Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಗೌರಿ ಹಬ್ಬದ ಸಂಭ್ರಮ : ಮಹಿಳೆಯರಿಗೆ ಬಾಗಿನ ವಿತರಣೆ

---Advertisement---

 

 

ವರದಿ ಮತ್ತು ಫೋಟೋ ಕೃಪೆ
ಸುರೇಶ್ ಪಟ್ಟಣ್,
ಮೊ : 98862 95817

ಸುದ್ದಿಒನ್, ಚಿತ್ರದುರ್ಗ. ಆ. 26 : ನಗರದ ವೀರಶೈವ ಲಿಂಗಾಯತ ಪಂಚಮಸಾಲಿ ಸಮಾಜದ ಕಿತ್ತೂರು ರಾಣಿ ಚನ್ನಮ್ಮ ಜಿಲ್ಲಾ ಮಹಿಳಾ ಘಟಕದವತಿಯಿಂದ ಗೌರಿ ಹಬ್ಬದ ಅಂಗವಾಗಿ ಇಂದು ನಗರದ ಜೆಸಿಆರ್ ಗಣಪತಿ ದೇವಾಲಯದಲ್ಲಿ ಮಹಿಳೆಯರಿಗೆ ಬಾಗಿನ ಅರ್ಪಿಸುವ ಕಾರ್ಯಕ್ರಮವನ್ನು ನಡೆಸಲಾಯಿತು.

ಗೌರಿ ಹಬ್ಬದಲ್ಲಿ ಮಹಿಳೆಯರಿಗೆ ಬಾಗಿನ ನೀಡುವುದು ನಮ್ಮ ಸಂಪ್ರಾದಾಯವಾಗಿದೆ. ಇದನ್ನು ಪಂಚಮಸಾಲಿ ಮಹಿಳಾ ಘಟಕ ಇದನ್ನು ಕಳೆದ ಹಲವಾರು ವರ್ಷದಿಂದ ನಡೆಸಿಕೊಂಡು ಬಂದಿದೆ. ಈ ಬಾರಿ ಜೆಸಿಆರ್ ಗಣಪತಿ ದೇವಾಲಯದಲ್ಲಿ ಮಹಿಳೆಯರಿಗೆ ಅಕ್ಕಿ,ಬೆಲ್ಲ,ಬೇಳೆ, ಹರಿಷಿಣ, ಕುಂಕುಮ, ಬಾಗಿನ ಸಾಮಾನುಗಳನ್ನು ಇಟ್ಟು ಅದನ್ನು ಮುತ್ತೈದೆ ಮಹಿಳೆಯರಿಗೆ ನೀಡುವುದರ ಮೂಲಕ ಗೌರಿ ಹಬ್ಬವನ್ನು ಆಚರಣೆ ಮಾಡಲಾಯಿತು. ಈ ಸಮಯದಲ್ಲಿ ಪಕ್ಕದಲ್ಲಿ ಗೌರಿಯನ್ನು ಪ್ರತಿಷ್ಠಾಪನೆ ಮಾಡುವುದರ ಮೂಲಕ ಆಗಮಿಸಿದ ಎಲ್ಲರಿಗೂ ಸಹಾ ಮಂಗಳರಾತಿಯನ್ನು ಮಾಡಿ ಪ್ರಸಾದವನ್ನು ನೀಡಲಾಯಿತು.

ಈ ಸಂದರ್ಭದಲ್ಲಿ ಪಂಚಮಸಾಲಿ ಮಹಿಳಾಮ ಘಟಕದ ಉಪಾಧ್ಯಕ್ಷರಾದ ಶ್ರೀಮತಿ ಆಶಾ ಕಲ್ಲಪ್ಪ, ಶ್ರೀಮತಿ ಉಷಾ ಮಂಜುನಾಥ್, ಶ್ರೀಮತಿ ಶೈಲ ಕಲ್ಲೇಶ್, ಶ್ರೀಮತಿ ಶಶಿಕಲಾ ಶರಣಯ್ಯ, ಕುಮಾರಿ ಕಲಾವತಿ, ನೀಲಮ್ಮ, ತೇಜಸ್ವಿನಿ ಸೇರಿದಂತೆ ಇತರರು ಭಾಗವಹಿಸಿದ್ದರು. ಈ ಸಮಯದಲ್ಲಿ ಸುಮಾರು 50ಕ್ಕೂ ಹೆಚ್ಚು ಮುತ್ತೈದೆ ಮಹಿಳೆಯರಿಗೆ ಬಾಗಿನವನ್ನು ನೀಡಲಾಯಿತು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment