲ್ಲಿರುವ ರುಡ್ ಸೆಟ್ ಸಂಸ್ಥೆ ವತಿಯಿಂದ  ಗ್ರಾಮೀಣ ಭಾಗದ ನಿರುದ್ಯೋಗಿ ಯುವಕ ಯುವತಿಯರಿಗಾಗಿ ಸ್ವ ಉದ್ಯೋಗ ಮಾಡಲು ಎಲೆಕ್ಟ್ರೀಕಲ್ ಮೋಟಾರ್ ರಿವೈಂಡಿಂಗ್ ಮತ್ತು ಪಂಪ್‍ಸೆಟ್ ರಿಪೇರಿ ತರಬೇತಿಗೆ ಇದೇ ಜುಲೈ 11 ರಂದು ಸಂದರ್ಶನ ಆಯೋಜಿಸಲಾಗಿದೆ. ಆಸಕ್ತರು ನೇರವಾಗಿ ಸಂದರ್ಶನದಲ್ಲಿ ಭಾಗವಹಿಸಬಹುದಾಗಿದೆ.

 

ತರಬೇತಿಯ ಅವಧಿ 30 ದಿನಗಳಾಗಿದ್ದು, ಊಟ ಮತ್ತು ವಸತಿ ಸಹಿತವಾಗಿ ಸಂಪೂರ್ಣ ಉಚಿತವಾಗಿರುತ್ತದೆ.  19 ರಿಂದ 45 ವರ್ಷದೊಳಗಿನ ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಕನ್ನಡ ಓದಲು ಬರೆಯುವ ಜ್ಞಾನ ಹೊಂದಿರಬೇಕು. ತರಬೇತಿಗೆ ಸಂಬಂಧಿಸಿದಂತೆ ಪ್ರಾಥಮಿಕ ಜ್ಞಾನ ಹೊಂದಿದ್ದು, ಉದ್ಯೋಗ ಮಾಡಬೇಕೆಂಬ ಆಸಕ್ತಿ ಹೊಂದಿರಬೇಕು. ಆಸಕ್ತರು ತಮ್ಮ ತಮ್ಮ ಮೊಬೈಲ್ ನಂಬರ್‍ವುಳ್ಳ ಸ್ವವಿಳಾಸದ ಅರ್ಜಿಯೊಂದಿಗೆ, ಆಧಾರ್ ಕಾರ್ಡ್, ರೇಷನ್ ಕಾರ್ಡ್, ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಬ್ಯಾಂಕ್ ಪಾಸ್‍ಬುಕ್ ಜೆರಾಕ್ಸ್ ಪ್ರತಿಗಳೊಂದಿಗೆ ಇದೇ ಜುಲೈ 11ರಂದು ರುಡ್‍ಸೆಟ್ ಸಂಸ್ಥೆಯಲ್ಲಿ ನೇರವಾಗಿ ಸಂದರ್ಶನದಲ್ಲಿ ಭಾಗವಹಿಸಬಹುದು. ಹೆಚ್ಚಿನ ಮಾಹಿತಿಗಾಗಿ ಮೊ.8431329162, 861828445, 8660627785 ಅನ್ನು ಸಂಪರ್ಕಿಸಬಹುದು ಎಂದು ಚಿತ್ರದುರ್ಗ ರುಡ್‍ಸೆಡ್ ಸಂಸ್ಥೆಯ ನಿರ್ದೇಶಕರು ತಿಳಿಸಿದ್ದಾರೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now