Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಮೊಬೈಲ್, ಟಿ.ವಿ. ಹಾವಳಿಯಿಂದ ಅನೇಕರು ಸೈಕೋಗಳಾಗಿದ್ದಾರೆ : ಕೆ.ಎಂ.ವೀರೇಶ್

---Advertisement---

 

ಸುದ್ದಿಒನ್, ಚಿತ್ರದುರ್ಗ : ರಂಗಭೂಮಿ ಎಲ್ಲರನ್ನು ಒಟ್ಟುಗೂಡಿಸುತ್ತದೆ. ನಾಟಕಗಳಲ್ಲಿ ಅಭಿನಯಿಸುವ ನಟರು ಪಾತ್ರಗಳಿಗೆ ಜೀವ ತುಂಬುತ್ತಾರೆ. ಇತ್ತೀಚೆಗೆ ಅವಿಭಕ್ತ ಕುಟುಂಬಗಳು ಕಣ್ಮರೆಯಾಗಿದ್ದು, ಸ್ನೇಹ, ಪ್ರೀತಿ, ಬಾಂಧವ್ಯಕ್ಕೆ ಅರ್ಥವಿಲ್ಲದಂತಾಗಿದೆ ಎಂದು ಶರಣ ಸಾಹಿತ್ಯ ಪರಿಷತ್ತಿನ ಜಿಲ್ಲಾಧ್ಯಕ್ಷ ಹಾಗೂ ಬಾಪೂಜಿ ಸಮೂಹ ವಿದ್ಯಾಸಂಸ್ಥೆಯ ಕಾರ್ಯದರ್ಶಿ ಕೆ.ಎಂ.ವೀರೇಶ್ ಅಭಿಪ್ರಾಯಪಟ್ಟರು.

ರಂಗಸೌರಭ ಕಲಾ ಸಂಘ, ಜಿಲ್ಲಾ ಶರಣ ಸಾಹಿತ್ಯ ಪರಿಷತ್ತು, ಬಾಪೂಜಿ ಶಿಕ್ಷಣ ಮಹಾವಿದ್ಯಾಲಯ, ಕನ್ನಡ ಮತ್ತು ಸಂಸ್ಕೃತಿ ನಿರ್ದೇಶನಾಲಯ ಬೆಂಗಳೂರು ಇವರ ಸಂಯುಕ್ತ ಆಶ್ರಯದಲ್ಲಿ ಶುಕ್ರವಾರ ನಗರದ ಪಿಳ್ಳೆಕೆರೇನಹಳ್ಳಿಯ ಬಾಪೂಜಿ ಶಿಕ್ಷಣ ಮಹಾವಿದ್ಯಾಲಯದ ಸಭಾಂಗಣದಲ್ಲಿ ಏರ್ಪಡಿಸಿದ ಒಂದು ದಿನದ ಸೈಕೋಡ್ರಾಮ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದರು.

ರಂಗಕಲೆಗೆ ಪ್ರೋತ್ಸಾಹ ನೀಡಬೇಕಿದೆ. ಶಿಕ್ಷಣದ ಜೊತೆ ವಿದ್ಯಾರ್ಥಿಗಳು ರಂಗಕಲೆಯ ಬಗ್ಗೆ ಆಸಕ್ತಿ ಮೂಡಿಸಿಕೊಳ್ಳಬೇಕು. ರಂಗಕಲೆ ವಿಭಿನ್ನವಾದುದು, ನಮ್ಮ ಸಂಸ್ಥೆಗೆ ಅವಿರತವಾಗಿ ದುಡಿದ ಹಿರಿಯ ರಂಗಕರ್ಮಿ ಅಶೋಕ್‍ಬಾದರದಿನ್ನಿ ಇವರ ಸೇವೆಯನ್ನು ಮರೆಯುವಂತಿಲ್ಲ.

ಶಿಕ್ಷಕರು ನಾಗರೀಕತೆ, ಸಂಸ್ಕೃತಿ ಮತ್ತು ಸಂಸ್ಕಾರ ಕಲಿಸುವ ಗುರುಗಳು. ಮೊಬೈಲ್, ಟಿ.ವಿ. ಹಾವಳಿಯಿಂದ ಅನೇಕರು ಸೈಕೋಗಳಾಗಿದ್ದಾರೆ. ಹಿಂದಿನ ಕಾಲದಲ್ಲಿ ಕೂಡು ಕುಟುಂಬಗಳಿಂದ. ಹಿರಿಯರು ಚಿಕ್ಕವರಿಗೆ ಉತ್ತಮ ಮಾರ್ಗದರ್ಶನ ನೀಡುತ್ತಿದ್ದರು. ಈಗ ಎಲ್ಲವೂ ಪ್ರತಿಷ್ಠೆಯಾಗಿರುವುದರಿಂದ ಹಿರಿಯರನ್ನು ಗೌರವಿಸುವ ಸಂಸ್ಕೃತಿ ಕಡಿಮೆಯಾಗಿದೆ. ಖಿನ್ನತೆಗೊಳಗಾದ ಯುವ ಸಮೂಹ ಅರೆಮನಸ್ಸು, ಅರೆಹುಚ್ಚರಾಗಿ ಚಿಂತಾಗ್ರಸ್ಥರಾಗಿ ಬದುಕುವಂತಾಗಿದೆ. ಎಲ್ಲಾ ಸಮಸ್ಯೆಗಳಿಗೆ ಪರಿಹಾರವಿದೆ. ಆತ್ಮಸಂಕಲ್ಪ, ಆತ್ಮಶಕ್ತಿ ಬೇಕು. ವಸ್ತುಸ್ಥಿತಿಯನ್ನು ಅರ್ಥಮಾಡಿಕೊಳ್ಳದೆ ಕೆಲವರು ಎಲ್ಲವನ್ನು ಅಪನಂಬಿಕೆಯಿಂದ ನೋಡುವಂತಾಗಿದೆ ಎಂದರು.

ಕಾರ್ಯಾಗಾರದ ಅಧ್ಯಕ್ಷತೆ ವಹಿಸಿದ ಬಾಪೂಜಿ ಶಿಕ್ಷಣ ಮಹಾವಿದ್ಯಾಲಯದ ಪ್ರಾಚಾರ್ಯೆ ಎಂ.ಆರ್.ಜಯಲಕ್ಷ್ಮಿ ಶಿಕ್ಷಣದಲ್ಲಿ ಅಭಿನಯ ಕಲೆ ಬಹಳ ಮುಖ್ಯ. ಶಿಕ್ಷಕರು ಅಭಿನಯದ ಮೂಲಕ ಮಕ್ಕಳಿಗೆ ಪಾಠಗಳನ್ನು ಹೇಳಿಕೊಟ್ಟಾಗ ಮನಸ್ಸಿಗೆ ಸುಲಭವಾಗಿ ನಾಟುತ್ತದೆ. ತಂತ್ರಜ್ಞಾನ ಯುಗದಲ್ಲಿ ರಂಗಕಲೆ ನಶಿಸುತ್ತಿರುವುದರಿಂದ ಕಲಾವಿದರ ಬದುಕು ಕಷ್ಟವಾಗುತ್ತಿದೆ. ಹಾಗಾಗಿ ಪ್ರತಿಯೊಬ್ಬರೂ ರಂಗಕಲೆಯ ಬಗ್ಗೆ ಆಸಕ್ತಿ ಬೆಳೆಸಿಕೊಂಡು ರಂಗಕಲಾವಿದರನ್ನು ಉಳಿಸಿ ಬೆಳೆಸಬೇಕಿದೆ ಎಂದರು.

ಸೈಕೋಡ್ರಾಮಾ ಕಾರ್ಯಾಗಾರದ ಸಂಪನ್ಮೂಲ ವ್ಯಕ್ತಿ ಹಾಗೂ ರಾಷ್ಟ್ರೀಯ ನಾಟಕ ಶಾಲೆ ನವದೆಹಲಿ ಪದವೀಧರೆ ಮೇದಿನಿ ಕೆಳಮನೆ ಹೆಗ್ಗೋಡು ಇವರು ಪ್ರಶಿಕ್ಷಣಾರ್ಥಿಗಳಿಗೆ ಮನೋವಿಜ್ಞಾನದ ಮೂಲಕ ಕೂಡಿದ ಬೋಧಿಸಿದರೆ ಹೆಚ್ಚು ಪರಿಣಾಮಕಾರಿಯಾಗುತ್ತದೆ ಎಂದು ಪ್ರಾಯೋಗಿಕವಾಗಿ ಮತ್ತು ತಾತ್ವಿಕ ಅಂಶಗಳನ್ನು ಕುರಿತು ಕಾರ್ಯಾಗಾರವನ್ನು ನಡೆಸಿಕೊಟ್ಟರು.

ರಾಘವೇಂದ್ರ ಶಿಕ್ಷಣ ಮಹಾವಿದ್ಯಾಲಯದ ಉಪನ್ಯಾಸಕ ಡಾ.ಕೆ.ಮೋಹನ್‍ಕುಮಾರ್ ಮಾತನಾಡಿ ಡ್ರಾಮಾ ಥೆರಪಿ ಶಿಕ್ಷಣ ಕ್ಷೇತ್ರದಲ್ಲಿ ಮಕ್ಕಳ ವರ್ತನೆಯ ಒಳನೋಟಗಳನ್ನು ಅರಿಯಲು ಸಹಾಯವಾಗುತ್ತದೆ. ಭಾವನಾತ್ಮಕವಾಗಿ ಆಘಾತ ಮತ್ತು ನಿಂದನೆಗಳನ್ನು ಅನುಭವಿಸಿದ ಮಕ್ಕಳ ಚಿಕಿತ್ಸೆಗೆ ಬಳಸಲಾಗುತ್ತದೆ‌. ಮಗುವಿನ ಸೃಜನಶೀಲ ಸಂವೇದನೆಗಳನ್ನು ಜಾಗೃತಗೊಳಿಸುತ್ತದೆ ಎಂದರು.

ರಂಗ ನಿರ್ದೇಶಕ ಕೆ.ಪಿ.ಎಂ.ಗಣೇಶಯ್ಯ, ರಂಗ ಸಂಘಟಕ ಪ್ರಕಾಶ್ ಬಾದರದಿನ್ನಿ, ಉಪ ಪ್ರಾಚಾರ್ಯ ಹೆಚ್.ಎನ್.ಶಿವಕುಮಾರ್, ಯೋಗ ಶಿಕ್ಷಕ ಮುರಳಿ ಮುಂತಾದವರು ಉಪಸ್ಥಿತರಿದ್ದು ಮಾತನಾಡಿದರು. ಪ್ರಶಿಕ್ಷಣಾರ್ಥಿ ಕಲ್ಪನಶ್ರೀ ಪ್ರಾರ್ಥಿಸಿದರು. ಸಿದ್ದೇಶ್ ಹಳ್ಳಿಕಟ್ಟೆಮಠ ಸ್ವಾಗತಿಸಿದರು. ದಿವ್ಯಶ್ರೀ ವಂದಿಸಿದರು.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment