ರೈತರಿಗೆ ಬರ ಪರಿಹಾರ ಹಣ ಸೇರಿದಂತೆ ವಿವಿಧ ಬೇಡಿಕೆ ಈಡೇರಿಸಿ : ಸೋಮಗುದ್ದು ರಂಗಸ್ವಾಮಿ

1 Min Read

 

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್
ಮೊ : 78998 64552

ಸುದ್ದಿಒನ್, ಸುದ್ದಿಒನ್ ನ್ಯೂಸ್‌, suddione, suddione news, chitradurga, ಚಿತ್ರದುರ್ಗ,ಬೆಂಗಳೂರು, bengaluru,

ಸುದ್ದಿಒನ್, ಚಿತ್ರದುರ್ಗ, ಜೂ.10 : ಎನ್.ಡಿ.ಆರ್.ಎಫ್. ನಿಯಮದ ಪ್ರಕಾರ ನೀರಾವರಿ, ತೋಟಗಾರಿಕೆ ಬೆಳೆಗಳಿಗೆ ಮೂರು ಹಂತದಲ್ಲಿ ಬರ ಪರಿಹಾರ ಹಣ ಕೊಡಬೇಕು. ಇದುವರೆವಿಗೂ ರೈತರ ಬ್ಯಾಂಕ್ ಖಾತೆಗಳಿಗೆ ಜಮಾ ಆಗಿಲ್ಲ. ಇದೆ ಪರಿಸ್ಥಿತಿ ಮುಂದುವರೆದರೆ ಹೋರಾಟ ನಡೆಸಬೇಕಾಗುತ್ತದೆಂದು ಅಖಂಡ ಕರ್ನಾಟಕ ರೈತ ಸಂಘದ ರಾಜ್ಯಾಧ್ಯಕ್ಷ ಸೋಮಗುದ್ದು ರಂಗಸ್ವಾಮಿ ಎಚ್ಚರಿಸಿದರು.

ಪ್ರವಾಸಿ ಮಂದಿರದಲ್ಲಿ ಸೋಮವಾರ ರೈತರೊಂದಿಗೆ ಸಭೆ ನಡೆಸಿ ಮಾತನಾಡಿದ ಸೋಮಗುದ್ದು ರಂಗಸ್ವಾಮಿ ಕಳೆದ ವರ್ಷ ಮಳೆಯಿಲ್ಲದೆ ಎದುರಾದ ಭೀಕರ ಬರಗಾಲಕ್ಕೆ ತುತ್ತಾಗಿರುವ ರೈತರು ಸಂಕಷ್ಠದಲ್ಲಿದ್ದಾರೆ. ಸರ್ಕಾರ ಇತ್ತ ಗಮನ ಹರಿಸಿ ಉಚಿತವಾಗಿ ಬೀಜ, ಗೊಬ್ಬರ ಮತ್ತು ಕೃಷಿ ಪರಿಕರಗಳನ್ನು ನೀಡಬೇಕು. ರೈತರಿಗೆ ಸಕಾಲಕ್ಕೆ ಸಾಲ ನೀಡದೆ ಬ್ಯಾಂಕಿನವರು ಸತಾಯಿಸುತ್ತಿದ್ದು, ಶೋಷಣೆ ನಿಲ್ಲಬೇಕು. ಎಲ್ಲಾ ಬ್ಯಾಂಕ್‍ನ ಹಾಗೂ ಸಂಘ ಸಂಸ್ಥೆಗಳಲ್ಲಿನ ಸಾಲ ಮನ್ನಾ ಮಾಡಬೇಕು ಎಂದು ಒತ್ತಾಯಿಸಿದರು.

ಜಿಲ್ಲೆಯಲ್ಲಿನ ಎಲ್ಲಾ ಕೆರೆಗಳಿಗೆ ನೀರು ತುಂಬಿಸಬೇಕು. ಕೆ.ಎಸ್.ಆರ್.ಟಿ.ಸಿ. ಬಸ್ ದರ ಹೆಚ್ಚಿಸಲು ತೀರ್ಮಾನಿಸಿರುವುದು ಪ್ರಯಾಣಿಕರಿಗೆ ಮತ್ತಷ್ಟು ಹೊರೆಯಾಗಲಿದೆ. ರೈತರು ಜಮೀನುಗಳಿಗೆ ಓಡಾಡಲು ದಾರಿ ಸಮಸ್ಯೆಯಿದೆ. ಸರ್ಕಾರ ಮಧ್ಯ ಪ್ರವೇಶಿಸಿ ಸಮಸ್ಯೆಯನ್ನು ಇತ್ಯರ್ಥಪಡಿಸಿ ರೈತರ ನೆರವಿಗೆ ಮುಂದಾಗಬೇಕು. ಇಲ್ಲವಾದಲ್ಲಿ  ರೈತ ಸಂಘಟನೆ ಜೊತೆ ಸೇರಿ ಉಗ್ರ ಹೋರಾಟದ ದಾರಿ ಹಿಡಿಯಬೇಕಾಗುತ್ತದೆಂದು ಸೋಮಗುದ್ದು ರಂಗಸ್ವಾಮಿ ತೀರ್ಮಾನಿಸಿದರು.

ಅಖಂಡ ಕರ್ನಾಟಕ ರೈತ ಸಂಘದ ಜಿಲ್ಲಾಧ್ಯಕ್ಷ ಎಲ್.ಬಸವರಾಜಪ್ಪ ಅಳಗವಾಡಿ, ಗೌರವಾಧ್ಯಕ್ಷ ಜಿ.ಮೇಘರಾಜ್ ಹಳಿಯೂರು, ಕುರುಬರಹಳ್ಳಿ ಶಿವಣ್ಣ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಎಂ.ಸಿದ್ದಪ್ಪ ಹಳಿಯೂರು, ಸಂಘಟನಾ ಕಾರ್ಯದರ್ಶಿ ಜಿ.ಪರಮೇಶ್ವರಪ್ಪ, ಖಾದರ್‍ಭಾಷ, ನವೀನ್‍ಕುಮಾರ್, ಹೆಚ್.ನಿರಂಜನಮೂರ್ತಿ, ಬೊಮ್ಮಯ್ಯ, ಎ.ಎಸ್.ಗುರುಸಿದ್ದಪ್ಪ, ಏಕಾಂತಪ್ಪ, ಚಳ್ಳಕೆರೆ ತಾಲ್ಲೂಕು ರೈತ ಸಂಘದ ಅಧ್ಯಕ್ಷ ಚಿಕ್ಕಣ್ಣ ಇನ್ನು ಅನೇಕರು ಸಭೆಯಲ್ಲಿ ಹಾಜರಿದ್ದರು.

Share This Article
Leave a Comment

Leave a Reply

Your email address will not be published. Required fields are marked *