Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

---Advertisement---

ಮತ್ತೆ ಬಿಜೆಪಿಯೇ ಅಧಿಕಾರಕ್ಕೆ ಬರಲಿ ಎಂದು ಹರಕೆ ಸಲ್ಲಿಸಿದ ಗದಗ ಮುಸ್ಲಿಂ ವ್ಯಕ್ತಿ

---Advertisement---

ಗದಗ: ತಮ್ಮಿಷ್ಟದ ವ್ಯಕ್ತಿಗೆ ಗೆಲುವಾಗಲಿ, ತಮ್ಮಿಷ್ಟದ ಕೆಲಸ‌ ನೆರವೇರಲಿ ಅಂತ ದೇವರಿಗೆ ಹರಕೆ‌ ಕಟ್ಟಿಕೊಳ್ಳುವುದು ಸಹಜ. ಇಲ್ಲೊಬ್ಬ ಮುಸ್ಲಿಂ ವ್ಯಕ್ತಿ ಈ ಬಾರಿಯೂ ಬಿಜೆಪಿಯೇ ಅಧಿಕಾರಕ್ಕೆ ಬರಲಿ ಅಂತ ದೇವರಿಗೆ ಹರಕೆ ತೀರಿಸಿದ್ದಾರೆ. ರಾಮಂದಿರಕ್ಕೆ ದೀರ್ಘ ದಂಡ ನಮಸ್ಕಾರ ಹಾಕಿದ್ದಾನೆ.

ಇಲ್ಲಿನ ಬೆಟಗೇರಿಯ ನಿವಾಸಿ ಭಕ್ಷಿ ಎಂಬಾತ ಇಂಥದ್ದೊಂದು ವಿಶೇಷ ಹರಕೆಯನ್ನು ಕಟ್ಟಿಕೊಂಡಿದ್ದಾನೆ. ಹರಕೆ ಹೊತ್ತು, ದೇವರಿಗೆ ದೀರ್ಘ ದಂಡ ನಮಸ್ಕಾರವನ್ನು ಹಾಕಿದ್ದಾನೆ. ಭಕ್ಷಿ ಜೊತೆಗೆ ಮಂಜುನಾಥ್ ಎಂಬುವವರೂ ಕೂಡ ದೀರ್ಘ ದಂಡ ನಮಸ್ಕಾರ ಹಾಕಿದ್ದಾರೆ.

ಬಿಜೆಪಿ ಅಧಿಕಾರಕ್ಕೆ ಬರಬೇಕು ಎಂಬ ಆಸೆಯ ಜೊತೆಗೆ ಗದಗ ಕ್ಷೇತ್ರದ ಅಭ್ಯರ್ಥಿ ಅನಿಲ್ ಮೆಣಸಿನಕಾಯಿ ಅವರಿಗೂ ಗೆಲುವಾಗಬೇಕೆಂದು ದೇವರಲ್ಲಿ ಬೇಡಿಕೊಂಡಿದ್ದಾರೆ. ರಾಮಮಂದಿರದಿಂದ ಹಿಡಿದು ಆಂಜನೇಯ ದೇವಸ್ಥಾನದವರೆಗೂ ದೀರ್ಘದಂಡ ನಮಸ್ಕಾರ ಹಾಕಲಾಗಿದೆ. ಈ ಹರಕೆ ತೀರಿಸಲು ಹಲವಾರು ಕಾರ್ಯಕರ್ತರು, ಮುಖಂಡರು ಸಾಥ್ ನೀಡಿದ್ದಾರೆ.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment