Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಇನ್ಮುಂದೆ `ಗೃಹಲಕ್ಷ್ಮಿ’ ಹಣ ಬೇಕಾದರೆ ಈ ನಿಯಮಗಳ ಪಾಲನೆ ಕಡ್ಡಾಯ!

---Advertisement---

ಬೆಂಗಳೂರು.ಜುಲೈ.20: ರಾಜ್ಯದ ಕಾಂಗ್ರೆಸ್ ಸರ್ಕಾರದ ಅತ್ಯಂತ ಜನಪ್ರಿಯ ಹಾಗೂ ಮಹತ್ವಾಕಾಂಕ್ಷಿ ಯೋಜನೆಗಳಲ್ಲೊಂದಾದ ‘ಗೃಹಲಕ್ಷ್ಮಿ’ ಯೋಜನೆಗೆ ಅಂತಿಮವಾಗಿ ಮೇಜರ್ ಸರ್ಜರಿ ಮಾಡಲು ಸರ್ಕಾರ ಮುಂದಾಗಿದೆ. ಯೋಜನೆಯ ಹೆಸರಿನಲ್ಲಿ ಅನರ್ಹರು ಹಣ ಲೂಟಿ ಮಾಡುತ್ತಿದ್ದಾರೆಂಬ ದೂರುಗಳು ವ್ಯಾಪಕವಾಗಿ ಕೇಳಿಬಂದ ಹಿನ್ನೆಲೆಯಲ್ಲಿ, ಜುಲೈ 19ರ ಭಾನುವಾರ ನಡೆದ ಮಹತ್ವದ ಸಚಿವ ಸಂಪುಟ ಸಭೆಯಲ್ಲಿ ಅರ್ಹರನ್ನು ಪತ್ತೆ ಹಚ್ಚಲು ಕಠಿಣ ಮಾರ್ಗಸೂಚಿಗಳನ್ನು ಜಾರಿಗೆ ತರಲು ಅಧಿಕೃತ ತೀರ್ಮಾನ ಕೈಗೊಳ್ಳಲಾಗಿದೆ.

ಸಚಿವ ಸಂಪುಟ ಸಭೆಯ ಬಳಿಕ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು, ಯಾವುದೇ ಕಾರಣಕ್ಕೂ ಅರ್ಹ ಮಹಿಳೆಯರನ್ನು ಯೋಜನೆಯಿಂದ ವಂಚಿಸುವ ಉದ್ದೇಶ ಸರ್ಕಾರಕ್ಕಿಲ್ಲ ಎಂದು ಸ್ಪಷ್ಟಪಡಿಸಿದರು. ಆದರೆ, ಸಾರ್ವಜನಿಕರ ತೆರಿಗೆ ಹಣ ನೇರವಾಗಿ ಅರ್ಹರ ಕೈ ಸೇರಬೇಕೆಂಬ ಆಶಯ ನಮ್ಮದಾಗಿದೆ. ಇದಕ್ಕಾಗಿಯೇ ಇನ್ನು ಮುಂದೆ ಫಲಾನುಭವಿಗಳಿಗೆ ಬಯೋಮೆಟ್ರಿಕ್ ಅಥವಾ ಫೇಸಿಯಲ್ ಅಥೆಂಟಿಕೇಷನ್ (ಮುಖದ ಗುರುತು) ದೃಢೀಕರಣವನ್ನು ಕಡ್ಡಾಯಗೊಳಿಸಲಾಗುತ್ತಿದೆ ಎಂದು ತಿಳಿಸಿದರು.

ಇನ್ಮುಂದೆ ಗೃಹಲಕ್ಷ್ಮಿ ಹಣ ಬೇಕಾದರೆ ಈ ನಿಯಮಗಳು ಪಾಲಿಸಬೇಕು
ಸರ್ಕಾರ ಜಾರಿಗೆ ತರುತ್ತಿರುವ ನೂತನ ಮಾರ್ಗಸೂಚಿಗಳ ಪ್ರಕಾರ, ಇನ್ನು ಮುಂದೆ ಅರ್ಜಿ ಸಲ್ಲಿಸುವಾಗ ಫಲಾನುಭವಿ ಮಹಿಳೆಯರು ತಮ್ಮದೇ ಆದ ವೈಯಕ್ತಿಕ ಮೊಬೈಲ್ ಸಂಖ್ಯೆಯನ್ನು ನೀಡುವುದು ಕಡ್ಡಾಯವಾಗಿದೆ. ಇತರರ ಫೋನ್ ನಂಬರ್ ನೀಡಿ ಸರ್ಕಾರದ ಸಂದೇಶಗಳನ್ನು (SMS) ದುರುಪಯೋಗಪಡಿಸಿಕೊಳ್ಳುವುದಕ್ಕೆ ಇದರಿಂದ ಬ್ರೇಕ್ ಬೀಳಲಿದೆ.

ಅಷ್ಟೇ ಅಲ್ಲದೆ, ಹಣ ಜಮೆಯಾಗಲು ಕೇವಲ ಕುಟುಂಬದ ಯಜಮಾನಿ ಮಹಿಳೆಯ ವೈಯಕ್ತಿಕ ಬ್ಯಾಂಕ್ ಖಾತೆಯನ್ನು ಮಾತ್ರ ಪರಿಗಣಿಸಲಾಗುತ್ತದೆ. ಪತಿ ಅಥವಾ ಮಕ್ಕಳ ಬ್ಯಾಂಕ್ ಖಾತೆಗಳನ್ನು ನೀಡಲು ಯಾವುದೇ ಅವಕಾಶವಿರುವುದಿಲ್ಲ.

ಇದರೊಂದಿಗೆ, ಫಲಾನುಭವಿಗಳ ನೈಜತೆಯನ್ನು ಪರಿಶೀಲಿಸಲು ಸರ್ಕಾರವು ವಿಶೇಷ ಫಾರಂ ಒಂದನ್ನು ಸಿದ್ಧಪಡಿಸುತ್ತಿದ್ದು, ಸರ್ಕಾರದ ಗ್ಯಾರಂಟಿ ತಂಡಗಳು ನೇರವಾಗಿ ಪ್ರತಿ ಮನೆ ಬಾಗಿಲಿಗೆ ಭೇಟಿ ನೀಡಿ ಮಾಹಿತಿ ಸಂಗ್ರಹಿಸಲಿವೆ. ಈ ಸುಧಾರಿತ ತಂತ್ರಜ್ಞಾನ ಆಧಾರಿತ ಮರುಪರಿಶೀಲನಾ ಪ್ರಕ್ರಿಯೆಗಾಗಿ ಸರ್ಕಾರ ಬರೋಬ್ಬರಿ 20 ಕೋಟಿ ರೂಪಾಯಿಗಳನ್ನು ಮೀಸಲಿಟ್ಟಿದೆ.

Join WhatsApp

Join Now

Join Telegram

Join Now