ವರದಿ ಮತ್ತು ಫೋಟೋ ಕೃಪೆ
ಸುರೇಶ್ ಪಟ್ಟಣ್,
ಮೊ : 98862 95817
ಸುದ್ದಿಒನ್, ಚಿತ್ರದುರ್ಗ ಜ. 01 : ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನಿನಲ್ಲಿ ತ್ಯಾಜ್ಯಕ್ಕೆ ಕಿಡಿಗೇಡಿಗಳು ಬೆಂಕಿ ಇಟ್ಟಿದ್ದು ಇದರಿಂದಾಗಿ ಕೆಟ್ಟ ವಾಸನೆಯ ದಟ್ಟ ಹೊಗೆ ವ್ಯಾಪಿಸಿ ವಾಹನ ಸವಾರರು ಸ್ವಲ್ಪ ಕಾಲ ಪರದಾಡುವಂತಾಯಿತು.
ತಾಲ್ಲೂಕಿನ ಕುಂಚಿಗನಹಾಳ್ ಗ್ರಾಮದ ರಸ್ತೆಯ ಪಕ್ಕದ ಕೈಗಾರಿಕಾ ಪ್ರದೇಶದ ಬಳಿ ಎಲ್ಲೆಂದರಲ್ಲಿ ತ್ಯಾಜ್ಯಗಳನ್ನು ಎಸೆಯಲಾಗಿದೆ. ಈ ತ್ಯಾಜ್ಯಗಳಿಗೆ ಕಿಡಿಗೇಡಿಗಳು ಬೆಂಕಿ ಇಟ್ಟಿದ್ದು, ಬೆಂಕಿಯ ತೀವ್ರತೆ ಹೆಚ್ಚಾಗಿ ದಟ್ಟ ಹೊಗೆ ಆವರಿಸಿ ವಾಹನ ಸವಾರರು ಪರದಾಡಬೇಕಾಯಿತು. ಇದರ ಜೊತೆ ಕೆಮಿಕಲ್ ಪ್ಲೈವುಡ್ ಕಂಪನಿ ತ್ಯಾಜ್ಯವನ್ನು ತಂದು ಇದೇ ರಸ್ತೆಯ ಪಕ್ಕ ಎಸೆಯಲಾಗಿದೆ.
ಬೆಂಕಿಯ ಕೆನ್ನಾಲಿಗೆ ಬಾನೆತ್ತರಕ್ಕೆ ದಟ್ಟ ಹೊಗೆ ಆವರಿಸಿದೆ. ಇನ್ನು ದಟ್ಟ ಹೊಗೆಗೆ ಈ ಮಾರ್ಗದ ಮೂಲಕ ಸಾಗಲು ವಾಹನ ಸವಾರರು ಪರದಾಡಬೇಕಾಯಿತು. ಇನ್ನು ಪಕ್ಕದಲ್ಲೇ ವಿದ್ಯುತ್ ಸರಬರಾಜು ಯೂನಿಟ್ ಹಾಗೂ ರೈತರ ಜಮೀನು ಕೂಡ ಇದ್ದು, ಅನಾಹುತ ಆದ್ರೆ ಯಾರು ಹೊಣೆ ಎಂದು ಘಟನೆಗೆ ರೈತರು ಆತಂಕ ವ್ಯಕ್ತಪಡಿಸಿದ್ದಾರೆ.
ಸುದ್ದಿಒನ್ :ಮಕ್ಕಳಿಗೆ ಟೀ ಮತ್ತು ಕಾಫಿ ಕೊಡುವ ಮೊದಲು ತಿಳಿದುಕೊಳ್ಳಬೇಕಾದ ಕೆಲವು ವಿಷಯಗಳಿವೆ. ಚಿಕ್ಕ ವಯಸ್ಸಿನಲ್ಲಿ ಚಹಾ ಅಥವಾ ಕಾಫಿ…
ಈ ರಾಶಿಯ ದಂಪತಿಗಳಿಗೆ ಅತಿಯಾದ ಕಿರುಕುಳದಿಂದ ಜಿಗುಪ್ಸೆ, ಶುಕ್ರವಾರದ ರಾಶಿ ಭವಿಷ್ಯ 31 ಜನವರಿ 2025 - ಸೂರ್ಯೋದಯ -…
ದಾವಣಗೆರೆ: ಇತ್ತೀಚೆಗೆ ಮೈಕ್ರೋ ಫೈನಾನ್ಸ್ ಕಾಟಕ್ಕೆ ರಾಜ್ಯದಲ್ಲಿ ಜೀವ ಕಳೆದುಕೊಂಡವರು ಅದೆಷ್ಟೋ. ಇದಕ್ಕೆ ಕಡಿವಾಣ ಹಾಕುವುದಕ್ಕೆ ಸರ್ಕಾರ ಕೂಡ ಸಭೆಗಳನ್ನ…
ಚಿತ್ರದುರ್ಗ. ಜ.30: ಮಹಾತ್ಮಾ ಗಾಂಧೀಜಿಯವರು ಹುತಾತ್ಮರಾದ ದಿನವಾದ ಜ. 30 ರಂದು ಸರ್ವೋದಯ ದಿನವನ್ನಾಗಿ ಆಚರಿಸಲಾಗುತ್ತಿದ್ದು, ಈ ನಿಮಿತ್ತ ಅಪರ…
ಚಿತ್ರದುರ್ಗ. ಜ.30: ಚಿತ್ರದುರ್ಗ ತಾಲ್ಲೂಕಿನ ಕಾಲ್ಗೆರೆ ಹಾಗೂ ಇಸ್ಸಾಮುದ್ರ ಗ್ರಾಮ ಪಂಚಾಯಿತಿಗಳಿಗೆ ಗುರುವಾರ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ…
ದಾವಣಗೆರೆ ಜ.30 : ಯಾವುದೇ ವ್ಯಕ್ತಿಯನ್ನು ನಿಂದನೆ ಮಾಡಲು ಅವಕಾಶವಿಲ್ಲ, ಮೈಕ್ರೋ ಫೈನಾನ್ಸ್ ಕಂಪನಿಗಳು ಜನರಿಗೆ ಕಿರುಕುಳ ನೀಡಿದಲ್ಲಿ ಎಫ್ಐಆರ್…