Connect with us

Hi, what are you looking for?

ರಾಜ್ಯ ಸುದ್ದಿ

ಸರ್ಕಾರಿ ಶಾಲೆಗೆ ಬಂತು ಫುಲ್ ಡಿಮ್ಯಾಂಡ್ : ಸೀಟಿಗಾಗಿ ಪೋಷಕರ ಮನವಿ

ಬೆಂಗಳೂರು: ಕಳೆದ ಕೆಲವು ವರ್ಷಗಳಿಂದ ಖಾಸಗಿ ಶಾಲೆಗಳ ಅಭರ ಎಷ್ಟಿತ್ತು ಅಂದ್ರೆ ಸಾಲ ಮಾಡಿ ಆದ್ರುಹ ಸರಿ ಮಕ್ಕಳನ್ನ ಖಾಸಗಿ ಶಾಲೆಯಲ್ಲೇ ಓದಿಸುವ ಹಂಬಲ ಪೋಷಕರದ್ದಾಗಿತ್ತು. ಆನಂತರ ಖಾಸಗಿ ಶಾಲೆಗಳ ಪ್ರಭಾವದಿಂದಾಗಿ ಸರ್ಕಾರಿ ಶಾಲೆಗಳು ಬಾಗಿಲು ಮುಚ್ಚುವ ಸ್ಥಿತಿ ತಲುಪಿತ್ತು. ಆದ್ರೆ ಇಂದು ಮತ್ತದೆ ಸರ್ಕಾರಿ ಶಾಲೆಯ ಕಡೆ ಜನ ಮುಖ ಮಾಡ್ತಿದ್ದಾರೆ. ಖಾಸಗಿ ಶಾಲೆಯಲ್ಲಿ ಕ್ಯೂ ನಿಂತಂತೆ ಸರ್ಕಾರಿ ಶಾಲೆಗಳ ಬಾಗಿಲನ್ನ ಬಡಿತಾ ಇದ್ದಾರೆ.

ಈ ಬಗ್ಗೆ ಸ್ವತಂ ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರೇ ಹೇಳಿಕೊಂಡಿದ್ದಾರೆ. ನಗರ್ ದಾಸರಹಳ್ಳಿ ಕ್ಷೇತ್ರದ ನೆಲಗೆದರಹಳ್ಳಿಯಲ್ಲಿ ಸರ್ಕಾರಿ ಶಾಲೆಯೊಂದಿದೆ. ಆ ಶಾಲೆಗೆ ಈಗ ಫುಲ್ ಡಿಮ್ಯಾಂಡ್ ಇದೆ. ಅದು ಆ ಶಾಲೆಯಲ್ಲಿ ತಮ್ಮ ಮಗುವಿಗಾಗಿ ಒಂದು ಸೀಟು ಕೊಡಿಸಿ ಎಂದು ಕೇಳಿಕೊಳ್ಳುವ ಮೂಲಕ.

ಈ ಸರ್ಜಾರಿ ಶಾಲೆಯಲ್ಲಿ ಒಂದು ಸೀಟ್ ಕೊಡಿಸುವಂತೆ ಶಿಕ್ಷಣ ಸಚಿವರಿಗೆ ಮನವಿ ಪತ್ರವೊಂದು ಬಂದಿದೆಯಂತೆ. ಇಷ್ಟು ದಿನ ಖಾಸಗಿ ಶಿಕ್ಷಣ ಸಂಸ್ಥೆಗೆ ಸೀಟ್ ಕೇಳುತ್ತುದ್ದವರು ಇದೀಗ ಸರ್ಕಾರಿ ಶಾಲೆಯಲ್ಲಿ ಸೀಟು ಬೇಕೆಂದು‌ ಕೇಳ್ತಾ ಇರೋದಕ್ಕೆ ಸಚಿವರೇ ಫುಲ್ ಖುಷ್ ಆಗಿದ್ದಾರೆ.

ಇನ್ನು ಶಾಲೆಯ ಬಗ್ಗೆ ಕುತೂಹಲ ಹೆಚ್ಚಾಗಿ ಸಚಿವರೇ ಆ ಶಾಲೆಗೆ ಭೇಟಿ ನೀಡಿದ್ದಾರೆ. ಈ ಬಗ್ಗೆ ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದು, ಬೆಂಗಳೂರು ನಗರದ ದಾಸರಹಳ್ಳಿ ಕ್ಷೇತ್ರದ ನೆಲಗದರೇನ ಹಳ್ಳಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಇಂದು ಭೇಟಿ ನೀಡಿದ್ದೆ. ಈ ಸರಕಾರಿ ಶಾಲೆಗೆ ಪ್ರವೇಶಾವಕಾಶ ಕೊಡಿಸಬೇಕೆಂದು ಕೆಲವು ಕಡೆಯಿಂದ ನಮ್ಮ ಕಚೇರಿಗೆ ಮನವಿ ಬಂದ ಹಿನ್ನೆಲೆಯಲ್ಲಿ ಕುತೂಹಲದಿಂದ ಶಾಲೆಗೆ ಭೇಟಿ ನೀಡಿದ್ದೆ. (ಪ್ರತಿಷ್ಠಿತ ಶಾಲೆಗಳಿಗೆ ಪ್ರವೇಶವಕಾಶ ಕೊಡಿಸಬೇಕೆಂದು ಮನವಿ ಬರುವುದು ಮಾಮೂಲು)

ಓರ್ವ ಸಚಿವರ ಕಚೇರಿ ಯಿಂದಲೂ ಈ ಶಾಲೆಯಲ್ಲಿ ಪ್ರವೇಶಾವಕಾಶ ಕೊಡಿಸಬೇಕೆಂದು ಮನವಿ ಬಂದದ್ದು ವಿಶೇಷ. ಶಾಲೆಯ ಅಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಯ ಸದಸ್ಯರನ್ನು ಹಾಗೂ ಶಿಕ್ಷಕರನ್ನು ಭೇಟಿ ಮಾಡಿ ಅವರು ತೆಗೆದುಕೊಂಡಿರುವ ಕ್ರಮಗಳ ಬಗ್ಗೆ ಮಾಹಿತಿ ಪಡೆದೆ. ಸಾಲಿನಲ್ಲಿ ಕುಳಿತು ಶಾಲೆಗೆ ಪ್ರವೇಶಾವಕಾಶ ಪಡೆಯಲು ಪೋಷಕರೊಂದಿಗೆ ಕಾದಿದ್ದ ಮಕ್ಕಳನ್ನು ಹಾಗೂ ಪೋಷಕರನ್ನು ಮಾತನಾಡಿಸಿದೆ.

ವಾತಾವರಣ ಖುಷಿ ನೀಡಿತು. ಇಂತಹ ಶಾಲೆಗಳ ಬಗ್ಗೆ ಇಡೀ ರಾಜ್ಯದಿಂದ ಸುದ್ಧಿ ಬರುತ್ತಿದೆ. ಶಾಲೆಗೆ ನೀಡಿರುವ ಪ್ರವೇಶವಕಾಶ ಸಂಖ್ಯೆಯನ್ನು ಮೀರಿ ಬೇಡಿಕೆಗಳು ಬರುತ್ತಿವೆ. ಈ ಕುರಿತು ಎಸ್.ಡಿ.ಎಂ.ಸಿ ಸದಸ್ಯರು ಪ್ರವೇಶಾವಕಾಶ ಸಂಖ್ಯೆಯನ್ನು ಹೆಚ್ಚಿಸುವ ಕುರಿತು ಮನವಿಯನ್ನು ಸಲ್ಲಿಸಿದ್ದಾರೆ. ಸ್ಥಳೀಯ ಶಾಸಕ ಶ್ರೀ ಮಂಜುನಾಥ ರವರು ಈ ಸಮಯದಲ್ಲಿ ಉಪಸ್ಥಿತರಿದ್ದರು ಎಂದಿದ್ದಾರೆ.

Click to comment

Leave a Reply

Your email address will not be published. Required fields are marked *

Latest

ದಿನ ಭವಿಷ್ಯ

ಬುಧವಾರ ರಾಶಿ ಭವಿಷ್ಯ-ಆಗಸ್ಟ್-4,2021 ಕಾಮಿಕಾ ಏಕಾದಶಿ ಸೂರ್ಯೋದಯ: 06:04 AM, ಸೂರ್ಯಸ್ತ: 06:44 PM ಸ್ವಸ್ತಿ ಶ್ರೀ ಮನೃಪ ಶಾಲಿವಾಹನ ಶಕೆ1943, ಸಂವತ್2077, ಪ್ಲವ ನಾಮ ಸಂವತ್ಸರ ಆಷಾಢ ಮಾಸ, ದಕ್ಷಿಣಾಯಣ, ಗ್ರೀಷ್ಮ...

ಚಿತ್ರದುರ್ಗ

upper bhadra meeting in DS Hally, chitradurga ಡಿಎಸ್ ಹಳ್ಳಿಯಲ್ಲಿ ಭದ್ರಾ ಮೇಲ್ದಂಡೆ ಸಭೆ; ಗ್ರಾಮಸ್ಥರು ಭಾಗಿ ಸುದ್ದಿಒನ್, ಚಿತ್ರದುರ್ಗ, (ಆ.03) : ತಾಲೂಕಿನ ದೊಡ್ಡಸಿದ್ದವ್ವನಹಳ್ಳಿ ಗ್ರಾಮದ ಜ್ಞಾನಪೂರ್ಣ ಶಾಲೆ ಆವರಣದಲ್ಲಿ...

ಚಿತ್ರದುರ್ಗ

ಸುದ್ದಿಒನ್, ಚಿತ್ರದುರ್ಗ, (ಆ.03) : ನಗರದ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಯಾದ ಎಸ್ ಜೆ ಎಮ್ ಸಿ ಬಿ ಎಸ್ ಇ ರೆಸಿಡೆನ್ಷಿಯಲ್ ಶಾಲೆಯು 2020-21 ನೇ ಸಾಲಿನ ಸಿ ಬಿ ಎಸ್ ಇ...

ಪ್ರಮುಖ ಸುದ್ದಿ

ಬೆಂಗಳೂರು: ಸಚಿವ ಸಂಪುಟ ರಚನೆ ಬಗ್ಗೆ ಚರ್ಚೆ ನಡೆಸೋದಕ್ಕಾಗಿಯೇ ಸಿಎಂ ಮೂರು ದಿನದಿಂದ ದೆಹಲಿಯಲ್ಲಿದ್ದಾರೆ. ಈಗಾಗಲೇ ಹೈಕಮಾಂಡ್ ಜೊತೆ ಈ ಬಗ್ಗೆ ಮಾತುಕತೆ ನಡೆದಿದೆ ಎನ್ನಲಾಗಿದೆ. ಅಷ್ಟೇ ಅಲ್ಲ ಸಂಪುಟದಲ್ಲಿ ಯಾರೆಲ್ಲಾ ಇರ್ಬೇಕು...

ಪ್ರಮುಖ ಸುದ್ದಿ

ಮುಂಬೈ: ಶಿಲ್ಲಾ ಶೆಟ್ಟಿ ಸೋಷಿಯಲ್ ಮೀಡಿಯಾದಲ್ಲಿ ಎಷ್ಟು ಆ್ಯಕ್ಟೀವ್ ಆಗಿದ್ರೋ ಮಗ ವಿಹಾನ್ ಕುಂದ್ರಾ ಕೂಡ ಅಷ್ಟೇ ಆ್ಯಕ್ಟೀವ್ ಆಗಿದ್ದ. ಸದಾ ಸೋಷಿಯಲ್ ಮೀಡಿಯಾದಲ್ಲಿ ಒಂದಿಲ್ಲೊಂದು ಪೋಸ್ಟ್ ಹಾಕ್ತಾ ಇದ್ದ. ಆದ್ರೆ ರಾಜ್...

ಪ್ರಮುಖ ಸುದ್ದಿ

ರಾಜಸ್ಥಾನ : ಹಿಂದಿನ ಕಾಲದಿಂದಲೂ ಪಾರಿವಾಳ ಸಂದೇಶ ರವಾನಿಸುವ, ಬೇಹುಗಾರಿಕೆಯಲ್ಲೂ ತನ್ನ ಚಾಣಾಕ್ಯತನ ತೋರಿದೆ. ತಂತ್ರಜ್ಞಾನ ಮುಂದುವರೆದ ಕಾಲದಲ್ಲೂ ಪಾಕಿಸ್ತಾನದಿಂದ ಪತ್ರವೊಂದನ್ನ ಹೊತ್ತು ತಂದಿದೆ ಪಾರಿವಾಳ. ಹೌದು, ಈ ಘಟನೆ ನಡೆದಿರೋದು ರಾಜಸ್ಥಾನದ...

You May Also Like

ಚಿತ್ರದುರ್ಗ

ಚಿತ್ರದುರ್ಗ, (ಜು.31): ಕೋಟೆನಾಡಿನಲ್ಲಿ ಮತ್ತೆ ಸರಗಳ್ಳತ ಹಾವಳಿ ಶುರುವಾಗಿದೆ. ಬೆಳಗಿ ಹೊತ್ತು ವಾಯು ವಿಹಾರಕ್ಕೆ ಬರುವ ಮಹಿಳೆಯರನ್ನು ಟಾರ್ಗೆಟ್ ಮಾಡುವ ಕಳ್ಳರು ಬೈಕ್ ನಲ್ಲಿ ಬಂದು ಸರ ಕಿತ್ತುಕೊಂಡು ಪರಾರಿಯಾಗುತ್ತಿದ್ದಾರೆ. ಶನಿವಾರ ಬೆಳಗ್ಗೆ...

ಪ್ರಮುಖ ಸುದ್ದಿ

ಅಭಿಮಾನಿಗಳು ತಮ್ಮ ಅಭಿಮಾನವನ್ನ ಒಂದೊಂದು ಬಾರಿ ಒಂದೊಂದು ರೀತಿಯಲ್ಲಿ ಅಭಿಮಾನ ತೋರಿಸ್ತಾರೆ. ಅದರಲ್ಲೂ ಅಭಿಮಾನಿಗಳು ತಮ್ಮ ನೆಚ್ಚಿನ ನಟ ನಟಿಯರ ಫೋಟೋಗಳಿಗೆ ಹಾರ ಹಾಕಿ, ಅಭಿಷೇಕ‌ ಮಾಡಿ ಎಂಜಾಯ್ ಮಾಡ್ತಾರೆ. ಇನ್ನು ಒಂದೆಜ್ಜೆ...

ಆರೋಗ್ಯ

ರಾಗಿ ತಿಂದೋನಿಗೆ ರೋಗವಿಲ್ಲ ಅನ್ನೋ ಮಾತು ಕೇಳಿರ್ತೀರಿ. ಆದ್ರೆ ಈ ಮಾತು ಯಾಕೆ ಹೇಳ್ತಾರೆ ಅಂತ ಗೊತ್ತಾಗ್ಬೇಕಂದ್ರೆ ರಾಗಿಯಿಂದ ಆರೋಗ್ಯಕ್ಕೆ ಅದೆಷ್ಟೆಲ್ಲ ಲಾಭಗಳಿವೆ ಎಂದು ತಿಳ್ಕೋಬೇಕು. ರಾಗಿಯಲ್ಲಿ ಸಾಕಷ್ಟು ಕ್ಯಾಲ್ಶಿಯಂ ಇದೆ. ಆಸ್ಟಿಯೋಪೋರೋಸಿಸ್...

ಆರೋಗ್ಯ

ಅರಳಿ ಮರ ಸಾಮಾನ್ಯವಾಗಿ ಎಲ್ಲೆಡೆ ಇರುತ್ತೆ. ಅದಕ್ಕೆ ನಗರ, ಗ್ರಾಮೀಣ ಅಂತೆಲ್ಲಾ ಏನಿಲ್ಲ. ನಗರ ಪ್ರದೇಶದಲ್ಲೂ ದೇವಾಲಯದ ಮುಂದೆ ಅರಳಿಮರವನ್ನ ಕಾಣಬಹುದು. ಈ ಅರಳಿ‌ಮರದ ಎಲೆಗಳಿಂದ ಸಾಕಷ್ಟು ಲಾಭಗಳಿವೆ. ಅದು ಅಷ್ಟಾಗಿ ಯಾರಿಗೂ...

Copyright © 2021 Suddione. Kannada online news portal

error: Content is protected !!