ಬೆಂಗಳೂರು: ಕೆಂದ್ರ ಸರ್ಕಾರದ ಮೇಲೆ ಡಿಸಿಎಂ ಡಿಕೆ ಶಿವಕುಮಾರ್ ಆಕ್ರೋಶ ಹೊರ ಹಾಕಿದ್ದಾರೆ. ಭದ್ರಾ ಮೇಲ್ದಂಡೆ ಯೋಜನೆಯನ್ನು ರಾಷ್ಟ್ರೀಯ ಯೋಜನೆ ಎಂದು 2023-24ರ ಬಜೆಟ್ ನಲ್ಲಿ ಕೇಂದ್ರ ಸರ್ಕಾರ ಘೋಷಣೆ ಮಾಡಿತ್ತು. ಇದಕ್ಕಾಗಿ 5,300 ಕೋಟಿ ರೂಪಾಯಿ ಅನುದಾನವನ್ನು ಮೀಸಲು ಇಟ್ಟಿತ್ತು. ಆದರೆ ಈಗ ರಾಷ್ಟ್ರೀಯ ಯೋಜನೆಯಲ್ಲ ಎನ್ನುತ್ತಿದೆ ಎಂದಿದ್ದಾರೆ.

ಇನ್ನು ಈ ಯೋಜನೆ ಸಂಬಂಧ ಜಲಸಂಪನ್ಮೂಲ ಇಲಾಖೆಯಲ್ಲಿ 600 ಕೋಟಿ ರೂಪಾಯಿ ಮಾತ್ರ ಇದೆ. 1 ಕೋಟಿ 25 ಲಕ್ಷ ರೂಪಾಯಿ ಕೆಲಸ ಮಂಜೂರು ಆಗಿದೆ. ನಾನೇನು ಮಾಡಬೇಕು, ನನಗೂ ಜವಬ್ದಾರಿ ಇದೆ ಎಂದರು.
ಇನ್ನು ಬಿಬಿಎಂಪಿ ಅಧಿಕಾರಿಗಳ ಬಗ್ಗೆಯೂ ತನಿಖೆ ಮಾಡಿಸುತ್ತೇವೆ. ಬಿಬಿಎಂಪಿಯಲ್ಲಿ ಟೆಂಡರ್ ಆಗದಿದ್ದರೂ ಕಾಮಗಾರಿ ನಡೆಸಿದ್ದಾರೆ. ಹೀಗಾಗಿ ಪರಿಶೀಲನೆ ಮಾಡಲು ಅಧಿಕಾರಿಗಳಿಗೆ ಸೂಚಿಸಿದ್ದೇನೆ. 25 ದಿನಕ್ಕೆಲ್ಲಾ ಬಿಲ್ ಆಗಿ ಬಿಡುತ್ತಾ ಎಂದು ಪ್ರಶ್ನಿಸಿದ್ದಾರೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.


















