
ಚಿತ್ರದುರ್ಗ, (ಫೆ.04) : ಏಪ್ರಿಲ್ ತಿಂಗಳಿನಿಂದ ಆರಂಭವಾಗುವ ಎಸೆಸೆಲ್ಸಿ ಪರೀಕ್ಷೆಯ 10 ನೇ ತರಗತಿಯ ಸಿಬಿಎಸ್ಇ ವಿದ್ಯಾರ್ಥಿಗಳಿಗೆ ಅನುಕೂಲವಾಗಲು ಶ್ರೀ ಚೈತನ್ಯ ಪದವಿಪೂರ್ವ ಕಾಲೇಜಿನಲ್ಲಿ ಫೆ. 05 ರಂದು ಉಚಿತ ಕಾರ್ಯಾಗಾರವನ್ನು ಏರ್ಪಡಿಸಲಾಗಿದೆ.

ನಗರದ ಹೊಳಲ್ಕೆರೆ ರಸ್ತೆಯ ಶ್ರೀ ಯಾದವಾನಂದ ಮಠದ ಆವರಣದಲ್ಲಿರುವ
ಶ್ರೀ ಚೈತನ್ಯ ಪದವಿಪೂರ್ವ ಕಾಲೇಜು ಸಭಾಂಗಣದಲ್ಲಿ ಕಾರ್ಯಾಗಾರ ಹಮ್ಮಿಕೊಳ್ಳಳಾಗಿದೆ.
ವಾರ್ಷಿಕ ಪರೀಕ್ಷೆಯಲ್ಲಿ ಗಣಿತ ವಿಷಯದಲ್ಲಿ ಹೆಚ್ಚು ಅಂಕಗಳನ್ನು ಪಡೆಯುವ ಬಗ್ಗೆ ಅನುಭವಿ ಉಪನ್ಯಾಸಕರಾದ ಮಹೇಶ್ ಆರಾಧ್ಯ ಅವರು ವಿಷಯ ದ ಕುರಿತು ಸೂಕ್ತ ಉಪನ್ಯಾಸ ಮತ್ತು ಮಾರ್ಗದರ್ಶನ ನೀಡಲಿದ್ದಾರೆ.
ವಾರ್ಷಿಕ ಪರೀಕ್ಷೆಯ ಬಹು ನಿರೀಕ್ಷಿತ ಪ್ರಶ್ನೆಗಳ ಬಗ್ಗೆ ವಿದ್ಯಾರ್ಥಿಗಳು ಈ ಕಾರ್ಯಾಗಾರದಲ್ಲಿ ಚರ್ಚಿಸಿ ತಮ್ಮೊಳಗಿರುವ ಅನುಮಾನ, ಆತಂಕಗಳನ್ನು ದೂರಮಾಡಿಕೊಳ್ಳಲು ಈ ಕಾರ್ಯಾಗಾರ ಸಹಕಾರಿಯಾಗಲಿದೆ.
ಇದರ ಸದುಪಯೋಗವನ್ನು ಜಿಲ್ಲೆಯ ಎಲ್ಲಾ ವಿದ್ಯಾರ್ಥಿಗಳು ಪಡೆದುಕೊಂಡು ಮುಂದಿನ ಪರೀಕ್ಷೆಗೆ ಸನ್ನದ್ದರಾಗಿ ಹೆಚ್ಚು ಅಂಕಗಳನ್ನು ಪಡೆಯುವಂತಾಗಲಿ ಎಂದು ಕಾಲೇಜು ಆಡಳಿತ ಮಂಡಳಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹೆಚ್ಚಿನ ಮಾಹಿತಿಗಾಗಿ ಮತ್ತು ನೋಂದಣಿಗಾಗಿ
Phone : 9164166555 ಸಂಪರ್ಕಿಸಲು ಕೋರಿದೆ.

GIPHY App Key not set. Please check settings