ಬೆಂಗಳೂರು: ವಿಧಾನಸಭಾ ಚುನಾವಣೆ ಹತ್ತಿರವಾಗುತ್ತಿರುವಾಗಲೇ ಕೆಲವೊಂದು ರಾಜಕೀಯ ಅಪ್ಡೇಟ್ ಗಳು ನಡೆಯುತ್ತಿವೆ. ಪಕ್ಷದಲ್ಲಿ ಕೆಲವೊಂದು ಬದಲಾವಣೆಗಳು ನಡೆಯುತ್ತಿವೆ. ಅದರಲ್ಲಿ ಪಕ್ಷಾಂತರ ಪರ್ವವೂ ಸ್ವಲ್ಪ ಜಾಸ್ತಿಯೇ ಇದೆ. ಈಗ ಜೆಡಿಎಸ್ ನಿಂದ ಕಾಂಗ್ರೆಸ್ ನತ್ತ ಮುಖ ಮಾಡಿದ್ದಾರೆ ಗೀತಾ ಶಿವರಾಜ್ ಕುಮಾರ್.
ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ನೇತೃತ್ವದಲ್ಲಿ ನಾಳೆಯೇ ಕಾಂಗ್ರೆಸ್ ಸೇರಲಿದ್ದಾರೆ. ಈಗಾಗಲೇ ಗೀತಾ ಶಿವರಾಜ್ಕುಮಾರ್ ಅವರ ಸಹೋದರ ಮಧು ಬಂಗಾರಪ್ಪ ಕಾಂಗ್ರೆಸ್ ನಲ್ಲಿಯೇ ಇದ್ದಾರೆ. ಮೊದಲಿನಿಂದಲೂ ಕಾಂಗ್ರೆಸ್ ಗೆ ಬನ್ನಿ ಎಂದು ಕೇಳಿದ್ದರು, ಗೀತಾ ಅವರು ಕೇಳಿರಲಿಲ್ಲ. ಆದರೆ ಇದೀಗ ಕಂಗ್ರೆಸ್ ಸೇರ್ಪಡೆ ಅಧಿಕೃತಗೊಳಿಸಿದ್ದಾರೆ.
ಜೆಡಿಎಸ್ ನಲ್ಲಿದ್ದಾಗ ಕಳೆದ ಬಾರಿ, ಶಿವಮೊಗ್ಗದಿಂದ ಸ್ಪರ್ಧಿಸಿದ್ದ ಗೀತಾ ಸ್ಪರ್ಧಿಸಿ, ಸೋಲು ಕಂಡಿದ್ದರು. ಇದೀಗ ಚುನಾವಣೆಯ ಸಂದರ್ಭದಲ್ಲಿ ಜೆಡಿಎಸ್ ಗೆ ಶಾಕ್ ನೀಡಿದ್ದಾರೆ. ಕಾಂಗ್ರೆಸ್ ಸೇರುವ ಮೂಲಕ ಸಹೋದರ ಮಧು ಬಂಗಾರಪ್ಪ ಅವರಿಗೆ ಪ್ರಚಾರದಲ್ಲಿ ಸಹಾಯ ಮಾಡಲಿದ್ದಾರೆ.
ಈ ಹಿಂದೆಯೇ ಮಧು ಬಂಗಾರಪ್ಪ ಅವರ ಪರವಾಗಿ ಪ್ರಚಾರ ಮಾಡುತ್ತೀನಿ ಅಂತ ಹೇಳಿದ್ರು. ಈಗ ಕಾಂಗ್ರೆಸ್ ಸೇರ್ಪಡೆಯಿಂದಾಗಿ, ಕಾಂಗ್ರೆಸ್ ಗೂ ಸ್ಟಾರ್ ವ್ಯಾಲ್ಯೂ ಹೆಚ್ಚಾಗಬಹುದು. ಹಿಂದುಳಿದ ವರ್ಗದ ಅಧ್ಯಕ್ಷರಾಗಿರುವ ಕಾರಣ, ಅವರ ಮತಗಳನ್ನು ಸೆಳಯಲು ಗೀತಾ ಶಿವರಾಜ್ ಕುಮಾರ್ ಅವರ ಪ್ರಚಾರ ಸಹಾಯವಾಗಬಹುದು.