Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಬೆಂಗಳೂರಲ್ಲಿಇಂದಿನಿಂದ ʻತ್ಯಾಜ್ಯದಿಂದ ಸ್ವಾತಂತ್ರ್ಯʼ ಅಭಿಯಾನ : ಸಿಎಂ ಡಿ.ಕೆ. ಶಿವಕುಮಾರ್ ಚಾಲನೆ

---Advertisement---

ಬೆಂಗಳೂರು.ಆಗಸ್ಟ್.1: ರಾಜಧಾನಿ ಬೆಂಗಳೂರನ್ನು ಮತ್ತಷ್ಟು ಸ್ವಚ್ಛ, ಸುಂದರ ಹಾಗೂ ಆರೋಗ್ಯಕರವನ್ನಾಗಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಬೃಹತ್‌ ಹೆಜ್ಜೆಯಿಟ್ಟಿದೆ. ನಗರದಲ್ಲಿ ಇಂದಿನಿಂದ ʻತ್ಯಾಜ್ಯದಿಂದ ಸ್ವಾತಂತ್ರ್ಯʼ ಹೆಸರಿನ ವಿಶೇಷ ಸ್ವಚ್ಛತಾ ಅಭಿಯಾನಕ್ಕೆ ಚಾಲನೆ ನೀಡಲಾಗಿದೆ.

ಹೆಬ್ಬಾಳ ಮೇಲ್ಸೇತುವೆ ಸಮೀಪವಿರುವ ನಾಡಪ್ರಭು ಕೆಂಪೇಗೌಡರ ಪ್ರತಿಮೆ ಬಳಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ, ಮಾನ್ಯ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು, ಗ್ರೇಟರ್‌ ಬೆಂಗಳೂರು ಅಭಿವೃದ್ಧಿ ಸಚಿವರಾದ ಕೃಷ್ಣ ಬೈರೇಗೌಡ ಅವರೊಂದಿಗೆ ಸೇರಿ ಈ ಅಭಿಯಾನಕ್ಕೆ ಅಧಿಕೃತ ಚಾಲನೆ ನೀಡಿದರು.

ಈ ಅಭಿಯಾನದಡಿ ಕಟ್ಟಡ ನಿರ್ಮಾಣ ತ್ಯಾಜ್ಯ, ಘನ ತ್ಯಾಜ್ಯ, ಹಳೆಯ ವಿದ್ಯುತ್ ಕಂಬಗಳು, ಪೈಪ್‌ಗಳು, ಮಣ್ಣಿನ ಗುಡ್ಡೆಗಳು, ಬೆಳೆದು ನಿಂತ ಕಳೆಗಿಡಗಳು ಹಾಗೂ ಮರದ ಕೊಂಬೆಗಳು ಸೇರಿದಂತೆ ಒಟ್ಟು 22,372 ಟನ್‌ಗಳಷ್ಟು ತ್ಯಾಜ್ಯವನ್ನು ತೆರವುಗೊಳಿಸಲು ನಿರ್ಧರಿಸಲಾಗಿದೆ.

ಬೆಂಗಳೂರು ನಗರದ ಪ್ರಮುಖ ರಸ್ತೆಗಳು, ಮೇಲ್ಸೇತುವೆಗಳು, ಪಾದಚಾರಿ ಮಾರ್ಗಗಳು ಹಾಗೂ ಸಾರ್ವಜನಿಕ ಸ್ಥಳಗಳನ್ನು ಸಂಪೂರ್ಣ ಸ್ವಚ್ಛಗೊಳಿಸಿ ನಗರದ ಸೌಂದರ್ಯವನ್ನು ಮತ್ತಷ್ಟು ಹೆಚ್ಚಿಸುವ ಗುರಿಯನ್ನು ಈ ಅಭಿಯಾನ ಹೊಂದಿದೆ. ಸಾರ್ವಜನಿಕರ ಸಹಕಾರದೊಂದಿಗೆ ತ್ಯಾಜ್ಯ ಮುಕ್ತ ಬೆಂಗಳೂರನ್ನು ರೂಪಿಸಲು ಸರ್ಕಾರ ಬದ್ಧವಾಗಿದೆ.

 

ಈ ಕಾರ್ಯಕ್ರಮದಲ್ಲಿ ಇಂಧನ ಸಚಿವರಾದ ಶ್ರೀ ಕೆ.ಜೆ ಜಾರ್ಜ್‌, ಸಂಸದರಾದ ಶೋಭಾ ಕರಂದ್ಲಾಜೆ, ಶಾಸಕರಾದ ಎಸ್‌.ಆರ್‌ ವಿಶ್ವನಾಥ್‌, ಎ.ಸಿ ಶ್ರೀನಿವಾಸ್‌, ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಮುಖ್ಯ ಆಯುಕ್ತರಾದ ಎಂ. ಮಹೇಶ್ವರ್‌ ರಾವ್‌, ನಗರ ಪೊಲೀಸ್‌ ಕಮಿಷನರ್‌ ಸೀಮಂತ್‌ ಕುಮಾರ್‌ ಸಿಂಗ್‌ ಸೇರಿದಂತೆ ಹಲವು ಗಣ್ಯರು ಭಾಗವಹಿಸಿದ್ದರು.

Join WhatsApp

Join Now

Join Telegram

Join Now