ಬೆಂಗಳೂರು: ಎಸ್ಎಸ್ಎಲ್ಸಿ ಮಕ್ಕಳಿಗೆ ರಾಜ್ಯದ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಮಹತ್ವದ ವಿಷಯವೊಂದನ್ನ ತಿಳಿಸಿದ್ದಾರೆ. ಇದುವರೆಗೂ ಎಸ್ಎಸ್ಎಲ್ಸಿ ಪರೀಕ್ಷೆಯು ಒಟ್ಟು 625 ಅಂಕಗಳಿಗೆ ನಡೆಯುತ್ತಿತ್ತು. ಈ ವರ್ಷದಿಂದ ಇದನ್ನ 525 ಅಂಕಗಳಿಗೆ ಸೀಮಿತಗೊಳಿಸಲಾಗಿದೆ. ತೃತೀಯ ಭಾಷೆ ಅಂದ್ರೆ ಹಿಂದಿ ಭಾಷೆಯ ಅಂಕಗಳನ್ನ ಒಟ್ಟು ಮೊತ್ತದಿಂದ ಹೊರಗೆ ಬಿಡಲಾಗಿದೆ ಎಂಬ ಮಾಹಿತಿಯನ್ನ ಸಚಿವ ಮಧು ಬಂಗಾರಪ್ಪ ಅವರು ತಿಳಿಸಿದ್ದಾರೆ.
ಹಿಂದಿ ಮಾತ್ರವಲ್ಲ ತೃತೀಯ ಭಾಷೆಯಲ್ಲಿ ಬರುವ ಅರೇಬಿಕ್, ಉರ್ದು, ಸಂಸ್ಕೃತ, ಕೊಂಕಣಿ, ತುಳು, ಮರಾಠು ಸೇರಿದಂತೆ ತೃತೀಯ ಭಾಷೆಯಾಗಿ ತೆಗೆದುಕೊಂಡ ಎಲ್ಲಾ ಭಾಷೆಗಳ ಪರೀಕ್ಷೆ ನಡೆಯಲಿದೆ. ಅಂಕಗಳನ್ನು ಪರಿಗಣಿಸದಿದ್ದರೂ ವಿದ್ಯಾರ್ಥಿಗಳು ತೃತೀಯ ಭಾಷೆ ಪರೀಕ್ಷೆ ನಡೆಯಲಿದೆ. ಸದ್ಯಕ್ಕೆ ಈ ನಿಯಮ ಎಸ್ಎಸ್ಎಲ್ಸಿ ವಿದ್ಯಾರ್ಥಿಗಳಿಗೆ ಮಾತ್ರ ಅನ್ವಯವಾಗಲಿದ್ದು, ಉಳಿದ ತರಗತಿಗಳ ಬಗ್ಗೆ ಮುಂದಿನ ದಿನಗಳಲ್ಲಿ ನಿರ್ಧಾರವಾಗಲಿದೆ ಎಂದಿದ್ದಾರೆ.
ಇದೇ ವೇಳೆ 16 ವರ್ಷದೊಳಗಿನ ಮಕ್ಕಳಿಗೆ ಸೋಷಿಯಲ್ ಮೀಡಿಯಾ ಬ್ಯಾನ್ ಬಗ್ಗೆ ಮಾತನ್ನಾಡಿದ ಸಚಿವರು, 16 ವರ್ಷದ ಒಳಗಿನ ಮಕ್ಕಳಿಗೆ ಸೋಷಿಯಲ್ ಮೀಡಿಯಾ ಬ್ಯಾನ್ ಮಾಡಬೇಕು ಎನ್ನುವ ವಿಚಾರದ ಬಗ್ಗೆ ಸಮಾಜದಲ್ಲಿ ಚರ್ಚೆಯಾಗಬೇಕು. ಇದು ಕೇವಲ ಸರ್ಕಾರದ ಜವಬ್ದಾರಿಯಲ್ಲ. ಪೋಷಕರ ಮತ್ತು ಸಮಾಜದ ಜವಬ್ದಾರಿಯೂ ಹೌದು. ವಿದೇಶಗಳಲ್ಲಿ ಈ ಬಗ್ಗೆ ಇರುವ ಕಾನೂನುಗಳನ್ನು ಅಧ್ಯಯನ ಮಾಡಿ ಮುಂದಿನ ತೀರ್ಮಾನವನ್ನು ಕೈಗೊಳ್ಳಲಾಗುವುದು ಎಂದಿದ್ದಾರೆ. ಇನ್ನು ಮಕ್ಕಳನ್ನ ಶಾಲೆಗೆ ಸೇರಿಸುವ ವಯೋಮಿತಿ ಸಡಿಲಿಕೆಯ ಬಗ್ಗೆಯೂ ಮಾತನ್ನಾಡಿದ್ದಾರೆ. ಮಕ್ಕಳಿಗೆ 5 ವರ್ಷ 10 ತಿಂಗಳು ತುಂಬಿದ್ದರು ದಾಖಲು ಮಾಡಿಕೊಳ್ಳಬಹುದು ಎಂದಿದ್ದಾರೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.











