Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ರಾಜ್ಯ ಸರ್ಕಾರದ ಹೊರ ಗುತ್ತಿಗೆ ನೌಕರರಿಗೆ ಗೇಟ್ ಪಾಸ್..!

---Advertisement---

ರಾಜ್ಯ ಸರ್ಕಾರದಲ್ಲಿ ಅದೆಷ್ಟೋ ಜನ ಹೊರಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುತ್ತಿದ್ದಾರೆ. ಆದರೆ ಇದೀಗ ರಾಹ್ಯ ಸರ್ಕಾರ ಅದಕ್ಕೆ ಬ್ರೇಕ್ ಹಾಕುವ ಯೋಜನೆ ರೂಪಿಸಿದೆ. ಹಾಗಾದ್ರೆ ಆ ನೌಕರರ ಕಥೆ ಏನು..? ಅದರ ಬದಲಿಗೆ ರಾಜ್ಯ ಸರ್ಕಾರ ಏನು ಮಾಡುತ್ತೆ ಎಂಬುದನ್ನ ತಿಳಿದುಕೊಳ್ಳುವುದಕ್ಕೆ ಮುಂದೆ ಓದಿ.

ರಾಜ್ಯ ಸರ್ಕಾರದಲ್ಲಿ ಸದ್ಯ 5.88 ಲಕ್ಷ ಉದ್ಯೋಗಿಗಳು ಕೆಲಸ ಮಾಡುತ್ತಿದ್ದಾರೆ. ಅವರಲ್ಲಿ 96.844 ಜನರು ಹೊರಗುತ್ತಿಗೆ ನೌಕರರಾಗಿದ್ದಾರೆ. ಈ ಸಂಬಂಧ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಮಾಹಿತಿಯನ್ನ ನೀಡಿದೆ. ಅದರಲ್ಲೂ ವೈದ್ಯಕೀಯ ಇಲಾಖೆಯೇ 15.824 ಹೊರಗುತ್ತುಗೆ ಪಡೆದ ಉದ್ಯೋಗಿಗಳನ್ನು ಹೊಂದಿದೆ. ಶಿಕ್ಷಣ ಇಲಾಖೆಯಲ್ಲಿ ಹೆಚ್ಚು ಮಂದಿ ಹೊರಗುತ್ತಿಗೆ ನೌಕರರು ಇದ್ದಾರೆ. ಪರಿಶಿಷ್ಟ ಜಾತಿ ಒಳ ಮೀಸಲಾತಿ ಜಾರಿ ಆಗುವ ತನಕ ಯಾವುದೇ ನೇಮಕಾತಿ ಬೇಡ ಎಂದು ರಾಜ್ಯ ಸರ್ಕಾರ ಈ ಹಿಂದೆಯೇ ಆದೇಶ ಮಾಡಿದೆ.

ಆ ಆದೇಶದ ಕಾತಣದಿಂದಾಗಿಯೇ ನವೆಂಬರ್ 2024‌ ರಿಂದ ಆಗಸ್ಟ್‌ 2025 ರ ನಡುವೆ 9 ತಿಂಗಳ ಕಾಲ ಸರ್ಕಾರ ಯಾವುದೇ ಹೊಸ ನೇಮಕಾತಿಯನ್ನು ಕೈಗೊಳ್ಳುವುದಕ್ಕೆ ಸಾಧ್ಯವಾಗಿಲ್ಲ. ಈಗ ಒಳ ಮೀಸಲಾತಿಯೂ ಜಾರಿಯಾಗಿದ್ದು, ಸರ್ಕಾರ ಈ ಸಂದರ್ಭದಲ್ಲಿ ನೇಮಕಾತಿಗೆ ಮುಂದಾಗಿದೆ. ವೈದ್ಯಕೀಯ ಶಿಕ್ಷಣ ಇಲಾಖೆಯು 15,376 ಮಂದಿ ಮತ್ತು ಆರೋಗ್ಯ ಇಲಾಖೆ 11,424 ಹೊರಗುತ್ತಿಗೆ ನೌಕರರನ್ನು ಹೊಂದಿದೆ. ಹಿರಗುತ್ತಿಗೆ ನೌಕರರ ವೇತನಕ್ಕಾಗಿ ಸರ್ಕಾರ ಈ ವರ್ಷ 2,273 ಕೋಟಿ ಹಣವನ್ನು ಮೀಸಲಿಟ್ಟಿದೆ. ಒಟ್ಟಾರೆ ರಾಜ್ಯ ಸರ್ಕಾರ ಗುತ್ತಿಗೆಗಿಂತ ಖಾಯಂ ಕೆಲಸ ನೀಡಲು ನಿರ್ಧಾರ ಮಾಡಿದ್ದು, ಸರ್ಕಾರಿ ನೌಕರಿ ಪಡೆಯುವುದಕ್ಕೆ ಕಾಯುತ್ತಿರುವವರಿಗೆ ಸಂತಸ ತಂದಿದೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment