ದುಬಾರಿ ಜಕಾತಿ ವಸೂಲಿ ಸೇರಿದಂತೆ ರೈತರ ವಿವಿಧ ಬೇಡಿಕೆ ಈಡೇರಿಸಿ : ನಗರಸಭೆ ಎದುರು ರೈತರ ಪ್ರತಿಭಟನೆ

suddionenews
1 Min Read

 

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್
ಮೊ : 78998 64552

 

ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ.22 : ತರಕಾರಿ ಮಾರುಕಟ್ಟೆಯಲ್ಲಿ ಜಕಾತಿ ಶುಲ್ಕ ಕಡಿಮೆ ಮಾಡುವಂತೆ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರುಸೇನೆ ವತಿಯಿಂದ ನಗರಸಭೆ ಎದುರು ಗುರುವಾರ ಪ್ರತಿಭಟನೆ ನಡೆಸಿ ವ್ಯವಸ್ಥಾಪಕಿ ಮಂಜುಳರವರಿಗೆ ಮನವಿ ಸಲ್ಲಿಸಲಾಯಿತು.

ರೈತರು ಮಾರುಕಟ್ಟೆಗೆ ಹೂವು, ಹಣ್ಣು, ತರಕಾರಿ, ಸೊಪ್ಪುಗಳನ್ನು ದಿನನಿತ್ಯವು ತರುತ್ತಾರೆ. ನಗರಸಭೆಯವರು ದುಬಾರಿ ಜಕಾತಿ ವಸೂಲು ಮಾಡುತ್ತಿದ್ದು, ಮೊದಲೆ ಬರಗಾಲದಲ್ಲಿ ಸಂಕಷ್ಟ ಅನುಭವಿಸುತ್ತಿರುವ ರೈತರಿಗೆ ಗಾಯದ ಮೇಲೆ ಬರೆ ಎಳೆದಂತಾಗುತ್ತದೆ. ನಗರದ ಹೊರ ವಲಯ ಚಳ್ಳಕೆರೆ ಬೈಪಾಸ್ ಸಮೀಪ ಸಾರ್ವಜನಿಕ ಶೌಚಾಲಯ ನಿರ್ಮಿಸಬೇಕು.

ಚಳ್ಳಕೆರೆ, ಬೆಂಗಳೂರು, ಹಿರಿಯೂರು ಕಡೆ ಪ್ರಯಾಣಿಸುವವರು ಇಲ್ಲಿ ಶೌಚಾಲಯವಿಲ್ಲದ ಪರದಾಡುವಂತಾಗಿದೆ. ರೈತರು, ಕೂಲಿ ಕಾರ್ಮಿಕರು, ಬೀದಿ ಬದಿ ವ್ಯಾಪಾರಿಗಳಿಗೂ ತೊಂದರೆಯಾಗುತ್ತಿದೆ. ನಗರಸಭೆಯವರು ಇತ್ತ ಗಮನ ಹರಿಸಿ ನಮ್ಮ ಬೇಡಿಕೆಗಳನ್ನು ಈಡೇರಿಸಬೇಕೆಂದು ಪ್ರತಿಭಟನಾಕಾರರು ಪಟ್ಟು ಹಿಡಿದರು.

ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರುಸೇನೆ ವಾಸುದೇವ ಮೇಟಿ ಬಣದ ಜಿಲ್ಲಾಧ್ಯಕ್ಷ ಲಕ್ಷ್ಮಿಕಾಂತ್, ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ಲೋಲಾಕ್ಷಮ್ಮ, ತಾಲ್ಲೂಕು ಅಧ್ಯಕ್ಷೆ ಪವಿತ್ರ ಬಿ.ಕೆ. ನಗರ ಘಟಕದ ಅಧ್ಯಕ್ಷೆ ಮಂಜುಳ, ಜಯಲಕ್ಷ್ಮಿ ಎನ್. ವಿಜಯಮ್ಮ, ರುದ್ರಮ್ಮ, ಕಣಿವೆಮಾರಮ್ಮ ಸಂಘದ ಅಧ್ಯಕ್ಷ ತಿಪ್ಪೇಸ್ವಾಮಿ, ನಾಗರಾಜ, ಮಂಜುನಾಥ, ಇನ್ನು ಅನೇಕರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

Share This Article
Leave a Comment

Leave a Reply

Your email address will not be published. Required fields are marked *