Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಗೌರಸಮುದ್ರ ಶ್ರೀ ಮಾರಮ್ಮ ಜಾತ್ರೆ: ಸೆ.14 ಮತ್ತು 15 ರಂದು ಮದ್ಯ ಮಾರಾಟ ನಿಷೇಧ

---Advertisement---

 

ಚಿತ್ರದುರ್ಗ. ಸೆ.09: ಚಳ್ಳಕೆರೆ ತಾಲೂಕಿನ ಗೌರಸಮುದ್ರ ಗ್ರಾಮದಲ್ಲಿ ನಡೆಯಲಿರುವ ಶ್ರೀ ಮಾರಮ್ಮ ದೇವಿಯ ಜಾತ್ರಾ ಮಹೋತ್ಸವದ ಹಿನ್ನೆಲೆಯಲ್ಲಿ ಸಾರ್ವಜನಿಕ ಶಾಂತಿ, ಸೌಹಾರ್ದತೆ ಹಾಗೂ ಕಾನೂನು ಸುವ್ಯವಸ್ಥೆಯನ್ನು ಕಾಪಾಡುವ ಮುಂಜಾಗ್ರತಾ ಕ್ರಮವಾಗಿ ಗೌರಸಮುದ್ರ ಮತ್ತು ಸುತ್ತಮುತ್ತಲಿನ 5 ಕಿಲೋಮೀಟರ್ ವ್ಯಾಪ್ತಿಯಲ್ಲಿ ಎಲ್ಲಾ ರೀತಿಯ ಮದ್ಯದ ಅಂಗಡಿಗಳನ್ನು ಮುಚ್ಚಲು  ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ರಮ್ಯಾ ಎಸ್. ಆದೇಶ ಹೊರಡಿಸಿದ್ದಾರೆ.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಸಲ್ಲಿಸಿದ್ದ ಪ್ರಸ್ತಾಪನೆಯ ಮೇರೆಗೆ ಜಾತ್ರೆಯ ಅವಧಿಯಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ತಡೆಯಲು ಮತ್ತು ಶಾಂತಿ ಸುವ್ಯವಸ್ಥೆಯನ್ನು ಕಾಯ್ದುಕೊಳ್ಳಲು ಈ ಕ್ರಮ ಕೈಗೊಳ್ಳಲಾಗಿದೆ.

ಅಬಕಾರಿ ಕಾಯ್ದೆ 1965ರ ಕಲಂ 21(1)ರ ಅಡಿ ಮದ್ಯ ಮಾರಾಟ ನಿಷೇಧಿಸಲಾಗಿದ್ದು, ಸೆ.14 ರ ಮಧ್ಯರಾತ್ರಿ 12 ಗಂಟೆಯಿAದ ಸೆ.15 ಮಧ್ಯರಾತ್ರಿ 12 ಗಂಟೆಯವರೆಗೆ ನಿಗದಿಪಡಿಸಿದ ವ್ಯಾಪ್ತಿಯಲ್ಲಿ ಯಾವುದೇ ರೀತಿಯ ಮದ್ಯ ಮಾರಾಟ ಮಾಡುವುದು ಅಥವಾ ಸಾಗಾಣಿಕೆ ಮಾಡುವುದನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now