Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಇನ್ಮುಂದೆ SSLC ಪಾಸಾಗಲು ಜಸ್ಟ್ 33% ಇದ್ರೆ ಸಾಕು..!

---Advertisement---

ಬೆಂಗಳೂರು: ಎಸ್ಎಸ್ಎಲ್ಸಿ ಹಾಗೂ ಪಿಯುಸಿ ಅನ್ನೋದು ವಿದ್ಯಾರ್ಥಿಗಳ ಬದುಕಲ್ಲಿ ಬಹಳ ಪ್ರಮುಖವಾದ ಘಟ್ಟವಾಗಿರುತ್ತದೆ. ಅಲ್ಲಿ ಶ್ರಮವಹಿಸಿ ಅಂಕಗಳನ್ನ ತೆಗೆದರೆ ಮುಂದಿನ ಭವಿಷ್ಯ ಅಚ್ಚುಕಟ್ಟಾಗಿರುತ್ತದೆ. ಇಷ್ಟು ವರ್ಷ ಪಾಸಾಗುವುದಕ್ಕೆ 35% ಇದ್ದರೆ ಜಸ್ಟ್ ಪಾಸಾಗ್ತಾ ಇದ್ದರು. ಆದ್ರೆ ಶಿಕ್ಷಣ ಇಲಾಖೆ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿಯನ್ನ ನೀಡಿದೆ. ಅದು 2% ಇಳಿಕೆ ಮಾಡಿದೆ.

ಇನ್ಮುಂದೆ ಎಸ್ಎಸ್ಎಲ್ಸಿಯಲ್ಲಿ 33% ಅಂಕ ಪಡೆದರೆ ಉತ್ತೀರ್ಣ ಎಂದು ಘೋಷಿಸಲಾಗುವುದು. ಈ ವರ್ಷದಿಂದಲೇ ಖಾಸಗಿ ಶಾಲೆಗಳಿಗೂ ಇದು ಅನ್ವಯ ಆಗಲಿದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಮಾಹಿತಿ ನೀಡಿದ್ದಾರೆ. ಪ್ರಸಕ್ತ ವರ್ಷದಿಂದ 33%‌ ಅಂಕ ಪಡೆದರೆ ಎಸ್ಎಸ್ಎಲ್ಸಿ ಪಾಸ್ ಎಂದು ಘೋಷಿಸಲಾಗುವುದು. ಅಲ್ಲಿಗೆ 625ಕ್ಕೆ 206 ಅಂಕ ಪಡೆದರೆ ವಿದ್ಯಾರ್ಥಿಗಳು ಉತ್ತೀರ್ಣ ಆಗಲಿದ್ದಾರೆ. ಆಂತರಿಕ ಅಂಕ, ಬಾಹ್ಯ ಅಂಕ ಎರಡು ಸೇರಿ 33% ಪಡೆಯಬೇಕಾಗುತ್ತದೆ ಎಂದು ಸಚಿವರು ಮಾಹಿತಿ ತಿಳಿಸಿದ್ದಾರೆ. 2025-26ನೇ ಸಾಲಿನಿಂದ ಈ ನಿಯಮ ಜಾರಿಗೆ ಬರಲಿದೆ. ಈ ವರ್ಷ ಹಾಜರಾಗುವ ಎಲ್ಲಾ ವಿದ್ಯಾರ್ಥಿಗಳು, ರಿಪೀಟರ್ಸ್, ಖಾಸಗಿ ಅಭ್ಯರ್ಥಿಗಳಿಗೂ ಈ ನಿಯಮ ಜಾರಿಯಾಗಲಿದೆ.

ಜೊತೆಗೆ ಪರೀಕ್ಷಾ ವ್ಯವಸ್ಥೆ ಸುಧಾರಣೆಗೆ 3 ಪರೀಕ್ಷೆ ವ್ಯವಸ್ಥೆ ಜಾರಿ ಮಾಡಿದ್ದೇವೆ. ಪಾರದರ್ಶಕವಾಗಿ ಇರಲಿ ಅಂತ ವೆಬ್ ಕಾಸ್ಟ್ ಮಾಡಿದ್ವಿ. ಪರೀಕ್ಷೆಗಳು ಉತ್ತಮವಾಗಿ ನಡೆದವು. ವೆಬ್ ಕಾಸ್ಟಿಂಗ್ ನಿಂದ ಕಡಿಮೆ ಅಂಕ ಬಂದಾಗ ಶಿಕ್ಷಕರು, ಜವಾಬ್ದಾರಿ ತೆಗೆದುಕೊಂಡು ಕೆಲಸ ಮಾಡಿದ್ರು. ವಿಶೇಷವಾಗಿ ತರಬೇತಿಗಳನ್ನು ತೆಗೆದುಕೊಂಡು ಉತ್ತಮವಾಗಿ ಕೆಲಸ ಮಾಡಿದ್ದಾರೆಂದು ಸಚಿವ ಮಧು ಬಂಗಾರಪ್ಪ ಶ್ಲಾಘಿಸಿದರು.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now