ಹಾನಗಲ್: ಈ ಉಪಚುನಾವಣೆ ಸಂದರ್ಭದಲ್ಲಿ ಬಿಜೆಪಿ ನಾಯಕರು ಅನ್ಯ ಪಕ್ಷಗಳ ನಾಯಕರ ಬಗ್ಗೆ ಯಾಕೆ ಅವಹೇಳನ ಮಾಡುತ್ತಿದ್ದಾರೆ ಎಂಬುದನ್ನು ನೀವು ವಿಮರ್ಶೆ ಮಾಡಬೇಕು. ಜನರ ಬಳಿ ಮತ ಕೇಳಲು ಅವರಿಗೆ ಯಾವುದೇ ಸಾಧನೆ, ಅದನ್ನು ಹೇಳುವ ಶಬ್ಧಗಳಿಲ್ಲ. ಏಕೆಂದರೆ ಅವರು ಸಾಧನೆಯನ್ನೇ ಮಾಡಿಲ್ಲ ಎಂದು ಸರ್ಕಾರದ ವಿರುದ್ದ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಕಿಡಿಕಾರಿದರು.
ಇನ್ನೂ ಈ ವೇಳೆ ಮಾತನಾಡಿದ ಅವರು, ಜನರ ನೋವು ಮರೆಸಲು ಮಾಧ್ಯಮಗಳ ಮೂಲಕ ಇಂತಹ ಹೇಳಿಕೆ ನೀಡುತ್ತಿದ್ದಾರೆ. ನೀವು ಯಾಕೆ ಸುಮ್ಮನಿದ್ದೀರಿ ಎಂದು ನಮ್ಮನ್ನು ಪ್ರಶ್ನೆ ಮಾಡುತ್ತಿದ್ದೀರಿ. ನಾವು ಚುನಾವಣೆ ಮುಗಿಯಲಿ ಎಂದು ತಾಳ್ಮೆ ವಹಿಸಿದ್ದೇವೆ. ಕಾಶ್ಮೀರದಿಂದ ಕನ್ಯಾಕುಮಾರಿವರೆಗೂ ಕಾಂಗ್ರೆಸ್ ಪಕ್ಷದ ಸೈನ್ಯವೇ ಇದೆ. ಇದು ಕೇವಲ ಚುನಾವಣೆ ವಿಚಾರ ಮಾತ್ರವಲ್ಲ. ಆ ರಾಹುಲ್ ಗಾಂಧಿ ಕುಟುಂಬದ ತ್ಯಾಗದ ಮುಂದೆ ಇಡೀ ಬಿಜೆಪಿ ಪಕ್ಷ ಶೇ.1ರಷ್ಟು ಸಮಕ್ಕೂ ನಿಲ್ಲುವುದಿಲ್ಲ. ನಮ್ಮ ಪಕ್ಷ ಬದುಕಿದೆ. ಈ ದೇಶದ ಇತಿಹಾಸದ ಪಕ್ಷ ಇದಾಗಿದೆ ಎಂದರು.
ನಮಗೂ ಕೇಸರಿ ಬಣ್ಣದ ಮೇಲೆ ಗೌರವವಿದೆ. ಅದು ನಮ್ಮ ರಾಷ್ಟ್ರಧ್ವಜದ ಭಾಗ. ಚುನಾವಣೆ ಮುಗಿದ ಮೇಲೆ ಈ ವಿಚಾರವಾಗಿ ನಾವು ಮಾತಾಡುತ್ತೇವೆ. ಈ ಮಾನಸಿಕ ಅಸ್ವಸ್ಥರಿಗೆ ಯಾವ ರೀತಿ ಉತ್ತರ ಕೊಡಬೇಕೋ ಅದಕ್ಕೂ ಸಮಯ ನಿಗದಿ ಮಾಡುತ್ತೇವೆ. ಚುನಾವಣೆ ಸಮಯದಲ್ಲಿ ಜನರ ನೋವು, ಬದುಕಿನ ಬಗ್ಗೆ ಮಾತನಾಡಲಿ. ಪ್ರತಿ ವ್ಯಕ್ತಿಯ ಬದುಕಿನಲ್ಲಿ ಬಿಜೆಪಿ ಏನಾದರೂ ಬದಲಾವಣೆ ತಂದಿದೆಯಾ? ಇಲ್ಲವೇ..? ಎಂಬುದಷ್ಟೇ ನಮ್ಮ ಪ್ರಶ್ನೆ. ಇದಕ್ಕೆ ಅವರು ಉತ್ತರ ನೀಡಿ, ಚುನಾವಣೆ ಎದುರಿಸಲಿ. ಜನರು ಇದಕ್ಕೆಲ್ಲ ಚುನಾವಣೆಯಲ್ಲಿ ಉತ್ತರ ನೀಡಲಿದ್ದಾರೆ. ನೋಂದ ಜನ ತಮ್ಮ ಆಕ್ರೋಶವನ್ನು ವ್ಯಕ್ತಪಡಿಸಲಿದ್ದಾರೆ. ಇದು ಮುಖ್ಯಮಂತ್ರಿಗಳ ಜಿಲ್ಲೆಯ ಕ್ಷೇತ್ರವಾಗಿದ್ದು, ಅವರಿಗೆ ಸೋಲಿನ ಭಯ ಕಾಡುತ್ತಿದೆ. ಹೀಗಾಗಿ ಜನರ ಸಮಸ್ಯೆಗಳ ವಿಚಾರ ಮರೆಮಾಚಲು ವೈಯಕ್ತಿಕ ಟೀಕೆಗೆ ನಿಂತಿದ್ದಾರೆ ಎಂದರು.
ಬೆಂಗಳೂರು: ರಾಜ್ಯಾದ್ಯಂತ ಮೈಕ್ರೋ ಫೈನಾನ್ಸ್ ಕಂಪನಿಗಳ ಕಿರುಕುಳ ಹೆಚ್ಚಾಗಿದೆ. ಇದರಿಂದ ಅದೆಷ್ಟೋ ಜನ ತಮ್ಮ ಪ್ರಾಣವನ್ನೇ ಕಳೆದುಕೊಂಡಿದ್ದಾರೆ. ಸಾಲ ಕೊಟ್ಟ…
ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ. 07 : ಇಂದಿನ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಶೇಂಗಾ, ಕಡಲೆ, ಮೆಕ್ಕೆಜೋಳ ಸೇರಿದಂತೆ ಇತರೆ…
ಬೆಂಗಳೂರು: ನಟ ಡಾಲಿ ಧನಂಜಯ್ ಮದುವೆ ಸಂಭ್ರಮದಲ್ಲಿದ್ದಾರೆ. ಚಿತ್ರದುರ್ಗದ ಅಳಿಯ ಬೇರೆ ಆಗ್ತಾ ಇದ್ದಾರೆ. ಧನ್ಯತಾ ಮೂಲತಃ ಚಿತ್ರದುರ್ಗದವರು. ಆದರೆ…
ಬೆಂಗಳೂರು: ಇಂದು ಹೈಕೋರ್ಟ್ ಮೂಡಾ ಹಗರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಿದ್ದು ಸಿಎಂ ಸಿದ್ದರಾಮಯ್ಯ ಅವರಿಗೆ ಬಿಗ್ ರಿಲೀಫ್ ನೀಡಿದೆ. ಈ…
ಈ ರಾಶಿಯವರಿಗೆ ಒಳ್ಳೆಯ ಉದ್ಯೋಗ ಅವಕಾಶಗಳು ಒದಗಿ ಬರಲಿವೆ, ಈ ರಾಶಿಯವರಿಗೆ ಉತ್ತಮ ಸಂಗಾತಿ ಸಿಗುವರು, ಶುಕ್ರವಾರದ ರಾಶಿ ಭವಿಷ್ಯ…
144 ವರ್ಷಗಳಿಗೊಮ್ಮೆ ಬರುವ ಮಹಾಕುಂಭಮೇಳದಲ್ಲಿ ಪುಣ್ಯ ಸ್ನಾನ ಮಾಡಿದರೆ ಕರ್ಮ ಕಳೆಯುತ್ತದೆ ಎಂದು ನಂಬಲಾಗಿದೆ. ಹೀಗಾಗಿ ಕೋಟ್ಯಾಂತರ ಮಂದಿ…