Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಇನ್ಮುಂದೆ ಜನಗಣಕ್ಕೂ ಮುನ್ನ ವಂದೇ ಮಾತರಂ ಕಡ್ಡಾಯ

---Advertisement---

ವಂದೇ ಮಾತರಂ ಗೀತೆಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ಒಂದು ಮಹತ್ವದ ನಿರ್ಧಾರ ಕೈಗೊಂಡಿದೆ. ಇದಕ್ಕೆ ಸಂಬಂಧಿಸಿದಂತೆ ಹೊಸ ಮಾರ್ಗಸೂಚಿಯನ್ನು ಬಿಡುಗಡೆ ಮಾಡಿದೆ. ಸರ್ಕಾರಿ ಕಾರ್ಯಕ್ರಮಗಳಾಗಿರಬಹುದು, ಶಾಲೆಯಲ್ಲಾಗಿರಬಹುದು ವಂದೇ ಮಾತರಂ ಹೇಳುವಾಗ ಕಡ್ಡಾಯವಾಗಿ ಎದ್ದು ನಿಲ್ಲಬೇಕು ಎಂಬುದನ್ನ ಸೂಚಿಸಿದೆ. ಕೇಂದ್ರ ಸರ್ಕಾರದ ಹೊಸ ನಿಯಮದ ಪ್ರಕಾರ ರಾಷ್ಟ್ರಗೀತೆಗೂ ಮೊದಲು ವಂದೇ ಮಾತರಂ ಗೀತೆಯನ್ನ ಹಾಡುವುದು ಕಡ್ಡಾಯವಾಗಿದೆ.

ಜನಗಣಮನಕ್ಕಿರುವ ಗೌರವ ವಂದೇ ಮಾತರಂಗೂ ನೀಡಬೇಕು. ರಾಷ್ಟ್ರಗೀತೆಗೂ ಮೊದಲು ಇನ್ಮುಂದೆ ವಂದೇ ನಾತರಂ ಕೂಡ ಕಡ್ಡಾಯವಾಗಿರುತ್ತದೆ. ಶಾಲೆ, ಸರ್ಕಾರು ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಗೀತೆ ಹಾಡಬೇಕು. ಸರ್ಕಾರಿ ಕಚೇರಿಗಳು, ಸರ್ಕಾರಿ ಸಮಾರಂಭಗಳಿಗೂ ಅನ್ವಯಿಸುತ್ತದೆ. ಸರ್ಕಾರು ಕಾರ್ಯಕ್ರಮದಲ್ಲಿ ಹಾಡುವಾಗ ಎದ್ದು ನಿಲ್ಲುವುದು ಕಡ್ಡಾಯ. ಚಿತ್ರಮಂದಿರಗಳಲ್ಲಿ ವಂದೇ ಮಾತರಂ ಗೀತೆ ನುಡಿಸುವುದು ಕಡ್ಡಾಯವಲ್ಲ. ರಾಷ್ಟ್ರಗೀತೆಗೆ ಇರುವ ಶಿಷ್ಟಾಚಾರಗಳನ್ನ ವಂದೇ ಮಾತರಂ ಗೀತೆಗೆ ವಿಸ್ತರಿಸಲಾಗಿದೆ. ರಾಷ್ಟ್ರಗೀತೆಗೆ ಅಡ್ಡಿಪಡಿಸಿ, ಗೌರವಿಸುವುದನ್ನ ತಡೆದ ವ್ಯಕ್ತಿಗೆ 3 ವರ್ಷ ಜೈಲು ಎಂಬ ಕಾನೂನು ಘೋಷಣೆಯಾಗಿದೆ. ಇದು ಕೇಂದ್ರ ಸರ್ಕಾರ ಹೊರಡಿಸಿರುವ ಆದೇಶದಲ್ಲಿದೆ.

ವಂದೇ ಮಾತರಂ ಗೀತೆಯ 150ನೇ ವರ್ಷಾಚರಣೆ ಅಂಗವಾಗಿ ಸಂಸತ್ತಿನಲ್ಲಿ ಸುಧೀರ್ಘ ಚರ್ಚೆ ನಡೆಸಲಾಗಿತ್ತು. ಈ ಚರ್ಚೆಗಳಲ್ಲಿ ಆಡಳಿತಾರೂಢ ಬಿಜೆಪಿ ಮತ್ತು ಕಾಂಗ್ರೆಸ್ ನೇತೃತ್ವದ ವಿಪಕ್ಷಗಳ ನಡುವೆ ಭಾರೀ ವಾದ – ವಿವಾದಗಳು ಏರ್ಪಟ್ಟಿದ್ದವು. ಈ ಬಗ್ಗೆ ದೆಹಲಿಯಲ್ಲಿ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿಕೆ ಶಿವಕುಮಾರ್ ವಂದೇ ಮಾತರಂಗೆ.. ದೇಶಕ್ಕೆ ಬುನಾದಿ ಹಾಕಿದ್ದೇ ಕಾಂಗ್ರೆಸ್​. ಸ್ವಾತಂತ್ರ್ಯ, ಸಂವಿಧಾನ ತಂದುಕೊಟ್ಟ ಪಕ್ಷ ನಮ್ಮದು… ನಮ್ಮ ಹಾದಿಯನ್ನ ಬಿಜೆಪಿ ಹಿಡಿದಿದೆ ಅಂತ ಕ್ರೆಡಿಟ್​ ತಗೊಂಡಿದ್ದಾರೆ ಎಂದಿದ್ದಾರೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now