Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಕರ್ನಾಟಕದಲ್ಲೂ ಇಂಧನ ದರ ಏರಿಕೆ ಬಿಸಿ; ಪೆಟ್ರೋಲ್, ಡೀಸೆಲ್ ಬೆಲೆ ಮತ್ತೆ ಜಿಗಿತ

---Advertisement---

ವಾಹನ ಸವಾರರಿಗೆ ತೈಲ ಕಂಪನಿಗಳು ಮತ್ತೊಮ್ಮೆ ಬಿಗ್ ಶಾಕ್ ನೀಡಿದ್ದು, ಶುಕ್ರವಾರ (ಮೇ 15) ರಿಂದ ಪೆಟ್ರೋಲ್ ಹಾಗೂ ಡೀಸೆಲ್ ದರದಲ್ಲಿ ದಿಢೀರ್ ಏರಿಕೆ ಮಾಡಲಾಗಿದೆ. ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆ ಏರಿಕೆ, ಮಧ್ಯಪ್ರಾಚ್ಯದ ಉದ್ವಿಗ್ನ ಪರಿಸ್ಥಿತಿ ಹಾಗೂ ಇಂಧನ ಪೂರೈಕೆ ಆತಂಕದ ಹಿನ್ನೆಲೆ ಸರ್ಕಾರಿ ಸ್ವಾಮ್ಯದ ತೈಲ ಮಾರುಕಟ್ಟೆ ಕಂಪನಿಗಳು (OMCs) ಪ್ರತಿ ಲೀಟರ್‌ಗೆ ಸುಮಾರು 3 ರೂಪಾಯಿವರೆಗೆ ದರ ಹೆಚ್ಚಳ ಮಾಡಿವೆ.

ಈ ಹೊಸ ದರಗಳು ಇಂದಿನಿಂದಲೇ ಜಾರಿಗೆ ಬಂದಿದ್ದು, ದೇಶದ ಪ್ರಮುಖ ನಗರಗಳ ಜೊತೆಗೆ ಕರ್ನಾಟಕದಲ್ಲಿಯೂ ಇಂಧನ ಬೆಲೆ ಏರಿಕೆಯ ಬಿಸಿ ತಟ್ಟಿದೆ. ದರ ಏರಿಕೆಯಿಂದ ಸಾಮಾನ್ಯ ಜನರು, ಸಾರಿಗೆ ಕ್ಷೇತ್ರ, ರೈತರು ಹಾಗೂ ವ್ಯಾಪಾರ ವಲಯದಲ್ಲಿ ಆತಂಕ ಹೆಚ್ಚಾಗಿದೆ.
ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಸಂಘರ್ಷಗಳು, ವಿಶೇಷವಾಗಿ ಇರಾನ್ ಬಿಕ್ಕಟ್ಟು ಮತ್ತು ಹಾರ್ಮುಜ್ ಜಲಸಂಧಿ ಉದ್ವಿಗ್ನತೆಯಿಂದ ಜಾಗತಿಕ ಮಟ್ಟದಲ್ಲಿ ಕಚ್ಚಾ ತೈಲ ಸರಬರಾಜಿನಲ್ಲಿ ಅಡಚಣೆ ಉಂಟಾಗಿದೆ. ಇದರ ಪರಿಣಾಮ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ತೈಲ ದರಗಳು ಏರಿಕೆಯಾಗಿದ್ದು, ಭಾರತದಲ್ಲೂ ಅದರ ನೇರ ಪರಿಣಾಮ ಕಂಡುಬಂದಿದೆ.

ಆದರೆ ದೇಶದಲ್ಲಿ ಯಾವುದೇ ಇಂಧನ ಕೊರತೆ ಇಲ್ಲ ಎಂದು ಕೇಂದ್ರ ಸರ್ಕಾರ ಸ್ಪಷ್ಟಪಡಿಸಿದೆ. ತೈಲ ಕಾರ್ಯದರ್ಶಿ ನೀರಜ್ ಮಿತ್ತಲ್ ಮಾತನಾಡಿ, “ಜನರು ಆತಂಕಪಡುವ ಅಗತ್ಯವಿಲ್ಲ. ದೇಶದಲ್ಲಿ ಸಾಕಷ್ಟು ಪೆಟ್ರೋಲ್, ಡೀಸೆಲ್ ಮತ್ತು ಎಲ್‌ಪಿಜಿ ದಾಸ್ತಾನು ಇದೆ. ಪಡಿತರ ವ್ಯವಸ್ಥೆ ಜಾರಿಗೆ ತರಲು ಯಾವುದೇ ಯೋಜನೆ ಇಲ್ಲ” ಎಂದು ತಿಳಿಸಿದ್ದಾರೆ.

ಕರ್ನಾಟಕದ ಪ್ರಮುಖ ನಗರಗಳ ಇಂದಿನ ಇಂಧನ ದರ
ಬೆಂಗಳೂರು
ಪೆಟ್ರೋಲ್ : ₹105.92
ಡೀಸೆಲ್ : ₹91.98
ಮೈಸೂರು
ಪೆಟ್ರೋಲ್ : ₹105.41
ಡೀಸೆಲ್ : ₹91.52
ಮಂಗಳೂರು
ಪೆಟ್ರೋಲ್ : ₹105.30
ಡೀಸೆಲ್ : ₹91.40
ಹುಬ್ಬಳ್ಳಿ – ಧಾರವಾಡ
ಪೆಟ್ರೋಲ್ : ₹105.67
ಡೀಸೆಲ್ : ₹91.74
ದೇಶದ ಪ್ರಮುಖ ನಗರಗಳ ದರ
ದೆಹಲಿ
ಪೆಟ್ರೋಲ್ : ₹97.77
ಡೀಸೆಲ್ : ₹90.67
ಕೋಲ್ಕತ್ತಾ
ಪೆಟ್ರೋಲ್ : ₹108.74
ಡೀಸೆಲ್ : ₹95.13
ಮುಂಬೈ
ಪೆಟ್ರೋಲ್ : ₹106.68
ಡೀಸೆಲ್ : ₹93.14
ಚೆನ್ನೈ
ಪೆಟ್ರೋಲ್ : ₹103.67
ಡೀಸೆಲ್ : ₹95.25
ದರ ಏರಿಕೆಯಿಂದ ಸಾರ್ವಜನಿಕ ಸಾರಿಗೆ, ಸರಕು ಸಾಗಣೆ ಹಾಗೂ ದಿನನಿತ್ಯದ ಅವಶ್ಯಕ ವಸ್ತುಗಳ ಬೆಲೆಯ ಮೇಲೂ ಪರಿಣಾಮ ಬೀರುವ ಸಾಧ್ಯತೆ ಇದೆ. ಈಗಾಗಲೇ ಬೆಲೆ ಏರಿಕೆಯಿಂದ ಸಂಕಷ್ಟದಲ್ಲಿರುವ ಮಧ್ಯಮ ವರ್ಗ ಮತ್ತು ಕೆಳ ಮಧ್ಯಮ ವರ್ಗದ ಜನರಿಗೆ ಈ ಇಂಧನ ದರ ಏರಿಕೆ ಮತ್ತಷ್ಟು ಹೊರೆ ತಂದಿದೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now