Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಗಾಂಧೀಜಿ ತತ್ವಗಳನ್ನು ಜೀವನದಲ್ಲಿ ಅಳವಡಿಸಿಕೊಂಡಾಗ ಮಾತ್ರ ಗಾಂಧಿ ಜಯಂತಿಗೆ ನಿಜವಾದ ಅರ್ಥ : ಜೆಡಿಎಸ್ ಜಿಲ್ಲಾಧ್ಯಕ್ಷ ಕೆ. ಮಂಜುನಾಥ್

---Advertisement---

ವರದಿ ಮತ್ತು ಫೋಟೋ ಕೃಪೆ
ಕೆ.ಎಂ.ಮುತ್ತುಸ್ವಾಮಿ ಕಣ್ಣನ್,
ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಅಕ್ಟೋಬರ್. 02 : ಜಿಲ್ಲಾ ಜಾತ್ಯಾತೀತ ಜನತಾದಳದ ಕಚೇರಿಯಲ್ಲಿ ಮಹಾತ್ಮಗಾಂಧಿ ಜಯಂತಿಯನ್ನು ಶುಕ್ರವಾರ ಆಚರಿಸಲಾಯಿತು.

ಜೆಡಿಎಸ್.ಜಿಲ್ಲಾಧ್ಯಕ್ಷ ಕೆ.ಮಂಜುನಾಥ್ ಗಾಂಧಿಜಿ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಮಾತನಾಡುತ್ತ ಸತ್ಯ ಮತ್ತು ಅಹಿಂಸೆಯ ಮೂಲಕ ದೇಶದ ಸ್ವಾತಂತ್ರಕ್ಕಾಗಿ ಬ್ರಿಟೀಷರ ವಿರುದ್ದ ಹೋರಾಡಿದ ರಾಷ್ಟ್ರಪಿತ ಮಹಾತ್ಮಗಾಂಧಿಜಿರವರಲ್ಲಿದ್ದ ದೇಶ ಭಕ್ತಿ ಹಾಗೂ ಆದರ್ಶಗಳನ್ನು ಎಲ್ಲರೂ ಜೀವನದಲ್ಲಿ ಅಳವಡಿಸಿಕೊಂಡಾಗ ಮಾತ್ರ ಇಂತಹ ಮಹನೀಯರ ಜಯಂತಿಗಳಿಗೆ ನಿಜವಾದ ಅರ್ಥ ಸಿಗುತ್ತದೆ. ಜೀವನವಿಡಿ ದೇಶದ ಸ್ವಾತಂತ್ರಕ್ಕಾಗಿ ಹೋರಾಡಿ ಪ್ರಾಣ ತ್ಯಾಗ ಮಾಡಿದ ಗಾಂಧಿ ಬ್ರಿಟೀಷರ ವಿರುದ್ದ ಎಂದಿಗೂ ಕೆರಳಲಿಲ್ಲ. ಶಾಂತಿಯುತ ಚಳುವಳಿಯಿಂದ ಸ್ವಾತಂತ್ರ್ಯವನ್ನು ಗಳಿಸಿದ ಪರಿಣಾಮ ದೇಶದಲ್ಲಿರುವ ಎಲ್ಲರೂ ನೆಮ್ಮದಿಯಾಗಿ ಬದುಕುತ್ತಿದ್ದಾರೆಂದು ಗುಣಗಾನ ಮಾಡಿದರು.

ಜೆಡಿಎಸ್.ಜಿಲ್ಲಾ ಕಾರ್ಯಾಧ್ಯಕ್ಷರಾದ ಜಿ.ಬಿ.ಶೇಖರ್, ಮಹಾ ಪ್ರಧಾನ ಕಾರ್ಯದರ್ಶಿ ಡಿ.ಗೋಪಾಲಸ್ವಾಮಿ ನಾಯಕ, ತಾಲ್ಲೂಕು ಅಧ್ಯಕ್ಷ ಸಣ್ಣತಿಮ್ಮಣ್ಣ, ಯುವ ಘಟಕದ ಜಿಲ್ಲಾಧ್ಯಕ್ಷ ಓ.ಪ್ರತಾಪ್‍ಜೋಗಿ, ನ್ಯಾಯವಾದಿಗಳಾದ ಅಶೋಕ್‍ಬೆಳಗಟ್ಟ, ತಿಪ್ಪೇರುದ್ರಮ್ಮ, ಚಿತ್ರದುರ್ಗ ನಗರಾಭಿವೃದ್ದಿ ಪ್ರಾಧಿಕಾರದ ಮಾಜಿ ಸದಸ್ಯ ಎಂ.ಎಸ್.ಮಂಜುನಾಥ್, ಗೀತ, ಪ್ರಕಾಶ್ ಕೆ, ಶಿವಕುಮಾರ್, ಅಬ್ಬು, ರುದ್ರಣ್ಣ ಜಾಲಿಕಟ್ಟೆ, ಚಿದಾನಂದ್, ಪುಟ್ಟು, ಪುಟಾಣಿ ಇಂಚರ, ಧನಂಜಯ ಇನ್ನು ಅನೇಕರು ಜಯಂತಿಯಲ್ಲಿ ಭಾಗವಹಿದ್ದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now