Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಭರಮಸಾಗರದಲ್ಲಿ ಗ್ಯಾಸ್ ಸಿಲಿಂಡರ್ ಅನಿಲ ಸೋರಿಕೆ!

---Advertisement---

ಚಿತ್ರದುರ್ಗ: ತಾಲೂಕಿನ ಭರಮಸಾಗರದಲ್ಲಿ ಗ್ಯಾಸ್ ಸಿಲಿಂಡರ್‌ನಿಂದ ಅನಿಲ ಸೋರಿಕೆಯಾಗಿ ಟೀ ಸ್ಟಾಲ್‌ಗೆ ಬೆಂಕಿ ಹೊತ್ತಿಕೊಂಡು ಸಂಪೂರ್ಣವಾಗಿ ಸುಟ್ಟುಹೋದ ಘಟನೆ ಶನಿವಾರ (ಸೆ.19) ಬೆಳಗ್ಗೆ ನಡೆದಿದೆ.ಭರಮಸಾಗರದ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದ ಪಕ್ಕದಲ್ಲಿದ್ದ ಟೀ ಸ್ಟಾಲ್‌ನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದೆ.

ಕ್ಷಣಾರ್ಧದಲ್ಲೇ ಬೆಂಕಿ ವ್ಯಾಪಿಸಿಕೊಂಡಿದ್ದು, ಟೀ ಸ್ಟಾಲ್ ಸಂಪೂರ್ಣವಾಗಿ ಬೆಂಕಿಗಾಹುತಿಯಾಗಿದೆ.ಬೆಂಕಿಯ ತೀವ್ರತೆಗೆ ಅಂಗಡಿಯಲ್ಲಿದ್ದ ವಸ್ತುಗಳೆಲ್ಲವೂ ಸುಟ್ಟು ಕರಕಲಾಗಿವೆ. ಬೆಂಕಿ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಸ್ಥಳೀಯರು ಆತಂಕಗೊಂಡಿದ್ದು, ಬೆಂಕಿ ನಂದಿಸಲು ಹರಸಾಹಸಪಟ್ಟಿದ್ದಾರೆ. ಕೆಲಕಾಲ ಸ್ಥಳದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿತ್ತು.

ಅದೃಷ್ಟವಶಾತ್ ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಭರಮಸಾಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಘಟನೆಗೆ ಸಂಬಂಧಿಸಿದಂತೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now