Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಯೂರಿಯಾ ರಸಗೊಬ್ಬರ ಖರೀದಿಗೆ ‘ಫ್ರೂಟ್ಸ್ ಎಫ್‍ಐಡಿ’ ಕಡ್ಡಾಯ

---Advertisement---

ಚಿತ್ರದುರ್ಗ. ಮೇ18: ಜಿಲ್ಲೆಯ ರೈತರು ಮುಂಗಾರು ಹಂಗಾಮಿನಲ್ಲಿ ಯೂರಿಯಾ ಸೇರಿದಂತೆ ಇತರೆ ರಸಗೊಬ್ಬರಗಳನ್ನು ಖರೀದಿಸಲು ‘ಫ್ರೂಟ್ಸ್ ಎಫ್‍ಐಡಿ’ (FRUITS FID)  ಸಂಖ್ಯೆಯನ್ನು ಹೊಂದುವುದು ಕಡ್ಡಾಯವಾಗಿದೆ.

ಕೇಂದ್ರ ಸರ್ಕಾರದ ತಂತ್ರಾಂಶದ ಮೂಲಕ ರೈತರ ಎಫ್‍ಐಡಿ ಸಂಖ್ಯೆಯನ್ನು ಬಳಸಿಕೊಂಡು, ಅವರ ಜಮೀನಿನ ವಿಸ್ತೀರ್ಣಕ್ಕೆ (ಎಕರೆಗೆ) ಅಗತ್ಯವಿರುವಷ್ಟು ರಸಗೊಬ್ಬರವನ್ನು ನಿಯಮಾನುಸಾರ ವಿತರಿಸಲು ಕೃಷಿ ಇಲಾಖೆಯು ಹೊಸ ತಂತ್ರಾಂಶವನ್ನು ಅಭಿವೃದ್ಧಿಪಡಿಸಿದೆ.2026-27ನೇ ಸಾಲಿನ ಮುಂಗಾರು ಹಂಗಾಮಿನಿಂದಲೇ ಇದು ಜಾರಿಗೆ ಬರಲಿದೆ.

 

ರೈತರು ತಾವು ಬೆಳೆದ ಬೆಳೆ ಆಧಾರದ ಮೇಲೆ ತಂತ್ರಾಂಶದಲ್ಲಿ ಅನುಮೋದಿಸಿದ ಪ್ರಮಾಣದ ರಸಗೊಬ್ಬರವನ್ನು ಮಾತ್ರ ಪಡೆಯಲು ಅವಕಾಶವಿರುತ್ತದೆ. ಜಿಲ್ಲೆಯ ಎಲ್ಲಾ ರೈತರು ಆದ್ಯತೆಯ ಮೇರೆಗೆ ತಮ್ಮ ಹೆಸರಿನಲ್ಲಿ ‘ಫ್ರೂಟ್ಸ್ ಎಫ್‍ಐಡಿ’ ಮಾಡಿಸಿಕೊಳ್ಳಬೇಕು. ಅಷ್ಟೇ ಅಲ್ಲದೆ, ತಮ್ಮ ಎಲ್ಲಾ ಜಮೀನಿನ ಸರ್ವೆ ನಂಬರ್‍ಗಳನ್ನು ಈ ಎಫ್‍ಐಡಿಗೆ ಕಡ್ಡಾಯವಾಗಿ ಜೋಡಣೆ ಮಾಡಿಸಬೇಕು ಎಂದು ಕೋರಲಾಗಿದೆ.

ಈಗಾಗಲೇ ಫ್ರೂಟ್ಸ್ ಎಫ್‍ಐಡಿ ಹೊಂದಿರುವ ರೈತರು ತಮ್ಮ ಇ-ಕೆವೈಸಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಿಕೊಳ್ಳಬೇಕು. ಇದರಿಂದ ರಸಗೊಬ್ಬರ ಪಡೆಯುವಾಗ ಯಾವುದೇ ರೀತಿಯ ತಾಂತ್ರಿಕ ತೊಂದರೆಗಳು ಎದುರಾಗುವುದಿಲ್ಲ ಎಂದು ಕೃಷಿ ಇಲಾಖೆ ಜಂಟಿ ನಿರ್ದೇಶಕರು ತಿಳಿಸಿದ್ದಾರೆ

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now