ಆಮ್ ಆದ್ಮಿ ಪಕ್ಷದ ವತಿಯಿಂದ ಅಸ್ಪತ್ರೆಯಲ್ಲಿನ ರೋಗಿಗಳಿಗೆ ಹಣ್ಣುಗಳ ವಿತರಣೆ

1 Min Read

 

ವರದಿ ಮತ್ತು ಫೋಟೋ
                        ಸುರೇಶ್ ಪಟ್ಟಣ್,                         
ಮೊ : 87220 22817

ಚಿತ್ರದುರ್ಗ,(ನ.01) :  ನಗರದ ಜಿಲ್ಲಾ ಅಸ್ಪತ್ರೆಯಲ್ಲಿನ ಒಳ ರೋಗಿಗಳಿಗೆ ಆಮ್ ಆದ್ಮಿ ಪಕ್ಷದ ವತಿಯಿಂದ ಕನ್ನಡ ರಾಜ್ಯೋತ್ಸವದ ಅಂಗವಾಗಿ ಹಣ್ಣುಗಳನ್ನು ವಿತರಣೆ ಮಾಡಲಾಯಿತು.

ಈ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾಧ್ಯಕ್ಷ ಜಗದೀಶ್ ಮಾತನಾಡಿ, ನಮ್ಮ ಪಕ್ಷವನ್ನು ಜಿಲ್ಲೆಯಲ್ಲಿ ಸಂಘಟಿಸಲಾಗುತ್ತಿದೆ. ಇದಕ್ಕಾಗಿ ವಿವಿಧ ರೀತಿಯ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಇದರಲ್ಲಿ ರೋಗಿಗಳಿಗೆ ಹಣ್ಣು ವಿತರಣೆಯ ಕಾರ್ಯಕ್ರಮವೂ ಒಂದಾಗಿದೆ. ಕನ್ನಡ ರಾಜ್ಯೋತ್ಸವವನ್ನು ಎಲ್ಲರಂತೆ ಆಚರಣೆ ಮಾಡುವುದಕ್ಕಿಂತ ವಿಭಿನ್ನವಾಗಿ ಆಚರಣೆ ಮಾಡಬೇಕೆಂಬ ಉದ್ದೇಶದಿಂದ ರೋಗಿಗಳಿಗೆ ಹಣ್ಣು ವಿತರಣೆ ಕಾರ್ಯಕ್ರಮ ಏರ್ಪಡಿಸಲಾಗಿದೆ ಎಂದರು.

ಚಿತ್ರದುರ್ಗ ಜಿಲ್ಲಾ ಆಸ್ಪತ್ರೆಯಲ್ಲಿ ವಿವಿಧ ರೀತಿಯ ಸಮಸ್ಯೆಗಳಿದ್ದು ಅವುಗಳ ನಿವಾರಣೆಗೆ ನಮ್ಮ ಪಕ್ಷ ಮುಂದಾಗಲಿದೆ. ಇದರ ಬಗ್ಗೆ ತಿಳಿಯುವ ಸಲುವಾಗಿ ಈ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಮುಂದಿನ ದಿನಮಾನದಲ್ಲಿ ರಾಜ್ಯದಲ್ಲಿ ನಮ್ಮ ಸರ್ಕಾರ ಅಧಿಕಾರಕ್ಕೆ ಬಂದರೆ ಈ ಜಿಲ್ಲಾ ಅಸ್ಪತೆಯನ್ನು ಹೈಟೆಕ್ ಆಸ್ಪತ್ರೆಯಾಗಿ ನಿರ್ಮಾಣ ಮಾಡಲಾಗುತ್ತದೆ, ಇಲ್ಲಿನ ರೋಗಿಗಳಿಗೆ ಉತ್ತಮವಾದ ಚಿಕಿತ್ಸೆಯನ್ನು ನೀಡಿ ಸದಾ ವೈದ್ಯರು ಸಿಗುವಂತೆ ಮಾಡಲಾಗುತ್ತದೆ ಎಂದರು.

ಈ ಸಂದರ್ಭದಲ್ಲಿ ಉಪಾಧ್ಯಕ್ಷರಾದ ಫಾರೂಕ್ ಎ.ಆಲಿ, ಚಿತ್ರದುರ್ಗ ಮಹಿಳಾ ಘಟಕದ ಅಧ್ಯಕ್ಷೆ ಶ್ರೀಮತಿ ರಾಧಾ, ಕಾರ್ಯದರ್ಶೀ ಅನಿಲಮ್ಮ, ಜಿಲ್ಲಾ ಕಾರ್ಯದರ್ಶೀ ಕೆಂಚಪ್ಪ, ಪ್ರಧಾನ ಕಾರ್ಯದರ್ಶಿ ಮನೋಹರ್, ಸುಭಾಷ್, ಆನಂದ್ ರಾಜಣ್ಣ, ನಜೀರ್ ಸೇರಿದಂತೆ ಇತರರು ಭಾಗವಹಿಸಿದ್ದರು.

Share This Article
Leave a Comment

Leave a Reply

Your email address will not be published. Required fields are marked *