Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

---Advertisement---

ಆಗಸ್ಟ್ 13 ರಿಂದ 15 ರವರೆಗೆ ಹರ್ ಘರ್ ತಿರಂಗಾ : ಎಲ್ಲರ ಮನೆ ಮನೆಗಳ ಮೇಲೆ ಹಾರಾಡಲಿ ಭಾರತದ ರಾಷ್ಟ್ರಧ್ವಜ : ದಿವ್ಯಪ್ರಭು ಜಿ.ಆರ್.ಜೆ.

---Advertisement---

 

ಮಾಹಿತಿ ಮತ್ತು ಫೋಟೋ ಕೃಪೆ
ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಚಿತ್ರದುರ್ಗ

ಚಿತ್ರದುರ್ಗ ಆ. 12 : ಭಾರತ ಸ್ವಾತಂತ್ರ್ಯದ ಅಮೃತ ಮಹೋತ್ಸವ ನಿಮಿತ್ತ ಸರ್ಕಾರದ ಸೂಚನೆಯಂತೆ ಹರ್ ಘರ್ ತಿರಂಗಾ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದ್ದು, ಇದರ ಅಂಗವಾಗಿ ಆ. 13 ರಿಂದ 15 ರವರೆಗೆ ಮೂರು ದಿನಗಳ ಕಾಲ ಜಿಲ್ಲೆಯ ಪ್ರತಿಯೊಬ್ಬರ ಮನೆ ಮನೆಗಳ ಮೇಲೆ ಭಾರತದ ರಾಷ್ಟ್ರಧ್ವಜ ಹಾರಿಸುವ ಮೂಲಕ ಪ್ರತಿಯೊಬ್ಬರಲ್ಲೂ ದೇಶಪ್ರೇಮ ಮೂಡಿಸುವಂತಾಗಬೇಕು ಎಂದು ಜಿಲ್ಲಾಧಿಕಾರಿ ದಿವ್ಯಪ್ರಭು ಜಿ.ಆರ್.ಜೆ. ಅವರು ಮನವಿ ಮಾಡಿದ್ದಾರೆ.

ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಂಗವಾಗಿ ರಾಜ್ಯಾದ್ಯಂತ ಇದೇ ಆ. 13 ರಿಂದ 15 ರವರೆಗೆ ಹರ್ ಘರ್ ತಿರಂಗಾ ಅಭಿಯಾನವನ್ನು ಆಯೋಜಿಸಲಾಗಿದೆ.  ಈ ಅವಧಿಯಲ್ಲಿ ಎಲ್ಲ ಸರ್ಕಾರಿ ಕಚೇರಿಗಳು, ಸಾರ್ವಜನಿಕ ಉದ್ಯಮಗಳು, ಸಾರ್ವಜನಿಕ ಸ್ಥಳಗಳು, ಸಂಘ ಸಂಸ್ಥೆಗಳಲ್ಲಿ ರಾಷ್ಟ್ರ ಧ್ವಜಾರೋಹಣ ಮಾಡುವುದು ಸೇರಿದಂತೆ ಸಾರ್ವಜನಿಕರೂ ಸಹ ಸ್ವಯಂ ಪ್ರೇರಿತವಾಗಿ ಭಾಗವಹಿಸಿ, ತಮ್ಮ ತಮ್ಮ ಮನೆಗಳ ಮೇಲೆ ರಾಷ್ಟ್ರಧ್ವಜ ಹಾರಿಸುವ ಮೂಲಕ ಅಭಿಯಾನವನ್ನು ಯಶಸ್ವಿಗೊಳಿಸಬೇಕು.

ಆಗಸ್ಟ್ 13 ರಿಂದ 15 ರವರೆಗೆ ಮೂರು ದಿನ ಎಲ್ಲರ ಮನೆ ಮನೆಗಳ ಮೇಲೆ, ಸರ್ಕಾರಿ, ಅರೆ ಸರ್ಕಾರಿ ಕಚೇರಿಗಳು, ಶಾಲಾ ಕಾಲೇಜುಗಳು, ಸಾರ್ವಜನಿಕ ಸ್ಥಳಗಳಲ್ಲಿ ಧ್ವಜ ಶಿಷ್ಟಾಚಾರವನ್ನು ಚಾಚು ತಪ್ಪದೆ ಪಾಲನೆ ಮಾಡಿ, ಬೆಳಿಗ್ಗೆ 06 ರಿಂದ ಸಂಜೆ 06 ಗಂಟೆಯವರೆಗೆ ರಾಷ್ಟ್ರಧ್ವಜ ಹಾರಿಸಬೇಕು ಎಂದು ತಿಳಿಸಿದ್ದಾರೆ.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment