ಇನ್ಮುಂದೆ ಉಪೇಂದ್ರ ಅವರನ್ನ ಬುದ್ದಿವಂತ ಅನ್ನಬಾರದಂತೆ..!

ಲೋಕಸಭಾ ಚುನಾವಣೆಯಲ್ಲಿ ಈ ಬಾರಿ ಪವನ್ ಕಲ್ಯಾಣ್ ಕೂಡ ಗೆಲುವು ಕಂಡಿದ್ದಾರೆ. ಸತತವಾಗಿ ಚುನಾವಣೆಯಲ್ಲಿ ಸ್ಪರ್ಧೆ ಮಾಡುತ್ತಿದ್ದರು, ಸೋಲನ್ನೇ ಕಂಡಿದ್ದ ಪವನ್ ಕಲ್ಯಾಣ್ ಮೊದಲ ಬಾರಿಗೆ ಜನರ ಮನಸ್ಸನ್ನು ಗೆದ್ದಿದ್ದಾರೆ. ಈ ಬೆನ್ನಲ್ಲೇ ಉಪೇಂದ್ರ ಕುರಿತಾಗಿ ಟ್ರೋಲ್ ಒಂದು ಹರಿದಾಡುತ್ತಿದೆ. ಅದುವೆ ಪವನ್ ಕಲ್ಯಾಣ್ ಗೆಲ್ಲಿಸುವುದಕ್ಕೆ 12 ವರ್ಷ ಬೇಕಾಯ್ತು, ಇನ್ನು ಉಪೇಂದ್ರ ಅವರನ್ನು ಗೆಲ್ಲಿಸುವುದುಕ್ಕೆ ಇನ್ನೆಷ್ಟು ವರ್ಷ ತೆಗೆದುಕೊಳ್ಳುತ್ತಾರೋ ಎಂಬ ಪೋಸ್ಟ್ ಸಿಕ್ಕಾಪಟ್ಟೆ ವೈರಲ್ ಆಗುತ್ತಿದೆ. ಇದೇ ಪೋಸ್ಟ್ ಅನ್ನು ನಟ ಉಪೇಂದ್ರ ಅವರು ರೀಪೋಸ್ಟ್ ಮಾಡಿ, ನನ್ನನ್ನು ಇನ್ಮುಂದೆ ಬುದ್ದಿವಂತ ಎಂದು ಕರೆಯಬೇಡಿ ಎಂದಿದ್ದಾರೆ.

ಟ್ವೀಟ್ ಮಾಡಿರುವ ಉಪೇಂದ್ರ ಅವರು, ‘ವಾಹ್ ಮೈ ಡಿಯರ್ ಪ್ರಜಾಪ್ರಭುಗಳೇ ವಾಹ್… ಉಪೇಂದ್ರ ಸೋಲು ಗೆಲವು ಬಗ್ಗೆ ತುಂಬಾ ಚಿಂತೆ ಮಾಡ್ತಿದೀರ ! ಎಂತಾ ನಿಸ್ವಾರ್ಥ ! ಎಂತಾ ತ್ಯಾಗ ಮನೋಭಾವ ! ನಿಮ್ಮೆಲ್ಲರ ಪಾದಕ್ಕೆ ಅಡ್ ಬಿದ್ದೆ. ಡೋಂಟ್ ವರೀ… ನಾನ್ ಗೆಲ್ಬೇಕು ಅಂತ ಅನ್ನಿಸಿದಾಗ ಯಾವುದಾದರೂ ರಾಜಕೀಯ ಪಕ್ಷ ಸೇರಿ ನೀವ್ ಹೇಳ್ದಾಗೆಲ್ಲಾ ಮಾಡ್ತೀನಿ..ಗೆದ್ದೇ ಗೆಲ್ತೀನಿ..

ನೀವ್ ಗೆಲ್ಲೋದ್ ಯಾವಾಗ ಅಂತ ನೀವ್ ಯೋಚನೆ ಮಾಡ್ರಪ್ಪೋ. ನೆಕ್ಸ್ಟ್ ಎಲೆಕ್ಷನ್ ನಲ್ಲಿ ನನಗ್ ಕೆಲ್ಸಾ ಕೊಡ್ತೀರ ಅಂದ್ರೆ ನಿಲ್ತೀನಿ ಆಗ್ಲೂ ನೀವ್ ಎಮೋಸನಲ್ ಪ್ರಚಾರ ಮಾಡ್ರೀ, ಸಭೆ ಸಮಾರಂಭ ಎಲ್ಲಾ ಮಾಡ್ರೀ, ಕಷ್ಟ ಪಡ್ರೀ, ಆಮೇಲ್ ಐದು ವರ್ಸ ನೀವೇನ್ ಬೇಕಾದ್ರೂ ಮಾಡ್ಕಳಿ ನಾವ್ ಕೇಳಕ್ ಬರಲ್ಲ ಅಂದ್ರೆ, ಉಫ್.. ಏನ್ ಬರೀಬೇಕೋ ಗೊತ್ತಾಗ್ತಿಲಿರಪ್ಪೋ ಈ ದಡ್ ನನ್ ಮಗಂಗೇ ಯಾವೋನಾದ್ರ ಇನ್ ಮೇಲೆ ಬುದ್ದಿವಂತಾ ಅಂದ್ರೇ ಅಷ್ಟೇ… ಸೆಂದಾಗಿರಕ್ಕಿಲ್ಲಾ..! ಎಂದು ಟ್ವೀಟ್ ಮಾಡಿದ್ದಾರೆ.

suddionenews

Recent Posts

ಉದ್ಯೋಗ ವಾರ್ತೆ : ಚಿತ್ರದುರ್ಗದಲ್ಲಿ ಮಾರ್ಚ್ 01 ರಂದು ಬೃಹತ್ ಉದ್ಯೋಗ ಮೇಳ

ಚಿತ್ರದುರ್ಗ. ಫೆ.24:  ಬರುವ ಮಾರ್ಚ್ 01 ರಂದು ಚಿತ್ರದುರ್ಗದ ಮುರುಘರಾಜೇಂದ್ರ ಕ್ರೀಡಾಂಗಣ (ಸರ್ಕಾರಿ ವಿಜ್ಞಾನ ಕಾಲೇಜು ಮೈದಾನ) ದಲ್ಲಿ ಬೃಹತ್…

3 hours ago

ಮಧ್ಯ ಕರ್ನಾಟಕದಲ್ಲಿಯೇ ಪ್ರಪ್ರಥಮ ENT ಲೇಸರ್ ಶಸ್ತ್ರಚಿಕಿತ್ಸಾ ಯಂತ್ರ ಲೋಕಾರ್ಪಣೆ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ. ಮುತ್ತುಸ್ವಾಮಿ ಕಣ್ಣನ್, ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ.…

3 hours ago

ಭದ್ರಾ ಮೇಲ್ದಂಡೆಗೆ ರಾಜ್ಯ ಬಜೆಟ್ ನಲ್ಲಿ ಐದು ಸಾವಿರ ಕೋಟಿ ಅನುದಾನಕ್ಕೆ ಹಕ್ಕೊತ್ತಾಯ

ಚಿತ್ರದುರ್ಗ, ಫೆಬ್ರವರಿ. 24 : ಭದ್ರ ಮೇಲ್ದಂಡೆ ಯೋಜನೆಗೆ ಮುಂಬರುವ ರಾಜ್ಯ ಬಜೆಟ್ ನಲ್ಲಿ ಕನಿಷ್ಟ ಐದು ಸಾವಿರ ಕೋಟಿ…

4 hours ago

ಶಾಲಾ ಪಠ್ಯದಲ್ಲಿ ಸಂಭಾಜಿ ಜೀವನ ಸೇರಿಸಲು ಒತ್ತಾಯ ; ಕಾರಣ ಏನು ಗೊತ್ತಾ..?

ವಿಕ್ಕಿ ಕೌಶಲ್ ಹಾಗೂ ರಶ್ಮಿಕಾ ಮಂದಣ್ಣ ನಟನೆಯ ಛಾವಾ ಸಿನಿಮಾ ಎಲ್ಲೆಡೆ ಭರ್ಜರಿ ರೆಸ್ಪಾನ್ಸ್ ಪಡೆದುಕೊಳ್ಳುತ್ತಿದೆ. ಇದರಲ್ಲಿ ಸಂಭಾಜಿ ಜೀವನ…

4 hours ago