ದಾವಣಗೆರೆ: ಮಾಡಾಳು ಪ್ರಶಾಂತ್ ಲಂಚ ಪ್ರಕರಣದಲ್ಲಿ ಜೈಲು ಸೇರಿದ್ದು, ಶಾಸಕ ಮಾಡಾಳು ವಿರೂಪಾಕ್ಷಪ್ಪ ಎಸ್ಕೇಪ್ ಆಗಿದ್ದರು. ಹೈಕೋರ್ಟ್ ನಿಂದ ಮಧ್ಯಂತರ ಜಾಮೀನು ಸಿಕ್ಕ ಬೆನ್ನಲ್ಲೇ ಎಲ್ಲರ ಮುಂದೆ ಕಾಣಿಸಿಕೊಂಡಿದ್ದಾರೆ. ಅದರಲ್ಲೂ ಹಾರ ಹಾಕಿಕೊಮಡು, ವಾದ್ಯಗಳೊಂದಿಗೆ ಅದ್ದೂರಿಯಾಗಿ ಎಂಟ್ರಿ ಕೊಟ್ಟಿದ್ದಾರೆ.
ಮಹದೇವಮ್ಮ ದೇವಿ ದರ್ಶನ ಪಡೆದು, ಈಶ್ವರನ ದೇವಸ್ಥಾನಕ್ಕೆ ಹೋಗಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಬಳಿಕ ಮಾತನಾಡಿದ ವಿರೂಪಾಕ್ಷಪ್ಪ, ಈ ರೀತಿಯ ಆರೋಪ ಬಂದಿದ್ದರಿಂದ ನಾನು ಎಲ್ಲಿಯೂ ಕಾಣಿಸಿಕೊಂಡಿರಲಿಲ್ಲ. ಹಾಗಂತ ಎಲ್ಲಿಯೂ ಓಡಿ ಹೋಗಿರಲಿಲ್ಲ. ಊರಿನಲ್ಲಿಯೇ ಇದ್ದೆ. ಅಡಿಕೆ ತೋಟ, ಕ್ರಷರ್ ನಿಂದ ಬಂದ ಹಣವನ್ನು ಮನೆಯಲ್ಲಿಟ್ಟಿದ್ದೆವು. ಅದು ಲೋಕಾಯುಕ್ತ ಅಧಿಕಾರಿಗಳ ಕೈಗೆ ಸಿಕ್ಕಿದೆ ಎಂದು ಸಮರ್ಥನೆ ನೀಡಿದ್ದಾರೆ.
ಆ ಹಣಕ್ಕೆ ನಮ್ಮ ಬಳಿ ದಾಖಲೆಯಿದೆ. KSDL ಅಧ್ಯಕ್ಷನಾಗಿ ನಾನು ನಿಯಮಬಾಹಿರವಾಗಿ ನಾನು ನಡೆದುಕೊಂಡಿಲ್ಲ. ಪಕ್ಷ ತಾಯಿಯಿದ್ದಂತೆ, ಪಕ್ಷಕ್ಕೆ ಎಂದೂ ದ್ರೋಹ ಮಾಡಿಲ್ಲ. ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ನಿಷ್ಪಕ್ಷಪಾತವಾಗಿ ತನಿಖೆ ನಡೆಸುವುದಾಗಿ ತಿಳಿಸಿದ್ದಾರೆ. 48 ಗಂಟೆಯೊಳಗೆ ತನಿಖಾಧಿಕಾರಿಗಳ ಮುಂದೆ ಹಾಜರಾಗುತ್ತೇನೆ ಎಂದು ತಿಳಿಸಿದ್ದಾರೆ.