Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಬೆಳಗಾವಿಯಲ್ಲಿ ಇಂದು ಗಾಂಧಿ ಭಾರತ ಸಮಾವೇಶ : 2 ಲಕ್ಷ ಜನ ಸೇರುವ ನಿರೀಕ್ಷೆ .. ರಾಹುಲ್ ಗಾಂಧಿ ಬರ್ತಿಲ್ಲ..!

---Advertisement---

ಬೆಳಗಾವಿ: ರಾಜ್ಯ ಕಾಂಗ್ರೆಸ್ ಸರ್ಕಾರದ ವತಿಯಿಂದ ಇಂದು ಗಾಂಧಿ ಭಾರತ ಅಧಿವೇಶನ ಹಮ್ಮಿಕೊಳ್ಳಲಾಗಿದೆ. ಮಹಾತ್ಮ ಗಾಂಧೀಜಿಯವರು 1924ರಲ್ಲಿ ಬೆಳಗಾವಿಯಲ್ಲಿ ನಡೆಸಿದ್ದ ಕಾಂಗ್ರೆಸ್ ಅಧಿವೇಶನವೂ ಶತಮಾನ ಪೂರೈಸಿದ ಸ್ಮರಣಾರ್ಥ ರಾಜ್ಯ ಕಾಂಗ್ರೆಸ್ ಇಂದು ಬೆಳಗಾವಿಯಲ್ಲಿ ಅಧಿವೇಶನ ನಡೆಸುತ್ತಿದೆ. ಕಾರ್ಯಕ್ರಮದಲ್ಲಿ ಬಿಗಿ ಪೊಲೀಸ್ ಬಂದೋ ಬಸ್ತ್ ಒದಗಿಸಲಾಗಿದೆ. ದೇಶದ ನಾನಾ ಭಾಗಗಳಿಂದ ನಾಯಕರು ಆಗಮಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಗಾಂಧೀಜಿ ಪುತ್ಥಳಿ ಅನಾವರಣಕ್ಕೆ ಎಲ್ಲಾ ವ್ಯವಸ್ಥೆ ಮಾಡಲಾಗಿದೆ.

ಗಾಂಧಿ ಭಾರತ ಕಾರ್ಯಕ್ರಮಕ್ಕೆ ಕಾಂಗ್ರೆಸ್ ನ ಎಲ್ಲಾ ನಾಯಕರು ಭಾಗಿಯಾಗಲಿದ್ದಾರೆ. ಇಡೀ ಬೆಳಗಾವಿಯಲ್ಲಿ ಕಾಂಗ್ರೆಸ್ ಬಾವುಟಗಳದ್ದೇ ಹಾರಾಟ. ಪ್ರಮುಖ ರಸ್ತೆಗಳಲೆಲ್ಲಾ ಕಾಂಗ್ರೆಸ್ ಮಯವಾಗಿದೆ. ಕಾಂಗ್ರೆಸ್ ನಾಯಕರ ಬ್ಯಾನರ್ ಗಳು ರಾರಾಜಿಸುತ್ತಿವೆ. ಗಾಂಧೀಜಿ, ಅಂಬೇಡ್ಕರ್ ಅವರ ವಿಚಾರಧಾರೆಗಳನ್ನ ಮುಂದಿಟ್ಟುಕೊಂಡು ಕೈ ನಾಯಕರು ಜನ ಶಕ್ತಿ ಪ್ರದತ್ಶನಕ್ಕೆ ಮುಂದಾಗಿದ್ದಾರೆ. ಗಡಿ ಜಿಲ್ಲೆಯಲ್ಲಿ ಕಾಂಗ್ರೆಸ್ ನಾಯಕರು ರಣಕಹಳೆ ಮೊಳಗಿಸಲು ಸಿದ್ಧರಾಗಿದ್ದಾರೆ.

ಈ ಹಿಂದೆಯೇ ನಿಗದಿಯಾಗಿತ್ತು. ಆದರೆ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ನಿಧನದಿಂದಾಗಿ ಆ ಕಾರ್ಯಕ್ರಮವನ್ನು ಮುಂದೂಡಿಕೆ ಮಾಡಿದ್ದರು. ಇಂದು ಕಾರ್ಯಕ್ರಮಕ್ಕೆ ಚಾಲನೆ ನೀಡುತ್ತಿದ್ದಾರೆ. ಜೊತೆಗೆ ರಾಹುಲ್ ಗಾಂಧಿ ಭಾಗಿಯಾಗಲಿದ್ದಾರೆ ಎನ್ನಲಾಗಿತ್ತು. ಆದರೆ ಅವರಿಗೆ ಅನಾರೋಗ್ಯದ ಕಾರಣ ಈ ಕಾರ್ಯಕ್ರಮಕ್ಕೆ ಹಾಜರಾಗಲು ಸಾಧ್ಯವಾಗಿಲ್ಲ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಗಾಂಧಿ ಪ್ರತಿಮೆಯನ್ನು ಲೋಕಾರ್ಪಣೆ ಮಾಡಲಿದ್ದಾರೆ. ಇನ್ನು ಮಧ್ಯಾಹ್ನ1 ಗಂಟೆಗೆ ಬೆಳಗಾವಿಯ ಸಿಪಿಎಡ್ ಮೈದಾನದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಸುಮಾರು ಎರಡು ಲಕ್ಷ ಜನರನ್ನು ಸೇರಿಸುವ ನಿರೀಕ್ಷೆ ಇದೆ. ಇದೇ ಸಮಾವೇಶದಲ್ಲಿ ಅಂಬೇಡ್ಕರ್ ಅವರ ವಿರುದ್ಧ ಮಾತನಾಡಿದ್ದ ಅಮಿತ್ ಶಾ ವಿರುದ್ಧ ಕಾಂಗ್ರೆಸ್ ಶಕ್ತಿ ಪ್ರದರ್ಶನ ನಡೆಸಲಿದೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment