ಆದಿಜಾಂಬವ ಅಭಿವೃದ್ಧಿ ನಿಗಮದ ಅಧ್ಯಕ್ಷರಾಗಿ ಜಿ.ಎಸ್.ಮಂಜುನಾಥ್ ಅಧಿಕಾರ ಸ್ವೀಕಾರ

0 Min Read

ಸುದ್ದಿಒನ್, ಚಿತ್ರದುರ್ಗ, ಜೂ.24‌:  ಆದಿಜಾಂಬವ ಅಭಿವೃದ್ಧಿ ನಿಗಮದ ಅಧ್ಯಕ್ಷರಾಗಿ ನೇಮಕವಾದ ಕೆಪಿಸಿಸಿ ಅಸಂಘಟಿತ ಕಾರ್ಮಿಕ ವಿಭಾಗದ ಅಧ್ಯಕ್ಷ ಜಿ.ಎಸ್.ಮಂಜುನಾಥ್ ಅವರು ಬೆಂಗಳೂರಿನ ಯೂನಿಟಿ ಬಿಲ್ಡಿಂಗ್‍ನಲ್ಲಿರುವ ಕರ್ನಾಟಕ ಆದಿಜಾಂಬವ ಅಭಿವೃದ್ಧಿ ನಿಗಮದ ಕಚೇರಿಯಲ್ಲಿ ಸೋಮವಾರ ಅಧಿಕಾರ ಸ್ವೀಕರಿಸಿದರು.

ಈ ಸಂದರ್ಭದಲ್ಲಿ ಮಾಜಿ ಸಚಿವ ಹೆಚ್.ಆಂಜನೇಯ, ಮಾಜಿ ಸಂಸದ ಬಿ.ಎನ್.ಚಂದ್ರಪ್ಪ, ಕಂಠೀರವ ಸ್ಟುಡಿಯೋ ಅಧ್ಯಕ್ಷ ಮಹಮ್ಮದ್ ಪಾಷಾ, ನಿಗಮದ ವ್ಯವಸ್ಥಾಪಕ ನಿರ್ದೇಶಕ ಬಿ.ಟಿ.ಮಂಜುನಾಥ್, ಯುವ ಕಾಂಗ್ರೆಸ್ ಮುಖಂಡ ರವಿವರ್ಮ, ಬೈನರಿ ಅಪರಲ್ ಪಾರ್ಕ್‌ನ ಛೇರ್ಮನ್ ಕೆ.ಶ್ರೀನಿವಾಸ್ ಉಪಸ್ಥಿತರಿದ್ದರು.

Share This Article
Leave a Comment

Leave a Reply

Your email address will not be published. Required fields are marked *